ಕುಂದಾಪುರ : ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಒಟ್ಟು ಐವರು ಯೋಧರು ಮೃತಪಟ್ಟು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಇದರಲ್ಲಿ ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಕೂಡ ಸೇರಿದ್ದಾರೆ. ಅನೂಪ್, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬಿಜಾಡಿಯವರು. ಅನೂಪ್ ಕಳೆದ 13 ವರ್ಷಗಳಿಂದ ಸೈನ್ಯದಲ್ಲಿದ್ದಾರೆ.
ಎರಡು ವರ್ಷದ ಪುಟ್ಟ ಮಗುವಿನ ತಂದೆಯಾಗಿರುವ ಅನೂಪ್ ಕುಟುಂಬಕ್ಕೆ ಸಾವಿನ ಬಗ್ಗೆ ಈಗಷ್ಟೇ ಮಾಹಿತಿ ಲಭಿಸಿದೆ. ಇದೀಗ ಅವರ ಮನೆಯ ಬಳಿ ಸಾಕಷ್ಟು ಜನ ಜಮಾಯಿಸುತ್ತಿದ್ದು ಕುಟುಂಬದಲ್ಲಿ ಶೋಕ ಆವರಿಸಿದೆ.

