ಉಡುಪಿ : ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕಛೇರಿ ಸೇವಕ ಹಾಗೂ ಲೆದರ್ ವರ್ಕರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಛೇರಿ ಸೇವಕ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹಾಗೂ ಲೆದರ್ ವರ್ಕರ್ ಹುದ್ದೆಗೆ ಸರ್ಟಿಫಿಕೇಟ್ ಇನ್ ಲೆದರ್ ವರ್ಕಿಂಗ್ ಇನ್ ಶೂ ಮೇಕಿಂಗ್ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೇ 7ರ ಒಳಗಾಗಿ ಸದಸ್ಯ ಕಾರ್ಯದರ್ಶಿಯವರು, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತಿಯ ರೆಡ್ ಕ್ರಾಸ್ ಸಂಸ್ಥೆ, ರೆಡ್ ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 0820-2533372, ಮೊ.ನಂ: 9964583433 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.