ಕಾಪು : ಕಾಪು ಪುರಸಭೆಯ ಸಾಮಾನ್ಯ ಸಭೆ ಇಂದು ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ನಡೆಯಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು.
ಸಭೆಯ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಪುರಸಭೆಯ ಸದಸ್ಯರು ಮತ್ತು ಪುರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.