Infrastructure Development

50 ಲಕ್ಷ ರೂಪಾಯಿ ಅನುದಾನದಲ್ಲಿ ಹೆಜಮಾಡಿ ಸಮುದ್ರ ತೀರದ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರಕ್ಕೆ ಸಮಾನಾಂತರ ರಸ್ತೆ ಅಭಿವೃದ್ಧಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಮೀನುಗಾರಿಕಾ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ…

Read more

ಜಿಲ್ಲೆಯಲ್ಲಿ ಸಿಎನ್‌ಜಿ ಪೂರೈಕೆಯಲ್ಲಿ ವ್ಯತ್ಯಯದ ಬಗ್ಗೆ ಸಭೆ : ಮೂಲಭೂತ ವ್ಯವಸ್ಥೆ ಮಾಡಿಕೊಳ್ಳಲು ಅದಾನಿ ಸಂಸ್ಥೆಗೆ ಕೋಟ ಸೂಚನೆ

ಉಡುಪಿ : ಅದಾನಿ ಮತ್ತು ಗೇಲ್ ಕಂಪೆನಿಗಳು ತಮ್ಮ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಂಡು, ಅದಾನಿ ಕಂಪೆನಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಜಿಲ್ಲೆಯಲ್ಲಿ ಸಿಎನ್‌ಜಿ ಅನಿಲದ ಪೂರೈಕೆಗೆ ಬೇಕಾದ ಮೂಲಭೂತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ…

Read more

ಕಟಪಾಡಿ – ಶಿರ್ವ ರಸ್ತೆ ದುರಸ್ತಿಗೆ 13 ಕೋ. ಪ್ರಸ್ತಾವನೆ ಸಲ್ಲಿಕೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು : ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ. ಕೇಂದ್ರ ಸರಕಾರಕ್ಕೆ…

Read more

ಕೇಂದ್ರದಿಂದ ಗ್ರಾಮೀಣ ವಸತಿ ಯೋಜನೆಯ 400 ಕೋಟಿ ರೂ. ಬಿಡುಗಡೆ – ಸಂಸದ ಕೋಟ

ಉಡುಪಿ : ಕೇಂದ್ರ ಸರಕಾರ, ಕರ್ನಾಟಕ ರಾಜ್ಯಕ್ಕೆ ಹಿಂದಿನ ವರ್ಷಗಳ ವಸತಿ ಯೋಜನೆಯ ಅನುಷ್ಠಾನಕ್ಕಾಗಿ ಗ್ರಾಮೀಣ ವಸತಿ ಯೋಜನೆಗೆ 400 ಕೋಟಿ ರೂ. ಹಾಗೂ ನಗರ ವಸತಿ ಯೋಜನೆಗೆ 75 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ…

Read more

ಸಂಚಾರ ವ್ಯವಸ್ಥೆ ಸುಧಾರಣೆಗೆ ಡಿವೈಡರ್‌ ನಿರ್ಮಾಣ

ಮಂಗಳೂರು : ನಗರದ ವಿವಿಧೆಡೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ಮಧ್ಯದಲ್ಲಿ ಡಿವೈಡರ್‌ ಇಲ್ಲದಿರುವ ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಬ್ಯಾರಿಕೇಡ್‌, ಟ್ರಾಫಿಕ್‌ ಕೋನ್‌ಗಳನ್ನು ತೆರವುಗೊಳಿಸಿ ಮತ್ತೆ ಶಾಶ್ವತ ಡಿವೈಡರ್‌ಗಳನ್ನು ನಿರ್ಮಿಸಲಾಗುತ್ತಿದೆ. ನಗರದಲ್ಲಿ 18 ಸ್ಥಳಗಳನ್ನು ಗುರುತಿಸಿ ಪೊಲೀಸ್‌ ಇಲಾಖೆ ವತಿಯಿಂದ ಮಹಾನಗರ…

Read more

ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದ ಟೋಲ್‌ಗೇಟ್ ರದ್ದುಪಡಿಸಿರುವುದಾಗಿ ಅಧಿಕೃತ ಆದೇಶ

ಕಾಪು : ಪಡುಬಿದ್ರಿ–ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿದ್ದ ಟೋಲ್‌ಗೇಟ್ ರದ್ದುಪಡಿಸಿರುವುದಾಗಿ ಲೋಕೋಪಯೋಗಿ ಇಲಾಖೆ ಸಚಿವರ ಕಚೇರಿಯಿಂದ ಶುಕ್ರವಾರ ಅಧಿಕೃತ ಆದೇಶ ಬಿಡುಗಡೆಯಾಗಿದೆ. ಟೋಲ್‌ಗೇಟ್ ರದ್ದುಪಡಿಸುವಂತೆ ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ ಮಾಜಿ ಸಚಿವ…

Read more

ಕಂಚಿನಡ್ಕ ಟೋಲ್ ನಿರ್ಮಾಣಕ್ಕೆ ತಾತ್ಕಾಲಿಕ ತಡೆ ನೀಡಿದ ಲೋಕೋಪಯೋಗಿ ಇಲಾಖೆ..!

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ-ಪಡುಬಿದ್ರಿ ರಸ್ತೆಯ ಕಂಚಿನಡ್ಕದಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಟೋಲ್ ಸಂಗ್ರಹ ಕೇಂದ್ರದ ಆದೇಶವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಹಿಂಪಡೆದಿದ್ದು ಸದ್ಯಕ್ಕೆ ಈ ಟೋಲ್ ಕೇಂದ್ರ ಸ್ಥಗಿತಗೊಳಿಸಲು ತೀರ್ಮಾನಿಸಿದೆ. ಟೋಲ್ ಕೇಂದ್ರಕ್ಕೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಕಾರಣ…

Read more

ಶೀಂಬ್ರ ದೇವಸ್ಥಾನದ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಸ್ಥಳಕ್ಕೆ ಶಾಸಕರ ಭೇಟಿ, ಪರಿಶೀಲನೆ

ಶೀಂಬ್ರ ದೇವಸ್ಥಾನ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಡನೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಣ್ಣ ನೀರಾವರಿ ಇಲಾಖೆ ಮೂಲಕ ಕಾಮಗಾರಿಗೆ ₹2.25 ಕೋಟಿ ಅನುದಾನ ಮಂಜೂರುಗೊಳಿಸಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿಯ…

Read more

ಬೈಂದೂರಿನಲ್ಲಿ ವಿಮಾನ ನಿಲ್ದಾಣ ಮಂಜೂರಾತಿಗೆ ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ

ಉಡುಪಿ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ವಿಮಾನ ನಿಲ್ದಾಣ ಮಂಜೂರು ಮಾಡಲು ಕೇಂದ್ರ ವಿಮಾನಯಾನ ಸಚಿವರಾದ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಸಂಸದ ಬಿ.ವೈ ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆಯವರೊಂದಿಗೆ…

Read more

ಕುಕ್ಕುಂದೂರು ಎಸಿ ಭೇಟಿ : ಹೊಸ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಗ್ರಾಮ ಪಂಚಾಯತ್‌ ನಿರ್ಧಾರ

ಕಾರ್ಕಳ : ಕುಕ್ಕುಂದೂರಿನ ಅಯ್ಯಪ್ಪನಗರದಲ್ಲಿರುವ ಅಂಗನವಾಡಿ ಕಟ್ಟಡಕ್ಕೆ ಜು. 3ರಂದು ಮರ ಬಿದ್ದು ಹಾನಿಯಾಗಿದ್ದು, ಇದೀಗ ಹೊಸ ಕಟ್ಟಡ ನಿರ್ಮಾಣಕ್ಕೆ ಕುಕ್ಕುಂದೂರು ಗ್ರಾಮ ಪಂಚಾಯತ್‌ ನಿರ್ಧರಿಸಿದೆ. ಜು. 31ರಂದು ಕುಂದಾಪುರ ಉಪವಿಭಾಗ ಸಹಾಯಕ ಆಯುಕ್ತ ಮಹೇಶ್ಚಂದ್ರ ಕೆ. ಅಯ್ಯಪ್ಪನಗರ ಅಂಗನವಾಡಿಗೆ ಭೇಟಿ…

Read more