ಉಡುಪಿ : ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿ (CRIF) ಯಿಂದ 6 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಇದರ ಗುದ್ದಲಿ ಪೂಜೆಯನ್ನು ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಉಪಾಧ್ಯಕ್ಷೆ ಸುಗುಣಾ ಪೂಜಾರ್ತಿ, ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.