ಉಡುಪಿ : ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹತಾಶೆಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ನಡೆದುಕೊಳ್ಳುತ್ತಿರುವ ಮಾಜಿ ಶಾಸಕರು ಕೆಲ ಹಿಂದೂ ವಿರೋಧಿ ಶಕ್ತಿಗಳ ಆಟಕ್ಕೆ ಗೊಂಬೆಯಂತೆ ಕುಣಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅಖಂಡ ಹಿಂದೂರಾಷ್ಟ್ರದ ಕಲ್ಪನೆಗೆ ಮಗ್ಗಲ ಮುಳ್ಳಾಗಿರುವ ಗೋ ಭಕ್ಷಕರನ್ನು ದೇವಸ್ಥಾನದ ಪ್ರಾಂಗಣದೊಳಕ್ಕೆ ಕರೆಸಿ ದೇವಸ್ಥಾನದ ಪಾವಿತ್ರ್ಯ ತೆಯನ್ನು ಅಶುದ್ದಿ ಗೊಳಿಸಿರುವಿರಿ. ಹಿಂದೂ ಸಮಾಜದ ಬೆಂಬಲದಿಂದಲೇ ಮೂರು ಬಾರಿ ವಿಧಾನಸಭೆ ಪ್ರವೇಶಿಸಿದ ತಾವು ಅಧಿಕಾರದಲಿದ್ದಾಗ ಹಿಂದೂ ಫೈರ್ ಬ್ರಾಂಡ್ ತರ ನಡೆದುಕೊಳ್ಳುತ್ತಿದ್ದ ತಾವು ಇತ್ತೀಚಿನ ದಿನಗಳ ನಿಮ್ಮ ಕಾರ್ಯವೈಖರಿ ಅನುಮಾನ ಹುಟ್ಟಿಸುವಂತಿದೆ. ಇನ್ನಾದರೂ ಬುದ್ಧಿಕಲಿತು ವೆಂಕಟರಮಣನ ಶಾಪಕ್ಕೆ ತುತ್ತಾಗದೆ ದೇವಸ್ಥಾನ ಶುದ್ಧೀಕರಿಸಿ ಹಿಂದೂ ಸಮಾಜದ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳಿ ಎಂದು ಶ್ರೀರಾಮಸೇನೆ ಉಡುಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಪೂಜಾರಿ ಆಗ್ರಹಿಸಿದ್ದಾರೆ.
Hindu Community
ಲವ್ ಜಿಹಾದ್ : ‘ಸಮೀರ್’ ಎಂಬಾತನಿಗೆ ಶಿಕ್ಷೆ ನೀಡಿ ಎಂದು ಬರೆದ ಪತ್ರ ಕಾಣಿಕೆ ಹುಂಡಿಯಲ್ಲಿ ಪತ್ತೆ…!!
ಪುತ್ತೂರು : ದೇಶಾದ್ಯಂತ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪುತ್ತೂರಿನಲ್ಲಿ ಹೊಸ ಘಟನೆಯೊಂದು ಬೆಳಕಿಗೆ ಬಂದಿದೆ. ಪುತ್ತೂರಿನ ಪ್ರಸಿದ್ಧ ಮಹಾಲಿಂಗೇಶ್ವರ ದೇವಾಲಯದ ಕಾಣಿಕೆ ಹುಂಡಿ ತೆರೆಯುವ ಸಂದರ್ಭ ಲವ್ ಜಿಹಾದ್ ಬಲೆಗೆ ಬಿದ್ದ ಯುವತಿಯೋರ್ವಳು ದೇವರಿಗೆ ಬರೆದ ಪತ್ರವೊಂದು ಸಿಕ್ಕಿದ್ದು ಹೊಸ ಸಂಚಲನ ಸೃಷ್ಟಿ ಮಾಡಿದೆ.
ಕಾಣಿಕೆ ಹುಂಡಿ ಲೆಕ್ಕಾಚಾರದ ವೇಳೆ ಸಿಕ್ಕಿದ ಚೀಟಿಯಲ್ಲಿ “ಸಮೀರ್ ಅನ್ನುವವನು ನನ್ನ ಜೀವನ ಹಾಳು ಮಾಡಿದ್ದಾನೆ. ಇವತ್ತು ನಾನು ನನ್ನ ಮಗಳು ಬೀದಿಯಲ್ಲಿ ಇದ್ದೇವೆ.. ಅವನ ಜೀವನ ಕೂಡ ಹಾಳಗಬೇಕು. ಅವನಿಗೆ ಮದುವೆಯಾಗಲು ಹುಡುಗಿ ಸಿಗಬಾರದು – ಓ ದೇವರೆ ಇದು ನನ್ನ ಪ್ರಾರ್ಥನೆ” ಎಂದು ಬರೆಯಲಾಗಿದೆ.
ಇತಿಹಾಸ ಪ್ರಸಿದ್ಧವಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಅನೇಕ ಕಾರಣಿಕದ ಸಂಗತಿಯನ್ನು ಒಳಗೊಂಡಿದ್ದು, ಹತ್ತೂರ ಒಡೆಯನಲ್ಲಿ ತಮ್ಮ ಮನದಾಳದ ಮಾತನ್ನು ಚೀಟಿ ಮೂಲಕ ತಿಳಿಸಿದ್ದಾರೆ. ಸದ್ಯ ಈ ಪ್ರಕರಣದ ಮೂಲಕ ಮತ್ತೊಂದು ಲವ್ ಜಿಹಾದ್ ಘಟನೆ ಬೆಳಕಿಗೆ ಬಂದಂತಾಗಿದೆ. ಈ ಪತ್ರದ ವಿಷಯ ತಿಳಿದು ಪುತ್ತೂರಿನ ಹಿಂದೂ ಸಮಾಜ, ದೇವರೇ ನ್ಯಾಯ ಒದಗಿಸಲಿ ಎಂದು ಮನವಿ ಮಾಡಿದೆ.
ಉಡುಪಿ : ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜತೆಗೆ ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಅರುಣ್ ಉಳ್ಳಾಲ ಅವರ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ.
ಉಳ್ಳಾಲ ತಾಲೂಕಿನ ಕಿನ್ಯ ಬೆಳರಿಂಗೆಯ ಕೇಶವ ಶಿಶುಮಂದಿರದಲ್ಲಿ ನವದಂಪತಿಗಳ ಸಮಾವೇಶದಲ್ಲಿ ಹಿಂದೂ ವಿಚಾರ ಪದ್ಧತಿಗಳ ಮತ್ತು ಕೌಟುಂಬಿಕ ಸಂಗತಿಗಳ ಬಗ್ಗೆ ಬೋಧನೆ ಮಾಡುತ್ತ, ಹಿಂದೂ ಸಮಾಜದ ಮಕ್ಕಳು ಹಿಂದೂ ಸಂಸ್ಕೃತಿಯ ಸಂಸ್ಕಾರ ನೀಡುವ ಶಾಲೆಗಳಿಗೆ ಹೋದರೆ ಒಳ್ಳೆಯದು ಎನ್ನುವ ಅಭಿಪ್ರಾಯ ವ್ಯಕ್ತಪಡಿಸುವುದನ್ನು ನೆಪ ಮಾಡಿಕೊಂಡು ಅವರ ಮೇಲೆ ಕೇಸು ದಾಖಲಿಸಲಾಗಿದೆ. ಹಿಂದೂ ಸಂಸ್ಕೃತಿ ಬಗ್ಗೆ ಮಾತನಾಡಿದ ಉಪನ್ಯಾಸಕರ ಮೇಲೆ ಕೇಸು ದಾಖಲು ಮಾಡುವ ಮೂಲಕ, ಸರಕಾರ ಕೂಡ ಸಮಾಜದಲ್ಲಿ ಅಶಾಂತಿ, ಅಸಮಾನತೆಗೆ ಪ್ರೋತ್ಸಾಹಿಸುವವರ ಪರ ನಿಂತಿರುವುದು ಇದರಿಂದ ಸ್ಪಷ್ಟವಾಗಿದೆ, ದಾಖಲಿಸಿಕೊಂಡ ಕೇಸ್ ಅನ್ನು ತಕ್ಷಣವೇ ವಾಪಸ್ ತೆಗೆದುಕೊಳ್ಳಬೇಕು.
ಮಂಗಳೂರು ಪೊಲೀಸರು ಸ್ವಯಂ ಪ್ರೇರಿತ ಕೇಸನ್ನು ದಾಖಲಿಸುವ ಮೂಲಕ ರಾಜ್ಯ ಸರಕಾರಕ್ಕೆ ಖುಷಿ ಪಡಿಸುವ ಉದ್ದೇಶ ಹೊಂದಿದೆ. ಈ ಹಿಂದೆ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ರಾಜ್ಯಪಾಲರನ್ನು ಬಾಂಗ್ಲಾ ಮಾದರಿಯಲ್ಲಿ ಓಡಿಸುತ್ತೇವೆ, ರಾಜಭವನಕ್ಕೆ ನುಗ್ಗುತ್ತೇವೆ ಎಂದು ಹೇಳಿಕೆ ಕೊಟ್ಟರೂ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳದೆ, ಈಗ ಹಿಂದೂ ಧರ್ಮದ ಬಗ್ಗೆ ಮಾತನಾಡುವವರ ಬಗ್ಗೆ ಕೇಸು ದಾಖಲಿಸಲು ತೋರಿಸುವ ಆಸಕ್ತಿ, ಹಿಂದೂಗಳನ್ನು ಗುರಿಯಾಗಿಸಿಕೊಂಡು ನಿರಂತರ ಕೇಸು ದಾಖಲಿಸುತ್ತಿರುವ ಹಿಂದೂ ವಿರೋಧಿ ರಾಜ್ಯ ಸರ್ಕಾರಕ್ಕೆ ನನ್ನ ದಿಕ್ಕಾರವಿದೆ. ಡಾ ಅರುಣ್ ಉಳ್ಳಾಲ ಅವರ ಮೇಲೆ ಕೇಸು ದಾಖಲಿಸಿದನ್ನು ಬಲವಾಗಿ ಖಂಡಿಸುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಶೈಲೇಂದ್ರ ಕಾರ್ಕಳ ಅವರು ತಿಳಿಸಿದ್ದಾರೆ.
ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ : ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ; ಪೇಜಾವರ ಶ್ರೀ
ಉಡುಪಿ : ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕೃತಕ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ.
ಪ್ರಾಣಿಜನ್ಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರ ಪ್ರತಿಕ್ರಿಯೆ ನೀಡಿದ್ದಾರೆ.
ಅಯೋಧ್ಯೆಯಿಂದ ಹೇಳಿಕೆ ನೀಡಿರುವ ಪೇಜಾವರ ಶ್ರೀಗಳು, ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ. ಇದು ದೇವರಿಗೆ ಬಗೆದಿರುವ ಅಪಚಾರ. ಸರಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ. ತಿರುಪತಿಯ ಶ್ರೀನಿವಾಸ ದೇವರು, ಗೋವಿನ ರಕ್ಷಣೆಗೆ ಅವತರಿಸಿದವ. ಹಸುವನ್ನು ರಕ್ಷಿಸಿದವ ಶ್ರೀನಿವಾಸ ಅನ್ನೋದು ಇತಿಹಾಸ. ಅಂತಹ ಶ್ರೀನಿವಾಸ ದೇವರಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ. ಇದೊಂದು ಅಪರಾಧವಾಗಿದೆ. ಹಿಂದುಗಳ ಧಾರ್ಮಿಕ ಶ್ರದ್ಧೆಯ ಮೇಲಿನ ಹಲ್ಲೆ ಇದು. ಮನೆಗಳಲ್ಲಿ ಕೂಡ ಇಂತಹ ತುಪ್ಪ ಬಳಸುವುದಿಲ್ಲ. ಧಾರ್ಮಿಕ ಶ್ರದ್ಧಾ ಕೇಂದ್ರಗಳು, ಸರಕಾರದ ಹಿಡಿತದಲ್ಲಿ ಇರಬಾರದು. ಶ್ರದ್ಧಾ ಕೇಂದ್ರಗಳು ಹಿಂದೂ ಸಮಾಜದ ಕೈಯಲ್ಲಿರಬೇಕು. ಸರ್ವೋಚ್ಚ ನ್ಯಾಯಾಲಯದ ತೀರ್ಪು ಕೂಡ ಇದನ್ನೇ ಹೇಳಿದೆ. ತಡ ಮಾಡದೆ ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ, ಹಿಂದೂಗಳ ಸಂಸ್ಥೆಗೆ ತಿರುಪತಿ ದೇವಾಲಯದ ಆಡಳಿತ ನೀಡಿ ಎಂದು ಒತ್ತಾಯ ಮಾಡಿದ್ದಾರೆ.
ವಿಶ್ವ ಹಿಂದೂ ಪರಿಷತ್ ಷಷ್ಠಿಪೂರ್ತಿ ಸಂಭ್ರಮ – ಹಿಂದೂ ಸಮಾವೇಶ, ಸಮ್ಮೇಳನ ಸಹಿತ ವಿವಿಧ ಕಾರ್ಯಕ್ರಮಗಳ ಆಯೋಜನೆ
ಮಂಗಳೂರು : “ಭಾರತೀಯ ಧರ್ಮ, ಸಂಸ್ಕೃತಿ ಹಿಂದೂ ಜೀವನ ಮೌಲ್ಯಗಳು, ನಂಬಿಕೆ ಮತ್ತು ಸ್ವಾಭಿಮಾನವನ್ನು ರಕ್ಷಿಸಲು ಪ್ರಾರಂಭಗೊಂಡ ವಿಶ್ವದ ಅತೀ ದೊಡ್ಡ ಸಂಘಟನೆ ವಿಶ್ವ ಹಿಂದೂ ಪರಿಷತ್. 1964 ಆಗಸ್ಟ್ 29ರಂದು ಮುಂಬೈಯ ಸಾಂದೀಪಿನಿ ಆಶ್ರಮದಲ್ಲಿ ಪ್ರಾರಂಭಗೊಂಡ ವಿಶ್ವ ಹಿಂದೂ ಪರಿಷತ್ತಿಗೆ ಈ ವರ್ಷ ಷಷ್ಠಿಪೂರ್ತಿ ಸಂಭ್ರಮ. ಕಳೆದ 60 ವರ್ಷಗಳಲ್ಲಿ ಜಗತ್ತಿನ ಹಿಂದುಗಳನ್ನು ಸಂಘಟಿಸುವ ಕಾರ್ಯದೊಂದಿಗೆ ಹಿಂದೂ ಧರ್ಮದ ಆಚರಣೆ, ಪ್ರಚಾರ, ರಕ್ಷಣೆಯ ಉದ್ದೇಶವನ್ನು ಇಟ್ಟುಕೊಂಡು, ಕೆಲಸಕಾರ್ಯಗಳನ್ನು ಮಾಡುತ್ತ ಬಂದಿದೆ“ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದರು.
”ಭಾರತ ಮಾತ್ರವಲ್ಲದೆ ಅಮೇರಿಕ, ಕೆನಡಾ, ಆಫ್ರಿಕಾ, ಇಂಗ್ಲೆಂಡ್, ಹಂಗೇರಿ, ಜರ್ಮನಿ, ಫ್ರಾನ್ಸ್, ಕಿನ್ಯ, ಫಿಜಿ, ಶ್ರೀಲಂಕಾ, ಇಂಡೋನೇಷ್ಯಾ, ಮಾರಿಷಸ್, ಥಾಯ್ಲಾಂಡ್, ಮಲೇಷಿಯಾ, ಜಪಾನ್ ಸೇರಿದಂತೆ 50 ಕ್ಕೂ ಹೆಚ್ಚು ದೇಶಗಳಲ್ಲಿ ವಿಶ್ವ ಹಿಂದೂ ಪರಿಷತ್ತಿನ ಕಾರ್ಯ ನಡೆಯುತ್ತಿದೆ. ಮೊದಲನೆಯ ರಾಷ್ಟ್ರೀಯ ಅಧ್ಯಕ್ಷರಾದ ಮೈಸೂರಿನ ಮಹಾರಾಜರಾದ ಜಯಚಾಮರಾಜ ಒಡೆಯರ್ ಇವರ ನೇತೃತ್ವದೊಂದಿಗೆ ದೇಶದಲ್ಲಿ ವಿವಿಧ ಮತಪಂಥಗಳ ಪೂಜ್ಯ ಸಾಧು ಸಂತರು, ಧರ್ಮಾಚಾರ್ಯರು, ಧಾರ್ಮಿಕ ರಾಷ್ಟ್ರೀಯ ಚಿಂತಕರು, ವಿದ್ವಾಂಸರು ಒಳಗೊಂಡ ಮಾರ್ಗದರ್ಶಕ ಮಂಡಳಿಯ ಮಾರ್ಗದರ್ಶನದ ಮೂಲಕ ಪ್ರಾರಂಭಗೊಂಡ ವಿಶ್ವ ಹಿಂದೂ ಪರಿಷದ್ ಹಲವಾರು ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಅದನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ, ಇದೀಗ ನಮ್ಮ ದೇಶದ ಸುಮಾರು 90 ಸಾವಿರಕ್ಕೂ ಹೆಚ್ಚು ಸ್ಥಾನಗಳಲ್ಲಿ ವಿಶ್ವ ಹಿಂದೂ ಪರಿಷತ್ ಸಮಿತಿಗಳ ಮೂಲಕ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದೆ. ಗೋವುಗಳ ರಕ್ಷಣೆಯ ಜೊತೆಗೆ ಪಾಲನೆಯನ್ನು ಮಾಡಿಕೊಂಡು ಬರುತ್ತಿದೆ. ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಆಂದೋಲನ, ಅಮರನಾಥ, ರಾಮಸೇತು, ತಿರುಪತಿ ಉಳಿಸಿ ಆಂದೋಲನ, ಕರ್ನಾಟಕದ ಪವಿತ್ರ ಕ್ಷೇತ್ರ ದತ್ತಪೀಠದ ಮುಕ್ತಿಗೋಸ್ಕರ ಹೋರಾಟವನ್ನು ಕೈಗೆತ್ತಿಕೊಂಡು ಶ್ರದ್ಧಾಕೇಂದ್ರಗಳನ್ನು ಉಳಿಸುವುದರಲ್ಲಿ ಯಶಸ್ವಿಯಾಗಿದೆ. ಬಜರಂಗದಳ, ದುರ್ಗಾವಾಹಿನಿ ಮುಖಾಂತರ ಯುವಕ ಯುವತಿಯರಲ್ಲಿ ರಾಷ್ಟ್ರ ಭಕ್ತಿಯನ್ನು ಮೂಡಿಸಿ, ಅವರನ್ನು ರಾಷ್ಟ್ರರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸುವಂತೆ ಮಾಡಿದೆ. ಮಾತೃಶಕ್ತಿ ಮೂಲಕ ಮಹಿಳಾಕಾರ್ಯ, ಬಾಲಸಂಸ್ಕಾರ, ಸತ್ಸಂಗಗಳ ಮೂಲಕ ಸಂಸ್ಕಾರ ಕೇಂದ್ರಗಳು ಪ್ರಾರಂಭಗೊಂಡಿದೆ“ ಎಂದವರು ಹೇಳಿದರು.
ಬಳಿಕ ಮಾತಾಡಿದ ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್ ಅವರು, ”ಷಷ್ಠಿಪೂರ್ತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ ಸೆಪ್ಟೆಂಬರ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 21 ಪ್ರಖಂಡಗಳಲ್ಲಿ ಹಿಂದೂ ಸಮಾವೇಶ, ಸಮ್ಮೇಳನ, ಶೋಭಾಯಾತ್ರೆ ಮೆರವಣಿಗೆ, ಕ್ರೀಡಾಕೂಟಗಳು, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಬಾಂಧವರು ಪಾಲ್ಗೊಳ್ಳುವ ನಿರೀಕ್ಷೆಯಿದೆ“ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಹೆಚ್.ಕೆ.ಪುರುಷೋತ್ತಮ್, ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಪುನೀತ್ ಅತ್ತಾವರ, ಭುಜಂಗ ಕುಲಾಲ್, ಗುರುಪ್ರಸಾದ್ ಉಳ್ಳಾಲ್, ರವಿ ಕಡೆಗೋಳಿ ಮತ್ತಿತರರು ಉಪಸ್ಥಿತರಿದ್ದರು.
ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಕಳವಳಕಾರಿ – ಪೇಜಾವರ ಶ್ರೀ
ಉಡುಪಿ : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕಂಡು ತುಂಬ ಖೇದವಾಗಿದೆ. ಇಡೀ ಹಿಂದೂ ಸಮಾಜ ಜಾಗೃತವಾಗಬೇಕು ಮತ್ತು ವಿಶ್ವಶಾಂತಿಗಾಗಿ ದೇವರಿಗೆ ಮೊರೆಯಿಡುವುದಷ್ಟೆ ನಮ್ಮ ಮುಂದಿರುವ ಆಯ್ಕೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ವಿಡಿಯೋ ಮೂಲಕ ಕಳವಳ ವ್ಯಕ್ತಪಡಿಸಿರುವ ಶ್ರೀಪಾದರು, ನಮ್ಮ ದೇಶದಲ್ಲಿರುವ ಎಲ್ಲ ಹಿಂದೂಗಳು ಕೂಡ ಅತ್ಯಂತ ಕಳವಳ ಪಡಬೇಕಾದ ಸ್ಥಿತಿಯಿದು. ಇವತ್ತು ಪಕ್ಕದ ದೇಶದಲ್ಲಿ ಅಷ್ಟೆ ಅಲ್ಲದೆ ಸ್ವದೇಶದಲ್ಲೂ ಹಿಂದೂಗಳ ಮೇಲಿನ ಆಕ್ರಮಣ ಅತಿಯಾಗಿದೆ. ಅದರ ವಿರುದ್ಧ ಸೊಲ್ಲೆತ್ತುವವರನ್ನು ಕೂಡ ದಮನಿಸುವ ಪ್ರವೃತ್ತಿಯನ್ನು ಕಾಣುತ್ತಿದ್ದೇವೆ.ಈ ನೆಲೆಯಲ್ಲಿ ಸಮಾಜದ ಎಲ್ಲರೂ ಜಾಗೃತರಾಬೇಕು. ಸರಕಾರವನ್ನು ಕೂಡ ಆಶ್ರಯಿಸುವ ಹಂತದಲ್ಲಿಲ್ಲ. ದೇವರಿಗೆ ಶರಣಾಗಿ ಸಮಾಜ, ದೇಶ, ವಿಶ್ವದಲ್ಲಿ ಶಾಂತಿ, ಸುಭಿಕ್ಷೆ ನೆಲೆಸುವಂತೆ ಬೇಡೋಣ ಎಂದು ಅವರು ಕರೆ ಕೊಟ್ಟಿದ್ದಾರೆ.
ಉಡುಪಿ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದಲ್ಲಿ ಬೃಹತ್ ಮಾನವ ಸರಪಣಿ ನಡೆಸಲಾಯಿತು.
ಹಿಂದೂ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಮಾನವ ಸರಪಣಿ ಮೂಲಕ ಪ್ರತಿಭಟನೆ ದಾಖಲಿಸಲಾಯಿತು. ಮಾನವ ಸರಪಣಿ ನಿರ್ಮಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು, ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಅಂತರಾಷ್ಟ್ರೀಯ ಮೌನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ಬಾಂಗ್ಲಾದಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ರಾಷ್ಟೀಯವಾದಿ ಭಾರತೀಯರು ಒಕ್ಕೊರಲಿನಿಂದ ಖಂಡಿಸಬೇಕು. ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. ಉಡುಪಿ-ಮಣಿಪಾಲ ರಸ್ತೆಯಲ್ಲಿ ನಡೆದ ಮಾನವ ಸರಪಣಿಯಲ್ಲಿ ಹಿಂದೂ ಸಂಘಟನೆಗಳ ಜೊತೆಗೆ ಬಿಜೆಪಿ ಕಾರ್ಯಕರ್ತರು ಭಾಗಿಯಾದರು. ಕೈಯಲ್ಲಿ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.
ಬಾಂಗ್ಲಾ ಹಿಂದೂಗಳ ಮೇಲಿನ ಮುಸ್ಲಿಂ ಮೂಲಭೂತವಾದಿಗಳ ದೌರ್ಜನ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ : ಯಶ್ಪಾಲ್ ಸುವರ್ಣ
ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮುಸ್ಲಿಂ ಮತೀಯವಾದಿಗಳು ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ರಾಷ್ಟೀಯವಾದಿ ಭಾರತೀಯರು ಒಕ್ಕೊರಲಿನಿಂದ ಖಂಡಿಸುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ, ಹಿಂದೂ ಧರ್ಮೀಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಾ ಹಿಂದೂ ವಿರೋಧಿ ನೀತಿ ನಡೆಸುತ್ತಿರುವ ಮತಾಂಧ ಶಕ್ತಿಗಳ ವಿರುದ್ಧ ಬಾಂಗ್ಲಾ ಸರಕಾರ ತಕ್ಷಣ ಕಠಿಣ ಕ್ರಮಕೈಗೊಂಡು ಹಿಂದೂಗಳ ರಕ್ಷಣೆಗೆ ಕಾರ್ಯಪ್ರವೃತ್ತರಾಗಬೇಕು.
ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಚಿಕ್ಕ ಘಟನೆ ನಡೆದ ಕೂಡಲೇ ಬೀದಿಗಿಳಿಯುವ ಎಡಪಂಥೀಯ, ಜಾತ್ಯತೀತ ಮುಖವಾಡ ತೊಟ್ಟ ಬುದ್ಧಿಜೀವಿಗಳು, ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಚಕಾರ ಎತ್ತುತ್ತಿಲ್ಲ. ಹಿಂದೂಗಳ ಮೇಲಿನ ದಾಳಿಯ ಬಗ್ಗೆ ದಿವ್ಯ ಮೌನ ವಹಿಸುವ ಮೂಲಕ ಪ್ರಗತಿಪರರು ಐಸಿಸ್ ಮನಸ್ಥಿತಿಯ ಮತೀಯ ಶಕ್ತಿಗಳಿಗೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ.
ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಈಗಾಗಲೇ ಕಾರ್ಯಪ್ರವೃತ್ತವಾಗಿದ್ದು, ಹಿಂದೂಗಳ ವಿರುದ್ದ ದಾಳಿ ಮಾಡುತ್ತಿರುವ ಮತೀಯ ಶಕ್ತಿಗಳಿಗೆ ತಕ್ಕ ಉತ್ತರ ನೀಡಬೇಕಾದ ಅನಿವಾರ್ಯ ಸನ್ನಿವೇಶ ನಿರ್ಮಾಣವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸಕ್ಕೆ ಮುಂದಾಗಬೇಡಿ : ಯಶ್ ಪಾಲ್ ಸುವರ್ಣ ಆಕ್ರೋಶ
ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿ ಹುದ್ದೆಯಲ್ಲಿರುವ ರಾಹುಲ್ ಗಾಂಧಿ ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುತ್ವ, ರಾಷ್ಟೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿಯವರನ್ನು ಅವಹೇಳನ ಮಾಡುವ ಮೂಲಕ ತಮ್ಮ ನೈತಿಕ ಅಧಃಪತನವನ್ನು ಜಗಜ್ಜಾಹೀರು ಮಾಡಿದ್ದು, ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುವ ದುಸ್ಸಾಹಸಕ್ಕೆ ಮುಂದಾಗಬೇಡಿ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ ಧರ್ಮಕ್ಕೆ ಪ್ರೀತಿ ಸಹೋದರತೆಯ ಪಾಠ ಮಾಡುವ ಮೊದಲು ಅಂದು 5 ಲಕ್ಷ ಕಾಶ್ಮೀರಿ ಹಿಂದೂಗಳನ್ನು ಓಡಿಸಿದವರು, ಅಮಾಯಕ ಕನಯ್ಯಲಾಲ್ನನ್ನು ಹತ್ಯೆ ಮಾಡಿದವರು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರು, ಡಿಜೆಹಳ್ಳಿ, ಕೆಜೆಹಳ್ಳಿಯಲ್ಲಿ ದಲಿತನ ಮನೆ ಪೊಲೀಸ್ ಠಾಣೆಗೆ ಬೆಂಕಿ ಇಟ್ಟವರು, ಪಿಎಫ್ಐ ಜೊತೆ ಸೇರಿ ಭಯೋತ್ಪಾದನೆ ಮಾಡಿ ದೇಶದ್ರೋಹ ಮಾಡಿದವರು, ಉಡುಪಿ ಶಾಲೆಯಲ್ಲಿ ಹಿಜಾಬ್ ವಿವಾದ ಸೃಷ್ಟಿಸಿ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತಂದವರು ಯಾರು ಎಂಬುದನ್ನು ಕೂಡಾ ಲೋಕಸಭೆಯಲ್ಲಿ ಹೇಳುವ ಧೈರ್ಯ ರಾಹುಲ್ ಗಾಂಧಿಗೆ ಇದೆಯೇ ಎಂದು ಹೇಳಿದ್ದಾರೆ.
ಹಿಂದೂ ಧರ್ಮಕ್ಕೆ ಹಿಂಸೆಯ ಬಣ್ಣ ಬಳಿಯುವ ಮೂಲಕ ಸನಾತನ ಹಿಂದೂ ಧರ್ಮಕ್ಕೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ. 49 ಸೀಟುಗಳು ಕೊಟ್ಟಾಗ ಹಿಂದುತ್ವ ಕೆಟ್ಟದು ಹಿಂದುಗಳು ಒಳ್ಳೆಯವರು ಎಂದಿದ್ದ ಯಾವಾಗ 99 ಸೀಟುಗಳು ಸಿಕ್ಕಿದ ಕೂಡಲೇ ಈಗ ಹಿಂದೂಗಳೇ ಹಿಂಸೆ ಮಾಡುವವರು ಎನ್ನುವ ಮೂಲಕ ತಮ್ಮ ಹಿಂದೂ ವಿರೋಧಿ ನಿಲುವನ್ನು ಪ್ರದರ್ಶಿಸಿದ್ದಾರೆ. ಜಾಗೃತ ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರವನ್ನು ನೀಡುವ ಅನಿವಾರ್ಯತೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೋಳಿಯಾರ್ ಚೂರಿ ಇರಿತ ಪ್ರಕರಣ; ಜೂನ್ 18ರಂದು ಬೃಹತ್ ಜನಾಂದೋಲನ ಜನಜಾಗೃತಿ ಸಭೆ : ಹಿಂಜಾವೇ ಕರೆ
ಬೊಳಿಯಾರ್ ಹಿಂದು ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣವನ್ನು ಖಂಡಿಸಿ ಜೂನ್ 18ರ ಮಂಗಳವಾರದಂದು ಮಧ್ಯಾಹ್ನ 3.30 ಕ್ಕೆ ಸರಿಯಾಗಿ ಅಸೈಗೋಳಿ ಮೈದಾನದಲ್ಲಿ ಹಿಂದು ಜನಜಾಗೃತಿ ಸಮಿತಿ ಉಳ್ಳಾಲ ತಾಲೂಕು ಇದರ ನೇತೃತ್ವದಲ್ಲಿ ಬೃಹತ್ ಜನಾಂದೋಲನ ಜನಜಾಗೃತಿ ಸಭೆ ನಡೆಯಲಿದೆ. ಹಿಂದು ಸಮಾಜ ಬೃಹತ್ ಸಂಖ್ಯೆಯಲ್ಲಿ ಅಸೈಗೊಳಿಯಲ್ಲಿ ಜಾಗೃತಿಯಾಗುವಂತೆ ಹಿಂ.ಜಾ.ವೇ.ಕರೆ ನೀಡಿದೆ.