Ganja Seizure
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ – 8 ಲಕ್ಷ ಮೌಲ್ಯದ 10 ಕೆಜಿ ಗಾಂಜಾ ವಶ
ಬ್ರಹ್ಮಾವರ : ಬ್ರಹ್ಮಾವರ ತಾಲೂಕಿನ ಉಪ್ಪೂರು- ಕೆಜಿ ರೋಡ್ ಸಮೀಪ ಕಾರ್ಯಾಚರಣೆ ನಡೆಸಿರುವ ಪೊಲೀಸರು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.
ಸತ್ಯರಾಜ್ ತಂಬಿ ಅಣ್ಣ(32) ಕೃಷ್ಣ (43) ಉಪ್ಪೂರು, ಶಕಿಲೇಶ್(25) ಬಂಧಿತರು.ಸೆನ್ ಠಾಣಾ ನಿರೀಕ್ಷಕ ರಾಮಚಂದ್ರ ನಾಯಕ್ ತಂಡವು ಈ ಕಾರ್ಯಾಚರಣೆ ನಡೆಸಿದ್ದು ಬಂಧಿತರಿಂದ ಸುಮಾರು 8 ಲಕ್ಷ ಮೌಲ್ಯದ 10 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.ಗಾಂಜಾ ಮಾರಲು ಹೊಂಚು ಹಾಕುತ್ತಿದ್ದ ಆರೋಪಿಗಳಿಂದ ಮೂರು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇದರ ಹಿಂದಿರುವ ಇನ್ನಷ್ಟು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಉಡುಪಿ : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ಜಬ್ಬಾರ್ ಬಂಧಿತ ಆರೋಪಿ.
ಪೆರಂಪಳ್ಳಿಯ ಬಳಿ ಆರೋಪಿಯು ಸ್ಕೂಟರ್ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಬೆನ್ನಿಗೆ ಹಾಕುವ ಚೀಲದಲ್ಲಿ ಮಾರಾಟ ಮಾಡಲು ನಿಂತಿದ್ದ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ಕಾನೂನು ಬಾಹಿರವಾಗಿ ಮಾರಾಟ ಮಾಡಲು ಹೊಂದಿದ್ದ 2.344 ಕೆ.ಜಿ. ತೂಕದ ಗಾಂಜಾ, ಮೊಬೈಲ್ ಪೋನ್, ಗಾಂಜಾವನ್ನು ಸಾಗಾಟ ಮಾಡಲು ಬಳಸಿದ್ದ ಬ್ಯಾಗ್, ಪ್ಲಾಸ್ಟಿಕ್ ಕವರ್, ತೂಕದ ಯಂತ್ರ, ಚೂರಿ, 5810 ರೂ. ಮತ್ತು ಗಾಂಜಾ ಸಾಗಾಟಕ್ಕೆ ಬಳಸಿರುವ ಸ್ಕೂಟರ್ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯು ಅಕ್ರಮ್ ಭಟ್ಕಳ ಎಂಬಾತನಿಂದ ಗಾಂಜಾ ಖರೀದಿಸಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮಂಗಳೂರು : ನಗರದಲ್ಲಿ ಗಾಂಜಾವನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ ಆತನಿಂದ 4 ಕೆಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಅಬುತಾಹಿರ್ ಯಾನೆ ಅನ್ವರ್(25) ಬಂಧಿತ ವ್ಯಕ್ತಿ.
ಈತ ಮಂಗಳೂರು ನಗರದಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದನು. ಈ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಪರಿಸರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಾಗಾಟ, ಮಾರಾಟ ಮಾಡುತ್ತಿದ್ದನು.
ಈತನ ವಶದಿಂದ 1 ಲಕ್ಷ ರೂ ಮೌಲ್ಯದ ನಾಲ್ಕು ಕೆಜಿ ಗಾಂಜಾ, ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ಹೊಂಡಾ ಆಕ್ಟಿವಾ ದ್ವಿಚಕ್ರ ವಾಹನ, ಹಾಗೂ ಮೊಬೈಲ್ ಫೋನ್ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 1,75,000/-ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಗಾಂಜಾ ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ನರೇಂದ್ರ, ಎಎಸ್ಐ ಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಸುಜನ್ ಶೆಟ್ಟಿ, ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
ಒರಿಸ್ಸಾದಿಂದ ಮಂಗಳೂರಿಗೆ 8.650 ಕೆಜಿ ಗಾಂಜಾ ಸಾಗಿಸಿ ಮಾರಾಟಕ್ಕೆ ಯತ್ನ – ಇಬ್ಬರು ಅರೆಸ್ಟ್
ಮಂಗಳೂರು : ಒರಿಸ್ಸಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 8.650 ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಒರಿಸ್ಸಾ ರಾಜ್ಯದ ಗಜಪತಿ ಜಿಲ್ಲೆ, ಕಿರ್ಟಿಂಗ್ ನ್ಯೂ ಸ್ಟ್ರೀಟ್, ಪಿಂಡಿಕ್ಕಿ ಗ್ರಾಮದ ನಿವಾಸಿ ಬುಲುಬಿರೊ(24), ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನಿವಾಸಿ ದಿಲ್ ದಾರ್ ಆಲಿ(28) ಬಂಧಿತ ಆರೋಪಿಗಳು.
ಆರೋಪಿಗಳು ಒರಿಸ್ಸದಲ್ಲಿ ಗಾಂಜಾ ಖರೀದಿಸಿ ಮಂಗಳೂರಿಗೆ ಸಾಗಿಸಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರು ಖಚಿತ ಮಾಹಿತಿ ಪಡೆದಿದ್ದಾರೆ. ಇವರು ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರುತ್ತಿದ್ದ ಸಂದರ್ಭ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರಿಂದ 2,60,000 ರೂ. ಮೌಲ್ಯದ 8.650 ಕೆಜಿ ಗಾಂಜಾ, 2 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 3 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.