Kannada Culture

“ಯಕ್ಷಗಾನ ಕಲಿಕೆಯಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ” ಸಾಲಿಗ್ರಾಮದಲ್ಲಿ ಯಕ್ಷಗಾನ ನೃತ್ಯ ಅಭಿನಯ ತರಬೇತಿ ಶಿಬಿರ ಉದ್ಘಾಟಿಸಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ : ಮಕ್ಕಳಿಗೆ ಯಕ್ಷಗಾನ ಕಲಿಸುವುದರಿಂದ ಅವರಲ್ಲಿ ವಾಕ್ಚಾತುರ್ಯ, ಅಭಿನಯ, ನೃತ್ಯ, ಪೌರಾಣಿಕ ಪ್ರಸಂಗಗಳ ಬಗ್ಗೆ ಜ್ಞಾನವುಂಟಾಗುವುದಲ್ಲದೆ ಅವರ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಯಕ್ಷಗಾನ ಕೇಂದ್ರ…

Read more

ಯಕ್ಷಗಾನ ಅಕಾಡೆಮಿ ವತಿಯಿಂದ ಗುರುಪುರದಲ್ಲಿ ಯಕ್ಷಗಾನ ಕಮ್ಮಟ

ಉಡುಪಿ : ಯಕ್ಷಗಾನ ಸಾಂಸ್ಕೃತಿಕವಾಗಿ ಸಮಾಜವನ್ನು ಒಗ್ಗೂಡಿಸುತ್ತದೆ. ಕೇವಲ ಹಿಂದೂಗಳಷ್ಟೇ ಅಲ್ಲ, ಅನ್ಯ ಧರ್ಮಿಯ ಕಲಾವಿದರು ಇಲ್ಲಿ ತೊಡಗಿಸಿಕೊಂಡಿರುವುದು ಈ ಕಲೆಯ ವೈಶಿಷ್ಟ್ಯವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಮಂಗಳೂರು…

Read more

ಕೆ. ಸುರೇಂದ್ರ ಶೆಣೈ ಅವರಿಗೆ ಯಕ್ಷಗಾನ ಕಲಾರಾಧಕ ಪ್ರಶಸ್ತಿ

ಉಡುಪಿ : ಎರಡೂವರೆ ದಶಕ ಕಾಂತಾವರ, ಪುತ್ತೂರು, ಬಪ್ಪನಾಡು, ಸುಂಕದಕಟ್ಟೆ, ಸುರತ್ಕಲ್ ಮೇಳಗಳಲ್ಲಿ ಹಾಗು ದೀರ್ಘ ಕಾಲ ಹಲವು ಸಂಘಗಳಲ್ಲಿ ಕಲಾಸೇವೆಗೖದ ತೆಂಕುತಿಟ್ಟಿನ ಹಿರಿಯ ಭಾಗವತ ಕೆ. ಸುರೇಂದ್ರ ಶೆಣೈ ದಂಪತಿಯನ್ನು ಪುರಸ್ಕರಿಸುವ ಕಾರ್ಯಕ್ರಮ ಕೆರ್ವಾಶೆ ಮಹಾಲಿಂಗೇಶ್ವರ ದೇವಳದ ಆವರಣದಲ್ಲಿ ಜರಗಿತು.…

Read more

ಕೈವಾರ ತಾತಯ್ಯನ ತತ್ವಾದರ್ಶ ಬದುಕಿಗೆ ಮಾದರಿಯಾಗಲಿ : ಸಂಸದ ಕೋಟ

ಉಡುಪಿ : ಕೈವಾರ ತಾತಯ್ಯ ತನ್ನ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶ ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್…

Read more

ಗೋವಾದಲ್ಲಿ ಮೇಳೈಸಿದ ಯಕ್ಷ ಶರಧಿ

ಉಡುಪಿ : ಯಕ್ಷಗಾನ ಕಲೆ ಕಲಿಯಲು, ಅಭ್ಯಸಿಸಲು ಯಾವುದೇ ಪ್ರಾದೇಶಿಕ ಸರಹದ್ದಿನ ಭಯವಿಲ್ಲ. ಈ ನಿಟ್ಟಿನಲ್ಲಿ ಗೋವಾದ ಕನ್ನಡ ಸಮಾಜ ಯಕ್ಷಗಾನ ಪ್ರೇಮವನ್ನು ಮೆರೆದಿರುವುದು ಅಭಿನಂದನೀಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಇತ್ತೀಚೆಗೆ ಗೋವಾ…

Read more

ಲಾವಣ್ಯ ಬೈಂದೂರು ಸಾಂಸ್ಕೃತಿಕ ರಂಗಕ್ಕೆ ನೀಡಿದ ಕೊಡುಗೆ ಅಪಾರ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ : ಮಾನವನಿಗೆ 48 ವರ್ಷಗಳು ತುಂಬಿದೆ ಎಂದರೆ ವಯಸ್ಸಾಗುತ್ತಾ ಬಂತು ಎಂದರ್ಥ ಆದರೆ ಯಾವುದೇ ಸಂಸ್ಥೆಗೆ ವಯಸ್ಸು ಹೆಚ್ಚುತ್ತಾ ಬಂದರೆ ಅದು ಯೌವ್ವನಕ್ಕೆ ಕಾಲಿಟ್ಟಿದೆ ಎಂದರ್ಥ. ಪ್ರಸ್ತುತ 48 ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಬೈಂದೂರಿನ ಲಾವಣ್ಯ ಸಂಸ್ಥೆ ಸಾಂಸ್ಕೃತಿಕ ರಂಗಕ್ಕೆ ನೀಡಿದ…

Read more

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ : ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ ಅನುಸರಿಸುತ್ತಾರೆ. ಹಲವರು ಬಾರ್‌ಗೆ ಹೋಗುತ್ತಾರೆ. ಅದರಿಂದ ಹಣ ವ್ಯರ್ಥವಾಗುತ್ತದೆಯೇ ಹೊರತು ಬೇರೇನೂ ಸಿಗದು. ಆದರೆ, ನಾಟಕಗಳ ವೀಕ್ಷಣೆಯಿಂದ, ಅಲ್ಲಿನ ಧನಾತ್ಮಕ ಹಾಗೂ ಹಾಸ್ಯ ದೃಶ್ಯಗಳಿಂದ ಮನಸ್ಸಿಗೆ ಅಂಟಿಕೊಂಡ ಒತ್ತಡ…

Read more

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಉಡುಪಿ : ಇದೇ ಮೊದಲ ಬಾರಿಗೆ ಹಿರಿಯ ನಟಿ ಉಮಾಶ್ರೀ ಯಕ್ಷಗಾನವೊಂದರಲ್ಲಿ ಅಭಿನಯಿಸಿ ಜನಮನ ಗೆದ್ದಿದ್ದಾರೆ. ಹೊನ್ನಾವರದಲ್ಲಿ ನಡೆದ ಶ್ರೀರಾಮ ಪಟ್ಟಾಭಿಷೇಕ, ಮಾಯಾಮೃಗಾವತಿ ಎಂಬ ಯಕ್ಷಗಾನ ಪ್ರಸಂಗದಲ್ಲಿ ಉಮಾಶ್ರೀ ಅಭಿನಯಿಸಿದರು. ಅದರಲ್ಲಿ ಮಂಥರೆಯಾಗಿ ಅಭಿನಯಿಸಿದ ನಟಿ, ಯಕ್ಷಪ್ರೇಮಿಗಳ ಗಮನ ಸೆಳೆದರು. ಉಡುಪಿ…

Read more

ಜ.5ರಿಂದ ಉಡುಪಿಯಲ್ಲಿ 23ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳು ನಾಟಕ ಸ್ಪರ್ಧೆ; ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾಹಿತಿ

ಉಡುಪಿ : ತುಳುಕೂಟ ಉಡುಪಿ ಸಂಸ್ಥೆಯ ವತಿಯಿಂದ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ 23ನೇ ವರ್ಷದ ದಿ. ಕೆಮ್ತೂರು ದೊಡ್ಡಣ್ಣ ಶೆಟ್ಟಿ ನೆನಪಿನ ತುಳು ನಾಟಕ ಸ್ಪರ್ಧೆಯು ಇದೇ ಜನವರಿ 5ರಿಂದ 10ರ ವರೆಗೆ ಉಡುಪಿ ಎಂ.ಜಿ.ಎಂ.ಕಾಲೇಜಿನ ಮುದ್ದಣ…

Read more

ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025

ಉಡುಪಿ : ಉಡುಪಿಯ ಸಂಸ್ಕೃತಿ ವಿಶ್ವ‌ಪ್ರತಿಷ್ಠಾನದ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.…

Read more