ಉಡುಪಿ : ಶ್ರೀ ಕೃಷ್ಣಮಠಕ್ಕೆ ಖ್ಯಾತ ನಿರ್ದೇಶಕ ಶ್ರೀ ಎಸ್ ವಿ ರಾಜೇಂದ್ರಸಿಂಗ್ ಬಾಬು ಅವರು ಆಗಮಿಸಿ ದೇವರ ದರ್ಶನ ಪಡೆದು ತಾವು ಬರೆದ ಕೋಟಿಗೀತಾ ಪುಸ್ತಕವನ್ನು ಪರ್ಯಾಯ ಶ್ರೀ ಗಳಿಗೆ ಸಮರ್ಪಿಸಿ ಮಂತ್ರಾಕ್ಷತೆ ಪಡೆದುಕೊಂಡರು.

ಬ್ರಹ್ಮಾವರ : ಚಿತ್ರನಟ, ನಿರ್ದೇಶಕ ಉಪೇಂದ್ರ ತನ್ನ ಯು-ಐ ಚಿತ್ರದ ಯಶಸ್ಸಿನ ಬಳಿಕ ತನ್ನ ಹುಟ್ಟೂರು ಕುಂದಾಪುರದ ಪ್ರವಾಸ ಕೈಗೊಂಡಿದ್ದಾರೆ. ಕುಂದಾಪುರದಲ್ಲಿ ತನ್ನ ಮೂಲ ನಾಗನ ದರ್ಶನ ಕೈಗೊಂಡು ಬಳಿಕ ಆನೆಗುಡ್ಡೆಯ ಶ್ರೀ ಗಣಪತಿ ದೇವಸ್ಥಾನದಲ್ಲಿ ಪೂಜೆ ಮಾಡಿದ್ದಾರೆ.
ಬಳಿಕ ಸಾಲಿಗ್ರಾಮ ದೇವಸ್ಥಾನಕ್ಕೆ ಭೇಟಿ ನೀಡಿ, ತಮ್ಮ ಕುಲದೇವರಾದ ಶ್ರೀ ಗುರು ನರಸಿಂಹ ದೇವರಿಗೆ ಪೂಜೆಯನ್ನು ಸಲ್ಲಿಸಿದರು.
ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ ಕೆ. ಎಸ್ ಕಾರಂತರು ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು. ಜೊತೆಗೆ ದೇವಸ್ಥಾನದ ಇತಿಹಾಸವನ್ನು ಉಪೇಂದ್ರಗೆ ತಿಳಿಸಿದರು.
ಉಡುಪಿ : ಕನ್ನಡ ಚಿತ್ರರಂಗದ ‘ಕನಸಿನ ಕನ್ಯೆ’ ಮಾಲಾಶ್ರೀ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಆಗಮಿಸಿದ್ದಾರೆ. ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು.
ಮಾಲಾಶ್ರೀ ಜೊತೆ ಪುತ್ರಿ ಆರಾಧನಾ ಕೂಡ ಮಠಕ್ಕೆ ಬಂದಿದ್ದರು. ಈ ಪರ್ಯಾಯದಲ್ಲಿ ಕೋಟಿ ಬಾರಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞದೀಕ್ಷೆಯನ್ನು ಇಬ್ಬರೂ ಸ್ವೀಕರಿಸಿದರು.
ಉಳ್ಳಾಲ : ಕೊರಗಜ್ಜನ ಬಗ್ಗೆ ಕೇಳುತ್ತಾ ಬಂದಿದ್ದೇನೆ. ವಿಶೇಷ ಸ್ಥಳಕ್ಕೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರು ಶೂಟಿಂಗ್ ಇರುವ ಸಮಯದಲ್ಲಿ ಬಂದಿರುವೆನು. ಮುಂದಿನ ಪ್ರಾಜೆಕ್ಟ್ ಆಗಿ ಮಗಳಿಗಾಗಿಯೇ ಒಂದು ಚಿತ್ರ ತೆಗೀತಾ ಇದ್ದೇನೆ, ಸಿಟಿ ಲೈಫ್ಸ್ ಅನ್ನುವ ಶೀರ್ಷಿಕೆಯಡಿ ನಡೆಸುವ ಚಿತ್ರವನ್ನು ತಾನೇ ನಿರ್ದೇಶಿಸಲಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು.
ಅವರು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಶುಕ್ರವಾರ ರಾತ್ರಿ ಸಂದರ್ಶನಗೈದು ಮಾತನಾಡಿದರು.
ಕುತ್ತಾರು ಆದಿಸ್ಥಳ ಮತ್ತು ಕಲ್ಲಾಪುವಿನ ಎರಡೂ ಕ್ಷೇತ್ರಗಳಲ್ಲಿ ವೈಬ್ರೇಷನ್ ಪವರ್ ಇದೆ. ತಾನು ನಟಿಸುತ್ತಿರುವ 29ನೇ ಚಿತ್ರ, ಕಾಟೇರಾ ದ ಜಡೇಶ್ ಅವರು ನಿರ್ದೇಶಿಸುತ್ತಿದ್ದು, ಇನ್ನೂ ಚಿತ್ರದ ಹೆಸರನ್ನಿಟ್ಟಿಲ್ಲ. ಮೂರು ದಿನಗಳ ಕಾಲ ಮಂಗಳೂರಿನ ವಾಮಂಜೂರು ಸೇರಿದಂತೆ ವಿವಿದೆಡೆ ಶೂಟಿಂಗ್ ನಡೆಯುತ್ತಿದೆ. ಹಾಗಾಗಿ ಮಂಗಳೂರು ಭೇಟಿ ನೀಡಿದ್ದು, ಕೊರಗಜ್ಜನ ಬಗ್ಗೆ ದಿನಾ ಕೇಳುತ್ತಲೇ ಇದ್ದೇನೆ. ಹಾಗಾಗಿ ಭೇಟಿ ನೀಡಬೇಕೆಂಬ ಮನದಾಸೆಯಿತ್ತು. ಇಲ್ಲಿ ಬಂದು ಆಶೋತ್ತರಗಳನ್ನು ಈಡೇರಿಸುವಂತೆ ಬೇಡಿಕೊಂಡಿದ್ದೇನೆ. ತನ್ನ ಭೀಮ ಚಿತ್ರಕ್ಕೆ ಮಂಗಳೂರು ಸೇರಿದಂತೆ ರಾಜ್ಯದ ಜನತೆ ಪ್ರೀತಿ, ವಿಶ್ವಾಸ ಇಟ್ಟು ಯಶಸ್ವಿಗೊಳಿಸಿದ್ದಾರೆ. ಈ ಮೂಲಕ ಸಿನೆಮಾದ ಗೌರವ ಉಳಿಸಿದ್ದಾರೆ ಎಂದರು.
ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ ವಿಜಯ್ ಅವರನ್ನ ಸನ್ಮಾನಿಸಿ ಗೌರವಿಸಲಾಯಿತು. ಕದ್ರಿ ಈವೆಂಟ್ಸ್ನ ಸಂಚಾಲಕರಾದ ಜಗದೀಶ್ ಕದ್ರಿ, ದುನಿಯಾ ವಿಜಯ್ ಜತೆಯಲ್ಲಿದ್ದರು.
ಬುರ್ದುಗೋಳಿ ಕ್ಷೇತ್ರದ ಆಡಳಿತ ಸಮಿತಿಯ ಪುರುಷೋತ್ತಮ ಮೇಲಾಂಟ, ನವೀನ್ ಕಾಯಂಗಳ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು, ಸಂಜಯ್, ಯೋಗಿಶ್, ಜಯಶ್ರೀ ಕೊಟ್ಟಾರಿ, ದೀಕ್ಷಾ ಕುತ್ತಾರು, ವನಿತ ಗಿರೀಶ್, ಗುರು ಪ್ರಸಾದ್ ಕೊಟ್ಟಾರಿ, ಪ್ರವೀಣ್ ಕೊಲ್ಯ, ಸದಾನಂದ , ರೇಣುಕ ಮೊದಲಾದವರು ಉಪಸ್ಥಿತರಿದ್ದರು.
ಪಡುಬಿದ್ರಿ : ಸಕಲೇಶಪುರದ ಗುಡ್ಡ ಕಾಡುಗಳಲ್ಲಿ ಚಿತ್ರೀಕರಣಗೊಂಡ ದೀಪ್ನಾ ಕರ್ಕೇರ ನಿರ್ದೇಶನದ ‘ದ ಟೈಗರ್ ಕೆಫೆ’ ಚಿತ್ರದ ಪೋಸ್ಟರನ್ನು ಮೊಗವೀರ ಮುಂದಾಳು ನಾಡೋಜ ಡಾ.ಜಿ. ಶಂಕರ್ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣರವರನ್ನು ಒಡಗೂಡಿ ಅನಾವರಣಗೊಳಿಸಿ ಶುಭ ಹಾರೈಸಿದ್ದಾರೆ.
ಈ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶನ, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದ ದೀಪ್ನಾ ಕರ್ಕೇರ, ಪ್ರಮುಖವಾಗಿ ಕಾಡು ಪ್ರಾಣಿಗಳನ್ನು ಉಳಿಸಿ ಬೆಳೆಸುವ ಸಾರವನ್ನು ಪಸರಿಸುವ ಆಧಾರದ ಮೇಲೆ ಈ ಚಿತ್ರವನ್ನು ನಿರ್ಮಿಸಲಾಗಿದ್ದು, ಒಂದೇ ದಿನದಲ್ಲಿ ಚಿತ್ರೀಕರಣ ಮುಗಿಸುವ ಹಿನ್ನಲೆಯಲ್ಲಿ ನಮ್ಮ ಚಿತ್ರತಂಡ ಮುಂದಡಿ ಇಟ್ಟಿದ್ದೆವೆಯಾದರೂ, ಕೆಲವೊಂದು ತಾಂತ್ರಿಕ ಕಾರಣಗಳಿಂದ ಎರಡು ದಿನಗಳಲ್ಲಿ ಚಿತ್ರೀಕರಣ ಮುಗಿಸುವ ಮೂಲಕ ದಾಖಲೆಯೊಂದನ್ನು ಮಾಡಿದೆ. ಈ ಚಿತ್ರದಲ್ಲಿ ಖಳ ನಾಯಕನ ಪಾತ್ರವೇ ಪ್ರಮುಖವಾಗಿದೆ. ಇದರಲ್ಲಿ ಮೂರು ಹಾಡುಗಳಿದ್ದು, ಫೈಟಿಂಗ್ ಕೂಡಾ ಅಡಕವಾಗಿದೆ. ಸಕಲೇಶಪುರದ ಸುಂದರ ಗುಡ್ಡಕಾಡು ಪ್ರದೇಶದಲ್ಲಿ ಚಿತ್ರೀಕರಣಗೊಂಡ ಈ ಚಿತ್ರ ಕೆಲವೇ ತಿಂಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದರು.
ಚಿತ್ರಕ್ಕೆ ಸಾಹಸ ಬಂಡೆ ಚಂದ್ರ ಬೆಂಗಳೂರು, ಛಾಯಾಗ್ರಹಣ ಅಲನ್ ಭರತ್ ಬೆಂಗಳೂರು, ಸ್ಥಿರ ಚಿತ್ರ, ಸುರೇಶ್ ಎರ್ಮಾಳ್ ರೋಶ್ನಿ ಸ್ಟುಡಿಯೋ ಪಡುಬಿದ್ರಿ. ತಾರಾಗಣದಲ್ಲಿ ನಿಶಾನ್, ದುರ್ಗಾ ಪ್ರಸಾದ್, ಶಾಂಭವಿ ಆಚಾರ್ಯ, ಸಾಯಿನಾಥ್ ಎಂ. ಶೆಟ್ಟಿ, ನಿಹಾಲ್ ವಿ. ಕುಂದರ್, ವಿನೋದ್ ನೀರ್ಮಾರ್ಗ, ಸುರೇಶ್ ಎರ್ಮಾಳ್, ವಿಕಾಶ್ ಶೆಟ್ಟಿ, ಕಾರ್ತಿಕ್ ಎಸ್.ಸಾಲ್ಯಾನ್, ಹರೀಶ್ ಜೋಗಿ, ಚಂದ್ರಶೇಖರ ಕುಲಾಲ್, ವೈಶಾಲಿ ಎರ್ಮಾಳ್ ಮುಂತಾದವರಿದ್ದಾರೆ.
ಬಂಟ್ವಾಳ : ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಗೀತಾ ಪಿಚ್ಛರ್ಸ್ ಬ್ಯಾನರ್ ನಡಿಯಲ್ಲಿ ಗೀತಾಶಿವರಾಜ್ ಕುಮಾರ್ ಅವರ ನಿರ್ಮಾಣದ ಖ್ಯಾತ ನಟ ಶಿವರಾಜ್ ಕುಮಾರ್ ಅಭಿನಯದ ಹೊಸ ಚಲನಚಿತ್ರ “ಭೈರತಿರಣಗಲ್” ನ.15 ರಂದು ಕರ್ನಾಟಕ ರಾಜ್ಯದ್ಯಾಂತ ಏಕಕಾಲದಲ್ಲಿ ಬಿಡುಗಡೆಯಾಗಲಿದ್ದು, ಚಿತ್ರ ಯಶಸ್ವಿಯಾಗಬೇಕು ಎಂಬ ಸಂಕಲ್ಪದಿಂದ ಇಲ್ಲಿನ ವನದುರ್ಗೆ ದೇವಿಗೆ ಪತಿ ಪತ್ನಿ ಸಮೇತ ವಿಶೇಷ ಪೂಜೆ ಸಲ್ಲಿಸಿದರು.
ವನದುರ್ಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಇವರು ಅನ್ನಪ್ರಸಾದ ಸ್ವೀಕರಿಸಿ ಬಳಿಕ ಕುತ್ತಾರು ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. “ಭೈರತಿರಣಗಲ್” ಚಿತ್ರ ಕನ್ನಡ,ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ಪಂಚ ಭಾಷೆಯಲ್ಲಿ ಪ್ರದರ್ಶನವಾಗಲಿದ್ದು, ನ.15ರಂದು ಚಲನಚಿತ್ರ ತೆರೆಕಾಣಲಿದೆ. ಈಗಾಗಲೇ ಚಿತ್ರದ ಆಡಿಯೋ ರಿಲೀಸ್ ಆಗಿದ್ದು, ಇದೇ ತಿಂಗಳ ಅ.20 ರಂದು ಟೀಸರ್ ಬಿಡುಗಡೆಯಾಗಲಿದೆ.
ಇವರ ಜೊತೆ ಚಲನ ಚಿತ್ರ ನಿರ್ಮಾಪಕರುಗಳಾದ ಕೆ.ಪಿ.ಶ್ರೀನಾಥ್, ರಾಜೇಶ್ ಭಟ್, ಕೀರ್ತನ್ ಪೂಜಾರಿ, ಶಿವರಾಜ್ ಕುಮಾರ್ ಅವರ ಸಂಬಂಧಿ ನಟರಾಜ್, ಸ್ನೇಹಿತರಾದ ವಿಜಯಪ್ರಸಾದ್, ಶೇಖರ್, ವನದುರ್ಗೆ ದೇವಸ್ಥಾನದ ಆಡಳಿತ ಮೊಕ್ತೇಸರ ಪಾಂಡುರಂಗ ಪ್ರಭು, ಕೊರಗಜ್ಜ ಕ್ಷೇತ್ರದ ಆಡಳಿತ ಮೊಕ್ತೇಸರ ಪ್ರೀತಮ್ ಶೆಟ್ಟಿ, ಗಾಯಕ ಜಿತೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ನಿರ್ದೇಶಕ ಪ್ರೇಮ್ ಹಾಗೂ ಅವರ ಪತ್ನಿ ನಟಿ ರಕ್ಷಿತಾ ಪ್ರೇಮ್ ಅವರು ಗುರುವಾರ ಕುಕ್ಕೆ ಸುಬ್ರಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ತದನಂತರ ಕಾರಲ್ಲಿ ಹೊರಡುವ ಸಮಯದಲ್ಲಿ ನವರಾತ್ರಿಯ ವಿಶೇಷ ದಿನದಂದು ಕರಾವಳಿಯಲ್ಲಿ ಪ್ರಸಿದ್ಧಿ ಪಡೆದಿರುವ ಹುಲಿ ವೇಷವನ್ನು ಕಂಡು ಕಾರಿನಿಂದ ಇಳಿದರು. ತಕ್ಷಣ ಸುಬ್ರಹ್ಮಣ್ಯದ ಖ್ಯಾತ ಫೋಟೋಗ್ರಾಫರ್ ಸಂತೋಷ್ ನುಚಿಲ ಅವರು ರಕ್ಷಿತ್ ಪ್ರೇಮ್ ದಂಪತಿಗಳಿಗೆ ಹುಲಿ ವೇಷ ನರ್ತನವನ್ನು ವೀಕ್ಷಿಸಲು ವ್ಯವಸ್ಥೆ ಮಾಡಿದ್ದಾರೆ.
ಹುಲಿ ವೇಷದಾರಿಗಳ ನರ್ತನವನ್ನು ಕಂಡು ಪುಳಕಿತರಾದ ಹಾಗೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ ರಕ್ಷಿತ್ ಪ್ರೇಮ್ ದಂಪತಿಗಳು ಎಲ್ಲಾ ವೇಷಧಾರಿಗಳಿಗೆ ಶುಭಾಶಯವನ್ನು ಕೋರಿದರು.
ಕುಂದಾಪುರ : ಕಾಂತಾರ ಖ್ಯಾತಿಯ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತ ರಿಲ್ಯಾಕ್ಸ್ ಮೂಡ್ನಲ್ಲಿರುವ ಫೊಟೊ, ವಿಡಿಯೋ ವೈರಲ್ ಆಗುತ್ತಿದೆ. ಅವರು ಕುಟುಂಬ ಸದಸ್ಯರ ಜೊತೆ ಸಾಲಿಗ್ರಾಮದ ಕಯಾಕಿಂಗ್ ಪಾಯಿಂಟ್ಗೆ ಭೇಟಿ ನೀಡಿ ಎಂಜಾಯ್ ಮಾಡಿದ್ದಾರೆ.
ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಕಯಾಕಿಂಗ್ ಪಾಯಿಂಟ್ ಬಹಳ ಪ್ರಸಿದ್ಧಿ ಪಡೆದಿದೆ. ಕಯಾಕಿಂಗ್ ಸೆಂಟರ್ನಲ್ಲಿ ಕಯಾಕಿಂಗ್ ಮಾಡುತ್ತಾ, ಕಾಂಡ್ಲಾವನದಲ್ಲಿ ವಿಹಾರ ನಡೆಸಿದರು. ಪತ್ನಿ ಪ್ರಗತಿ, ಮಗ, ಮಗಳು ಮತ್ತು ಅತ್ತೆಯ ಜೊತೆಗೆ ಕಯಾಕಿಂಗ್ ನಡೆಸಿದ ನಟ, ಕೆಲಹೊತ್ತು ಇಲ್ಲಿ ಕಾಲ ಕಳೆದರು.
ಅಂದಹಾಗೆ ಅವರು ಕಾಂತಾರ ಪ್ರಿಕ್ವೇಲ್ ನಿರ್ಮಾಣದಲ್ಲಿ ಬ್ಯುಸಿಯಾಗಿದ್ದಾರೆ. ಬ್ಯುಸಿ ಶೆಡ್ಯೂಲ್ ಮಧ್ಯದಲ್ಲೇ ಕುಟುಂಬದ ಜೊತೆ ವಿಹಾರ ಮಾಡಿ ಗಮನ ಸೆಳೆದಿದ್ದಾರೆ.
ಬೆಳ್ತಂಗಡಿ : ಸ್ಯಾಂಡಲ್ವುಡ್ ನಟಿ ರಚಿತಾರಾಮ್ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ ಬಯಲು ಆಲಯ ಗಣಪನ ದರ್ಶನ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಕ್ಷೇತ್ರವು ಬಯಲು ಆಲಯದ ಕ್ಷೇತ್ರವೆಂದು ಪ್ರಸಿದ್ಧಿ ಪಡೆದ ಕ್ಷೇತ್ರವಾಗಿದೆ. ನಟಿ ರಚಿತಾರಾಮ್ ಕ್ಷೇತ್ರಕ್ಕೆ ಭೇಟಿ ನೀಡಿ, ಸೌತಡ್ಕ ಮಹಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ನಟಿ ರಚಿತಾರಾಮ್ ಅವರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಆಡಳಿತ ಮಂಡಳಿಯವರು ಗೌರವಿಸಿದ್ದಾರೆ.
ಮಂಗಳೂರು : ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ನಟ ರಿಷಬ್ ಶೆಟ್ಟಿ ಥಿಯೇಟರ್ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾಂತಾರ ಸಿನಿಮಾ ಖ್ಯಾತಿಯ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ ಕುಟುಂಬವೊಂದು ಕೊರಗಜ್ಜನನ್ನು ಆರಾಧಿಸಿಕೊಂಡು ಬರುವ ಕತೆ, ಮತ್ತು ಕುಟುಂಬ ಸಂಕಷ್ಟಕ್ಕೆ ಸಿಲುಕಿದಾಗ ಕುಟುಂಬದ ಬೆನ್ನಿಗೆ ನಿಲ್ಲುವ ಕೊರಗಜ್ಜ, ಅಧರ್ಮದಲ್ಲಿ ನಡೆಯುವವರನ್ನು ಶಿಕ್ಷಿಸುವ ಕಥೆ ರಿಷಬ್ ಶೆಟ್ಟಿ ಅವರಿಗೆ ತುಂಬಾ ಇಷ್ಟವಾಯಿತು. ಸಿನಿಮಾದ ಕ್ಯಾಮರಾ ವಕ್೯, ಹಿನ್ನಲೆ ಸಂಗೀತವನ್ನು ರಿಷಬ್ ಮೆಚ್ಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಪ್ರಗತಿ ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಶನಿಲ್ ಗುರು, ನಟ ಅರ್ಜುನ್ ಕಾಪಿಕಾಡ್, ನಿರ್ಮಾಪಕ ಶರತ್ ಕುಮಾರ್, ನಿರ್ದೇಶಕ ಸುಮನ್ ಸುವರ್ಣ, ಸಿನಿಮಾ ವಿತರಕ ಸಚಿನ್ ಉಪ್ಪಿನಂಗಡಿ, ಶ್ಲಾಘ ಸಾಲಿಗ್ರಾಮ ಉಪಸ್ಥಿತರಿದ್ದರು.
Maax News covers major news and events of Udupi district. This channel provides detailed reports on the political, social, economic, and cultural life of Udupi district.
Maax News, equipped with the most sophisticated studio in Udupi, assures people comprehensive news coverage.