ಕಾಪು : ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಕೇಂದ್ರ ಸರಕಾರಕ್ಕೆ ಸಿಆರ್ಎಫ್ ನಿಧಿಯ 6 ಕೋಟಿ ರೂಪಾಯಿ ಮತ್ತು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಗೆ 7 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮಳೆಯ ಕಾರಣಕ್ಕೆ ತೀರಾ ಹದಗೆಟ್ಟು ಹೋಗಿದ್ದ ರಸ್ತೆಯನ್ನು ನಾಲ್ಕೈದು ಬಾರಿ ರಿಪೇರಿ ಮಾಡಿಸಲಾಗಿತ್ತು. ಕೇಂದ್ರ ಸರಕಾರದ ಸಿ.ಆರ್.ಎಫ್ (CRF) ನಿಧಿಯಿಂದ 6 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 7 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿದ್ದು ಅನುಮೋದನೆ ಬಾಕಿ ಇದೆ. ಕೂಡಲೇ ರಸ್ತೆ ಮರು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ತಿಳಿಸಿದ್ದಾರೆ.