ಉಡುಪಿ : ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹತಾಶೆಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ನಡೆದುಕೊಳ್ಳುತ್ತಿರುವ ಮಾಜಿ ಶಾಸಕರು ಕೆಲ ಹಿಂದೂ ವಿರೋಧಿ ಶಕ್ತಿಗಳ ಆಟಕ್ಕೆ ಗೊಂಬೆಯಂತೆ ಕುಣಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅಖಂಡ ಹಿಂದೂರಾಷ್ಟ್ರದ ಕಲ್ಪನೆಗೆ ಮಗ್ಗಲ ಮುಳ್ಳಾಗಿರುವ ಗೋ ಭಕ್ಷಕರನ್ನು ದೇವಸ್ಥಾನದ ಪ್ರಾಂಗಣದೊಳಕ್ಕೆ ಕರೆಸಿ ದೇವಸ್ಥಾನದ ಪಾವಿತ್ರ್ಯ ತೆಯನ್ನು ಅಶುದ್ದಿ ಗೊಳಿಸಿರುವಿರಿ. ಹಿಂದೂ ಸಮಾಜದ ಬೆಂಬಲದಿಂದಲೇ ಮೂರು ಬಾರಿ ವಿಧಾನಸಭೆ ಪ್ರವೇಶಿಸಿದ ತಾವು ಅಧಿಕಾರದಲಿದ್ದಾಗ ಹಿಂದೂ ಫೈರ್ ಬ್ರಾಂಡ್ ತರ ನಡೆದುಕೊಳ್ಳುತ್ತಿದ್ದ ತಾವು ಇತ್ತೀಚಿನ ದಿನಗಳ ನಿಮ್ಮ ಕಾರ್ಯವೈಖರಿ ಅನುಮಾನ ಹುಟ್ಟಿಸುವಂತಿದೆ. ಇನ್ನಾದರೂ ಬುದ್ಧಿಕಲಿತು ವೆಂಕಟರಮಣನ ಶಾಪಕ್ಕೆ ತುತ್ತಾಗದೆ ದೇವಸ್ಥಾನ ಶುದ್ಧೀಕರಿಸಿ ಹಿಂದೂ ಸಮಾಜದ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳಿ ಎಂದು ಶ್ರೀರಾಮಸೇನೆ ಉಡುಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಪೂಜಾರಿ ಆಗ್ರಹಿಸಿದ್ದಾರೆ.
Indian Politics
ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ರಕ್ತದಾನ ಮಾಡುವ ಮೂಲಕ ಆಚರಿಸಿಕೊಂಡಿದೆ.
ಪಿವಿಎಸ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಕ್ತದಾನ ಮಾಡಿದ ಬಳಿಕ ಮಾತನಾಡಿದ ಸಂಸದರು, ಪ್ರಧಾನಿ ನರೇಂದ್ರ ಮೋದಿ ಜೀ ಅವರು ಯುವ ನಾಯಕತ್ವದ ಮೇಲೆ ವಿಶ್ವಾಸವಿರಿಸಿಕೊಂಡವರು. ಇಂದು ಯುವಮೋರ್ಚಾ ಕಾರ್ಯಕರ್ತರ ಈ ಸಮಾಜಮುಖಿ ಕಾರ್ಯಕ್ರಮವು ನಿಜಕ್ಕೂ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸುವ ಕಾರ್ಯವಾಗಿದೆ ಎಂದು ಶುಭ ಹಾರೈಸಿದರು.
ಬಳಿಕ ಮಾತನಾಡಿದ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆಗೆ 74 ಯೂನಿಟ್ ರಕ್ತ ಸಂಹ್ರಹಿಸಿ ನೀಡಲಾಗಿದೆ. ಶ್ರೀ ನರೇಂದ್ರ ಮೋದಿ ಅವರು ತಮ್ಮ ಜೀವನವನ್ನು ರಾಷ್ಟ್ರದ ಉನ್ನತಿಗಾಗಿ ಮುಡಿಪಾಗಿಟ್ಟಿದ್ದಾರೆ. ದೇಶದ ತೀರಾ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಿರಂತರವಾಗಿ ವಿಶೇಷವಾಗಿ ಕೊಡುಗೆ ನೀಡುವ ಮೂಲಕ ಮಾದರಿ ಆಡಳಿತ ನೀಡುತಿದ್ದಾರೆ. ಆ ನಿಟ್ಟಿನಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ಅವರ ಜನ್ಮ ದಿನವನ್ನು ಸಾಮಾಜಿಕ ಸೇವೆಯ ಮೂಲಕ ಆಚರಿಸಲು ರ್ಕದಾನ ಹಮ್ಮಿಕೊಂಡಿದ್ದೇವೆ. ಜನರಿಗೆ ಅವಶ್ಯಕವಾದ ರಕ್ತದಾನದ ಮಹತ್ವವನ್ನು ತಿಳಿಸಿಕೊಡಲು ಇದು ಉತ್ತಮ ಮಾರ್ಗವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ, ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಮುರಳಿ ಕೊಣಾಜೆ, ನಿತೇಶ್ ಕಲ್ಲೇಗ, ಶಿಶಿರ್ ಪೆರುವಾಡಿ, ಅಶ್ವಿತ್ ಕೊಟ್ಟಾರಿ, ಕುಮಾರ್ ಪ್ರಸಾದ್, ಉಮೇಶ್ ಕುಲಾಲ್, ನಿಶಾನ್ ಪೂಜಾರಿ, ವರುಣ್ ಅಂಬಟ, ಅವಿನಾಶ್ ಸುವರ್ಣ, ನವೀನ್ ರಾಜ್, ಸಾಕ್ಷಾತ್ ಶೆಟ್ಟಿ, ಬಿಜೆಪಿ ಜಿಲ್ಲಾ ನಾಯಕರು, ಮಂಡಲ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ನವದೆಹಲಿ : ಬಿಜೆಪಿಯು ಲೋಕಸಭೆಯ ಮುಖ್ಯ ಮತ್ತು ಸಚೇತಕರನ್ನು ನೇಮಕ ಮಾಡಿದೆ. ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಜನರನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಅವರು ಇಂದು(ಜುಲೈ 29) ಆದೇಶ ಹೊರಡಿಸಿದ್ದಾರೆ. ಡಾ ಸಂಜಯ್ ಜೈಸ್ವಾಲ್ ಅವರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿದ್ದರೆ, ಇನ್ನುಳಿದ 16 ಜನರನ್ನು ಸಚೇತಕರನ್ನಾಗಿ ನೇಮಿಸಲಾಗಿದೆ. ಇನ್ನು ಈ 16 ಜನರ ಸಚೇತಕರ ಪೈಕಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಾನ ಸಿಕ್ಕಿದೆ. ಈ ಮೂಲಕ ಕೋಟ ಶ್ರೀನಿವಾಸ್ ಪೂಜಾರಿ ಅವರು ರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ಹಂತ ಮೇಲಕ್ಕೆ ಹೋಗಿದ್ದಾರೆ.
ಇನ್ನು ತಮ್ಮನ್ನು ಸಚೇತಕರನ್ನಾಗಿ ನೇಮಕ ಮಾಡಿದ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟ ಶ್ರೀನಿವಾಸ್ ಪೂಜಾರಿ ಅವರು ಧನ್ಯವಾದ ತಿಳಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಈ ಹಿಂದೆ ವಿಧಾನಪರಿಷತ್ಗೆ ಆಯ್ಕೆಯಾಗಿ ವಿಪಕ್ಷ ನಾಯಕರಾಗಿದ್ದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಹೈಕಮಾಂಡ್ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ನೀಡಿತ್ತು. ಅದರಂತೆ ಕೋಟ ಶ್ರೀನಿವಾಸ್ ಪೂಜಾರಿ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಇದೀಗ ಇವರನ್ನು ಪಕ್ಷದ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಇತರೆ ನಾಯಕರು ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಅಭಿನಂದನೆಗಳು. ರಾಜ್ಯದಲ್ಲಿ ಸಚಿವರಾಗಿ, ವಿಧಾನ ಪರಿಷತ್ ವಿರೋಧಪಕ್ಷ ನಾಯಕರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಹಾಗೂ ಪಕ್ಷ ಸಂಘಟನೆಗೂ ಅನನ್ಯ ಕೊಡುಗೆ ನೀಡಿರುವ ಶ್ರೀನಿವಾಸ್ ಪೂಜಾರಿ ಅವರು ಲೋಕಸಭೆಯ ಸಚೇತಕರಾಗಿಯು ಉತ್ತಮವಾಗಿ ಜವಾಬ್ದಾರಿ ನಿರ್ವಹಿಸುವರೆಂಬ ವಿಶ್ವಾಸದೊಂದಿಗೆ ಶುಭ ಹಾರೈಸುವೆ ಎಂದು ಬರೆದುಕೊಂಡಿದ್ದಾರೆ.
ರಾಹುಲ್ ಗಾಂಧಿ ಕುರಿತು ಪ್ರಚೋದನಕಾರಿ ಹೇಳಿಕೆ : ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು
ಬೆಂಗಳೂರು : ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಿರೀಕ್ಷಣಾ ಜಾಮೀನು ಕೋರಿ ಭರತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ, ಆದೇಶ ನೀಡಿದೆ.
ಕಾಂಗ್ರೆಸ್ ಕಾರ್ಯಕರ್ತ ಅನಿಲ್ ಕುಮಾರ್ ನೀಡಿದ ದೂರಿನ ಮೇರೆಗೆ ಶಾಸಕ ಭರತ್ ಶೆಟ್ಟಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಅವಹೇಳನಗೈದು ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜು.8ರಂದು ಕಾವೂರು ಜಂಕ್ಷನ್ನಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಭರತ್ ಶೆಟ್ಟಿ, ‘ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಪಾರ್ಲಿಮೆಂಟ್ನಿಂದ ದೂಡಿ ಹೊರಗೆ ಹಾಕಬೇಕು. ರಾಹುಲ್ ಗಾಂಧಿಯ ಕೆನ್ನೆಗೆ ಎರಡು ಬಡಿಯಬೇಕು ಎಂದು ಅನಿಸುತ್ತದೆ. ಅವಾಗ ಮಾತ್ರ ರಾಹುಲ್ ಗಾಂಧಿಗೆ ಬುದ್ಧಿ ಬರುತ್ತದೆʼ ಎಂದು ಹೇಳುವ ಮೂಲಕ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತ ಅನಿಲ್ ಒತ್ತಾಯಿಸಿದ್ದರು.
ಮತಾಂಧ ಶಕ್ತಿಗಳ ಓಲೈಕೆಗಾಗಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ
ಉಡುಪಿ : ಲೋಕಸಭೆಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ರಾಹುಲ್ ಗಾಂಧಿ ಹೇಳಿಕೆಯನ್ನು ಪ್ರತಿಭಟನೆಯಲ್ಲಿ ಖಂಡಿಸಿದ ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕೇಸ್ ದಾಖಲಿಸಲು ಮೀನ-ಮೇಷ ಎಣಿಸಿದ ರಾಜ್ಯ ಸರಕಾರ ಹಿಂದೂ ವಿರೋಧಿ ರಾಹುಲ್ ಗಾಂಧಿಗೆ ತಕ್ಕ ಉತ್ತರ ನೀಡಿದ ಭರತ್ ಶೆಟ್ಟಿಯವರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಮತಾಂಧ ಶಕ್ತಿಗಳ ಓಲೈಕೆಗೆ ಮುಂದಾಗಿದೆ.
ಹಿಂದುತ್ವ, ರಾಷ್ಟ್ರೀಯತೆ ವಿಚಾರದಲ್ಲಿ ಎಂದಿಗೂ ರಾಜಿಯಾಗದ ಕರಾವಳಿ ಭಾಗದ ಬಿಜೆಪಿ ಶಾಸಕರನ್ನು ದಮನಿಸುವ ಯತ್ನವನ್ನು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ನಡೆಸುತ್ತಿದ್ದು, ಈಗಾಗಲೇ ಶಾಸಕರಾದ ಹರೀಶ್ ಪೂಂಜ, ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಿಸುವ ಮೂಲಕ ನೈತಿಕ ಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಿದೆ.
ಕಾಂಗ್ರೆಸ್ ಪಕ್ಷದ ಮುಖಂಡರ ಒತ್ತಡಕ್ಕೆ ಮಣಿದು ರಾಜ್ಯ ಪೊಲೀಸ್ ಇಲಾಖೆ ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ಕಾರ್ಯನಿರ್ವಹಿಸುತ್ತಿದೆ.
ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ಕೇಸ್ಗಳನ್ನು ದಾಖಲಿಸುವ ಮೂಲಕ ಶಾಸಕರನ್ನು ನಿಯಂತ್ರಿಸುವ ವಿಫಲ ಪ್ರಯತ್ನ ಮಾಡುತ್ತಿದ್ದು ಸಮಸ್ತ ಜನತೆ ರಾಹುಲ್ ಗಾಂಧಿಯ ಹಿಂದೂ ವಿರೋಧಿ ನಿಲುವನ್ನು ಖಂಡಿಸಿದ ಭರತ್ ಶೆಟ್ಟಿಯವರ ಜೊತೆ ನಿಲ್ಲಲಿದ್ದು ಕಾಂಗ್ರೆಸ್ ಸರಕಾರದ ಒತ್ತಡ ತಂತ್ರಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ – ಶಾಸಕ ಭರತ್ ಶೆಟ್ಟಿ ಮೇಲೆ ಎಫ್ಐಆರ್
ಮಂಗಳೂರು: ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿ ಮೇಲೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸುತ್ತಿದೆ. ಅಲ್ಲದೆ ರಾಹುಲ್ ಗಾಂಧಿಯವರು ಶಿವನ ಫೋಟೊ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಎಂದು ಗೊತ್ತಿಲ್ಲವೆಂದು ಎಂದು ಏಕವಚನದಲ್ಲಿ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಸ್ಥಳೀಯ ಕಾರ್ಪೋರೇಟರ್ ಅನಿಲ್ ಕುಮಾರ್ ನೀಡಿರುವ ದೂರಿನಡಿ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಬಿಎನ್ಎಸ್ 353(3), 353 ಸೆಕ್ಷನ್ನಡಿ ಪ್ರಕರಣ ದಾಖಲಿಸಿದ್ದೇವೆ. ಮುಂದಿನ ಕ್ರಮ ಆಗಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದರು.
ರಾಹುಲ್ ಗಾಂಧಿ ಮಾತು ತನ್ನ ಅಪ್ರಬುದ್ಧತೆಯನ್ನು ತೋರಿಸುತ್ತದೆ : ಶ್ರೀನಿಧಿ ಹೆಗ್ಡೆ
ಉಡುಪಿ : ಭಾರತ ಖಂಡದ ಮೂಲ ಅಸ್ಮಿತೆಯೇ ಸನಾತನ ಸಂಸ್ಕೃತಿ, ಹಿಂದೂ ಆಚರಣೆ ಆಗಿದೆ. ಹಿಂದೂ ಭಾರತದ ಮೂಲ ತತ್ವ, ಹಿಂದೂ ಎಂದರೆ ಸಹಿಷ್ಣುತೆ, ಉದಾರತೆ ಆಗಿದೆ.
ಅನ್ಯ ಧರ್ಮದ ತುಷ್ಟೀಕರಣ ಮಾಡಲು ತಮ್ಮ ಓಟ್ ಬ್ಯಾಂಕ್ ಅನ್ನು ತೃಪ್ತಿ ಪಡಿಸಲು ಹಿಂದೂಗಳನ್ನು ಅವಹೇಳನ ಮಾಡಿ ತಾನೊಬ್ಬ ವಿರೋಧ ಪಕ್ಷದ ನಾಯಕ ಎಂಬ ಜವಾಬ್ದಾರಿಯನ್ನು ಮರೆತು ಲೋಕಸಭೆಯಲ್ಲಿ ತನ್ನ ಮೊದಲ ಬಾಷಣದಲ್ಲೇ ಹಿಂದೂಗಳು ಎಂದರೆ “ಹಿಂಸಾಚಾರ, ಅಸತ್ಯ ಮತ್ತು ದ್ವೇಷದಲ್ಲಿ” ಮುಳುಗಿರುವವರು ಎಂದು ಹೇಳಿದ್ದಾರೆ. ಈ ರೀತಿ ರಾಹುಲ್ ಗಾಂಧಿ ಮಾತನಾಡುವುದು ಮೊದಲ ಬಾರಿ ಅಲ್ಲ, ಈ ಹಿಂದೆ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಾರಂಭದಲ್ಲಿ ಮಾತನಾಡಿ, ಹಿಂದೂ ಧರ್ಮದಲ್ಲಿ ‘ಶಕ್ತಿ’ ಎಂಬ ಪದವಿದೆ. ನಾವು ಶಕ್ತಿಯ ವಿರುದ್ಧ ಹೋರಾಡುತ್ತಿದ್ದೇವೆ ಎಂದಿದ್ದರು.
ಅಷ್ಟೇ ಅಲ್ಲದೆ ತನ್ನ ಇಂಡಿ ಮೈತ್ರಿ ಕೂಟದ ನಾಯಕರು ಹಿಂದೂಗಳ ವಿರುದ್ಧ ಆಡಿರುವ ಮಾತುಗಳು ಹಲವಾರು. ಡಿಎಂಕೆಯ ಸ್ಟಾಲಿನ್, ಎಸ್ಪಿ ಹಾಗೂ ಆರ್ಜೆಡಿಯ ನಾಯಕರು ಹಾಗೂ ತಮ್ಮ ಮೈತ್ರಿಯ ಭಾಗವಾದ ಮುಸ್ಲಿಂ ಲೀಗ್ ತನ್ನ ಮೆರವಣಿಗೆಯಲ್ಲಿ ಬಹಿರಂಗವಾಗಿ ಹಿಂದೂಗಳ ಶಿರಚ್ಛೇದ ಮಾಡುತ್ತೇವೆ ಎಂದಾಗ ಕೂಡ ತುಟಿ ಬಿಚ್ಚದವರು ಕಾಂಗ್ರೆಸ್ಸ್ನಿಂದ ಇನ್ನು ಏನು ನಿರೀಕ್ಷಿಸಬಹುದು.
ನಮ್ಮ ದೇವಾನುದೇವತೆಗಳ ಒಂದು ಕೈಯಲ್ಲಿ ಶಾಸ್ತ್ರವಿದ್ದರೆ, ಇನ್ನೊಂದು ಕೈಯಲ್ಲಿ ಶಸ್ತ್ರವು ಇರುತ್ತದೆ. ಧರ್ಮವನ್ನು ಅನುಸರಿಸದಿದ್ದರೆ ಅಂದರೆ ನ್ಯಾಯ ನೀತಿ ಮೀರಿ ನಡೆದರೆ ಶಸ್ತ್ರಾಸ್ತ್ರಗಳನ್ನು ಹಿಡಿದು ಶಿಕ್ಷೆಯನ್ನು ನೀಡುವ ಉದ್ದೇಶ ನಮ್ಮ ದೇವರು ಮತ್ತು ದೇವತೆಗಳಿಗೆ ಅನಾದಿ ಕಾಲದಿಂದಲೂ ಇದೆ. ಇದೆಲ್ಲ ವಿದೇಶಿ ನೆಲದ ಸಂಸ್ಕೃತಿಯ ನೆರಳಲ್ಲಿ ಬೆಳೆದವರಿಗೆ ತಿಳಿಯದು.
ಕೋಟ್ಯಂತರ ಹಿಂದೂಗಳ ಭಾವನೆಗೆ ನೋವುಂಟು ಮಾಡಿದ ರಾಹುಲ್ ಗಾಂಧಿ ಅವರು ಕೂಡಲೇ ರಾಷ್ಟ್ರದ ಜನರಲ್ಲಿ ಕ್ಷಮೆ ಕೇಳಲಿ ಎಂದು ಬಿಜೆಪಿ ಮಾಧ್ಯಮ ವಿಭಾಗದ ಶ್ರೀನಿಧಿ ಹೆಗ್ಡೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.