ಉಡುಪಿ : ಎಂ.ಆರ್.ಜಿ ಗ್ರೂಪ್ ಅಧ್ಯಕ್ಷರಾದ ಡಾ. ಬಂಜಾರ ಪ್ರಕಾಶ್ ಶೆಟ್ಟಿ, ಮಂಗಳೂರು ನಿಟ್ಟೆ ವಿಶ್ವವಿದ್ಯಾನಿಲಯ ಸಹ ಕುಲಾಧಿಪತಿಗಳಾದ ಡಾ. ಎಂ ಶಾಂತಾರಾಮ್ ಶೆಟ್ಟಿ, ಮಣಿಪಾಲ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್ ಬಲ್ಲಾಳ್, ಮಸ್ಕತ್ ಮಲ್ಟಿಟೆಚ್ ಗ್ರೂಪ್ ಸಂಸ್ಥಾಪಕರಾದ ದಿವಾಕರ್ ಶೆಟ್ಟಿ, ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಡಾ ಪ್ರಶಾಂತ್ ಶೆಟ್ಟಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
Gurme Suresh Shetty
ಕಟಪಾಡಿ – ಶಿರ್ವ ರಸ್ತೆ ದುರಸ್ತಿಗೆ 13 ಕೋ. ಪ್ರಸ್ತಾವನೆ ಸಲ್ಲಿಕೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಕಾಪು : ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಕೇಂದ್ರ ಸರಕಾರಕ್ಕೆ ಸಿಆರ್ಎಫ್ ನಿಧಿಯ 6 ಕೋಟಿ ರೂಪಾಯಿ ಮತ್ತು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಗೆ 7 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮಳೆಯ ಕಾರಣಕ್ಕೆ ತೀರಾ ಹದಗೆಟ್ಟು ಹೋಗಿದ್ದ ರಸ್ತೆಯನ್ನು ನಾಲ್ಕೈದು ಬಾರಿ ರಿಪೇರಿ ಮಾಡಿಸಲಾಗಿತ್ತು. ಕೇಂದ್ರ ಸರಕಾರದ ಸಿ.ಆರ್.ಎಫ್ (CRF) ನಿಧಿಯಿಂದ 6 ಕೋಟಿ ಅನುದಾನ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 7 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿದ್ದು ಅನುಮೋದನೆ ಬಾಕಿ ಇದೆ. ಕೂಡಲೇ ರಸ್ತೆ ಮರು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ತಿಳಿಸಿದ್ದಾರೆ.
ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಉಡುಪಿಗೆ; ‘ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ’ದಲ್ಲಿ ಭಾಗಿ: ಕಿಶೋರ್ ಕುಮಾರ್ ಕುಂದಾಪುರ
ಉಡುಪಿ : ಅ.21ರಂದು ನಡೆಯಲಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿಗಳ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ‘ಜನಪ್ರತಿನಿಧಿಗಳ ಸಮಾವೇಶ’ವು ನಾಳೆ ಅ.15 ಮಂಗಳವಾರ ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿ-ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ.
ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಡಾ| ಧನಂಜಯ ಸರ್ಜಿ ಹಾಗೂ ಪಕ್ಷದ ಪ್ರಮುಖರು, ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಅಪೇಕ್ಷಿತರು ಪಾಲ್ಗೊಳ್ಳಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾದ ಕಾರು : ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ
ಕಾಪು : ಉದ್ಯಾವರ ಸೇತುವೆ ಹತ್ತಿರದ ಡೈವರ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಏರಿದ ಪರಿಣಾಮ ಪ್ರಯಾಣಿಕರಿಗೆ ಗಾಯವಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಉದ್ಯಾವರದ ಖಾಸಗಿ ಶೋರೂಂ ಮುಂಭಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ, ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ಈ ಸಂದರ್ಭದಲ್ಲಿ ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಗಾಯಾಳುಗಳ ಸಹಾಯಕ್ಕೆ ಧಾವಿಸಿ ಸಮಾಜ ಸೇವಕ ನಿತ್ಯಾನಂದ ಒಳಕಾಡುವ ಅವರ ಸಹಾಯದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದರು.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬಾರ್ಕೂರು : ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸದಸ್ಯತ್ವ ಅಭಿಯಾನ ಅಂಗವಾಗಿ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷರಾದ ಧೀರಜ್ ಮುನಿರಾಜು ಅವರ ಉಪಸ್ಥಿತಿಯಲ್ಲಿ ಇಂದು ಬಾರ್ಕೂರು ಸಂಕಮ್ಮತಾಯಿ ಸಭಾಭವನದಲ್ಲಿ “ವಿದ್ಯಾರ್ಥಿಗಳು ಹಾಗೂ ಯುವಕರೊಂದಿಗೆ ಸಂವಾದ” ಕಾರ್ಯಕ್ರಮದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಶೆಟ್ಟಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ, ಕುಂದಾಪುರ ಮಂಡಲ ಅಧ್ಯಕ್ಷರು, ಯುವ ಮೋರ್ಚಾದ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಪು : ಕಾಪು ಮಂಡಲ ಬಿಜೆಪಿ ವತಿಯಿಂದ “ಸೇವಾ ಪಾಕ್ಷಿಕ”ದ ಅಂಗವಾಗಿ ಇಂದು ಕಾಪು ಪೇಟೆಯಲ್ಲಿ “ಸ್ವಚ್ಛತಾ ಕಾರ್ಯಕ್ರಮ” ವನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ನೀತಾ ಗುರುರಾಜ್ ಹಾಗೂ ಕಾಪು ಪುರಸಭಾ ಸದಸ್ಯರು, ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ “ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ” ಕಾರ್ಯಕ್ರಮ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಕಾರ್ಯದರ್ಶಿಗಳಾದ ಕೇಸರಿ ಯುವರಾಜ್, ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಉಪಾಧ್ಯಕ್ಷರಾದ ಪ್ರಕಾಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂ ಯುವಸೇನೆ ಹಿರಿಯಡಕ ನೇತೃತ್ವದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ
ಹಿರಿಯಡಕ : ಹಿಂದೂ ಯುವಸೇನೆ ಹಿರಿಯಡಕ ಶಾಖೆ ವತಿಯಿಂದ ರಕ್ತನಿಧಿ ವಿಭಾಗ, ಜಿಲ್ಲಾಸ್ಪತ್ರೆ ಉಡುಪಿ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.
ರಕ್ತದಾನ ಶಿಬಿರವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.
ಹಿಂದೂ ಯುವಸೇನೆ ಗೌರವಾಧ್ಯಕ್ಷ ಶೇಖರ್ ಶೆಟ್ಟಿ, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷ ಅಜಿತ್ ಕೊಡವೂರ್, ರಕ್ತನಿಧಿ ವಿಭಾಗ ಜಿಲ್ಲಾಸ್ಪತ್ರೆ ಉಡುಪಿ ಇದರ ಡಾ. ವೀಣಾ ಕುಮಾರಿ, ಹಿಂದೂ ಯುವ ಸೇನೆ ನಗರ ಅಧ್ಯಕ್ಷ ಸುನಿಲ್ ನೇಜಾರ್, ಸಲಹಾ ಸಮಿತಿಯ ಸನತ್ ಸಾಲ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಂದರ್, ಹಿಂದೂ ಯುವಸೇನೆ ಹಿರಿಯಡ್ಕ ಶಾಖೆ ಅಧ್ಯಕ್ಷ ಅಶೋಕ್ ಶೆಟ್ಟಿ, ಉದ್ಯಮಿ ಅಮರನಾಥ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಪಂಚ ಬಿಜೆಪಿ ಶಾಸಕರ ಸುದ್ದಿಗೋಷ್ಠಿ : ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದ್ರೆ ಸಿಎಂ ಮನೆ ಮುಂದೆ ಧರಣಿ ಎಚ್ಚರಿಕೆ
ಉಡುಪಿ : ಉಡುಪಿಯಲ್ಲಿ ಇವತ್ತು ಉಡುಪಿ ಜಿಲ್ಲೆಯ ಐವರು ಬಿಜೆಪಿ ಶಾಸಕರು ಸುದ್ದಿಗೋಷ್ಟಿ ನಡೆಸಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸರಕಾರ ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದೆ. ಇದೇ ಪ್ರವೃತ್ತಿ ಮುಂದುವರೆಸಿದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಹೊಟೇಲ್ ಕಿದಿಯೂರು ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ಕಳೆದ ಜುಲೈನಿಂದ ಈತನಕ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಯಾವುದೇ ಅನುದಾನಗಳು ಬಂದಿಲ್ಲ. ಜಿಲ್ಲೆಯಲ್ಲಿ ವ್ಯಾಪಕ ಮಳೆಹಾನಿ ಸಂಭವಿಸಿದೆ. ಈ ವರ್ಷದ ಮಳೆಗಾಲದಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ. ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ಸಂಬಂಧಪಟ್ಟ ಮಂತ್ರಿಗಳನ್ನು ಭೇಟಿಯಾಗಿದ್ದೇವೆ. ಆದರೆ ಹಣ ಬಿಡುಗಡೆಯಾಗಿಲ್ಲ ಎಂದು ಆರೋಪ ಮಾಡಿದರು. ರಾಜ್ಯ ಸರ್ಕಾರ ಇದೇ ಪ್ರವೃತ್ತಿ ಮುಂದುವರಿಸಿದರೆ ಕರಾವಳಿ ಜಿಲ್ಲೆಗಳ ಶಾಸಕರು ಮುಖ್ಯಮಂತ್ರಿ ಮನೆ ಎದುರು ಧರಣಿ ನಡೆಸುತ್ತೇವೆ ಎಂದು ಸುನಿಲ್ ಕುಮಾರ್ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗರ್ಮೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಉಪಸ್ಥಿತರಿದ್ದರು.
ಶಿರ್ವ ಭಾಗದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಪೂರ್ವಭಾವಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವದ ನೋಂದಣಿ ಅಭಿಯಾನದ ಕುರಿತು ಶಿರ್ವ ಭಾಗದ ಕಾರ್ಯಕರ್ತರೊಂದಿಗೆ ಇಂದು ದಿನಾಂಕ 12-09-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಶಿರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್ ರಾವ್, ಶಕ್ತಿ ಕೇಂದ್ರದ ಪ್ರಮುಖರಾದ ರಾಜೇಶ್ ನಾಯಕ್, ರವೀಂದ್ರ ಪಾಟ್ಕರ್, ಸಂತೋಷ್ ಶೆಟ್ಟಿ, ರಾಜೇಶ್ ಶೆಟ್ಟಿ, ಶಿರ್ವ ಭಾಗದ ಸದಸ್ಯತ್ವ ನೋಂದಣಿ ಅಭಿಯಾನ ಸಂಚಾಲಕರಾದ ಪ್ರಸಾದ್ ಶೆಟ್ಟಿ ಕುತ್ಯಾರು, ಜಿಲ್ಲಾ ಬಿಜೆಪಿಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಹಾಗೂ ಪ್ರವೀಣ್ ಸಾಲ್ಯಾನ್ ಮತ್ತು ಪಕ್ಷದ ಹಿರಿಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.