ಉಡುಪಿ : ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ಬಾಂಗ್ಲಾದಲ್ಲಿ ಬಂಧಿಸಲಾಗಿದ್ದು ಆದಷ್ಟು ಬೇಗ ಅವರನ್ನು ಬಂಧಮುಕ್ತಗೊಳಿಸಬೇಕು ಎಂದು ಪೇಜಾವರ ಶ್ರೀಗಳು ಕೇಂದ್ರ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಇಸ್ಕಾನ್ ಸಂಸ್ಥೆ ಮುಖ್ಯಸ್ಥರನ್ನು ರಾಜದ್ರೋಹದ ಆರೋಪದಲ್ಲಿ ಬಂಧಿಸಲಾಗಿದೆ. ಅವರ ಎಲ್ಲ ಸೌಲಭ್ಯಗಳನ್ನು ನಿಷೇಧಿಸಲಾಗಿದೆ. ಇದು ಅತ್ಯಂತ ಕಠೋರವಾದ ವಿಚಾರ, ಇದನ್ನು ಖಂಡಿಸುತ್ತೇವೆ. ಬಹುಬೇಗ ಅವರನ್ನು ವಿಮುಕ್ತಗೊಳಿಸಬೇಕು. ಬಾಂಗ್ಲಾದೇಶಕ್ಕೆ ಅವರು ಮತ್ತು ಇಸ್ಕಾನ್ ಸಲ್ಲಿಸಿರುವ ಕೊಡುಗೆ ಅತ್ಯಪೂರ್ವ. ಹಸಿದವರಿಗೆ ಕಷ್ಟಕಾಲದಲ್ಲಿ ಅನ್ನ ಕೊಟ್ಟ ಸಂಸ್ಥೆ ಇಸ್ಕಾನ್. ಈ ಬಗ್ಗೆ ಬಾಂಗ್ಲಾದೇಶ ಅವರಿಗೆ ಕೃತಜ್ಞರಾಗಿರಬೇಕು. ಕೇಂದ್ರ ಸರ್ಕಾರ ಮುತುವರ್ಜಿ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.