ಉಡುಪಿ : ಎಂ.ಆರ್.ಜಿ ಗ್ರೂಪ್ ಅಧ್ಯಕ್ಷರಾದ ಡಾ. ಬಂಜಾರ ಪ್ರಕಾಶ್ ಶೆಟ್ಟಿ, ಮಂಗಳೂರು ನಿಟ್ಟೆ ವಿಶ್ವವಿದ್ಯಾನಿಲಯ ಸಹ ಕುಲಾಧಿಪತಿಗಳಾದ ಡಾ. ಎಂ ಶಾಂತಾರಾಮ್ ಶೆಟ್ಟಿ, ಮಣಿಪಾಲ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್ ಬಲ್ಲಾಳ್, ಮಸ್ಕತ್ ಮಲ್ಟಿಟೆಚ್ ಗ್ರೂಪ್ ಸಂಸ್ಥಾಪಕರಾದ ದಿವಾಕರ್ ಶೆಟ್ಟಿ, ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಡಾ ಪ್ರಶಾಂತ್ ಶೆಟ್ಟಿ ಹಾಗೂ ಗಣ್ಯರು ಉಪಸ್ಥಿತರಿದ್ದರು.
Kapu
ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆಯ ರೂವಾರಿ, ಕೊರಗ ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಕಾಪು ಕಲ್ಯಾ ನಿವಾಸಿ ದೇವದಾಸ್ ಶೆಟ್ಟಿ ಅವರಿಗೆ ಜಿಲ್ಲಾ ಮಟ್ಟದ ಪುರಸ್ಕಾರ ಪ್ರದಾನ ಕಾರ್ಯಕ್ರಮ ಅ.19ರಂದು ಸಂಜೆ 4 ಗಂಟೆಗೆ ಕಾಪು ಕಲ್ಯಾದಲ್ಲಿ ಜರಗಲಿದೆ.

ಇದೇ ಸಂದರ್ಭದಲ್ಲಿ ಪಾಂಗಾಳ ಬಾಬು ಕೊರಗ ಅವರ ಸರ್ವಾಧ್ಯಕ್ಷತೆಯಲ್ಲಿ ಪಲಿಮಾರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನ.16ರಂದು ಸಾಮಾಜಿಕ ತಲ್ಲಣಗಳಿಗೆ ಸಾಹಿತ್ಯಕ ಪ್ರತಿಸ್ಪಂದನೆ ಪರಿಕಲ್ಪನೆಯಲ್ಲಿ ಜರಗಲಿರುವ ಕಾಪು ತಾಲ್ಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ‘ನೆಲದುಲಿ’ಯನ್ನು ದೇವದಾಸ್ ಶೆಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಕಸಾಪ ಕಾಪು ತಾಲ್ಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ನವರಾತ್ರಿಯ ಹಿನ್ನೆಲೆಯಲ್ಲಿ ವೇಷಧಾರಿಗಳಿಬ್ಬರು ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷಧರಿಸಿದ್ದು, ಇದೀಗ ಈ ವೇಷ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ವಿಡಿಯೋ ತುಣುಕಿನಲ್ಲಿ ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷ ಧರಿಸಿದ ವೇಷಧಾರಿಗಳು ತುಳುವಿನಲ್ಲಿ ಮಾತನಾಡುವುದನ್ನು ನಾವಿಲ್ಲಿ ಕಾಣಬಹುದು.
ಉಡುಪಿ ಭಾಗದಲ್ಲಿ ನವರಾತ್ರಿಯ ಸಂದರ್ಭ ವೇಷ ಧರಿಸಿ ಮನೆ ಮನೆಗೆ ತೆರಳುವ ಸಂಪ್ರದಾಯವಿದೆ. ಪ್ರತಿ ವರ್ಷವೂ ವಿಭಿನ್ನ ಮತ್ತು ವಿಶೇಷವಾಗಿರುವ ವೇಷಗಳೊಂದಿಗೆ ಮನೆಮನೆಗೆ ವೇಷಧಾರಿಗಳು ಬರುತ್ತಾರೆ. ಹಾಗೆಯೇ ಪ್ರಸ್ತುತ ವಿದ್ಯಮಾನಗಳನ್ನು ಇಟ್ಟುಕೊಂಡು ವೇಷಧಾರಿಗಳಿಬ್ಬರು ನವರಾತ್ರಿ ವೇಷ ಧರಿಸಿದ್ದಾರೆ.
ರೇಣುಕಾ ಸ್ವಾಮಿಯ ಹತ್ಯೆಯ ಬಳಿಕ ಆತನ ಪ್ರೇತವನ್ನು ಕೊಂಡೊಯ್ಯಲು ಯಮರಾಜ ಬಂದಿದ್ದು, ಯಮರಾಜ ವೇಷಧಾರಿ ರೇಣುಕಾ ಸ್ವಾಮಿಯ ಪ್ರೇತವನ್ನು ಕೊಂಡೊಯ್ಯುವ ಹಾಸ್ಯ ಸನ್ನಿವೇಶವನ್ನು ಇಟ್ಟುಕೊಂಡು ವೇಷಧರಿಸಿದ್ದಾರೆ. ರೇಣುಕಾ ಸ್ವಾಮಿ ಪ್ರೇತ ಮತ್ತು ಯಮರಾಜ ವೇಷ ಗಮನ ಸೆಳೆಯುತ್ತಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
“ಕಾಪು ಮಾರಿಯಮ್ಮ ನಮ್ಮೆಲ್ಲರ ರಕ್ಷಕಿ” – ಕುಮಾರ ತಂತ್ರಿ; ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ
ಮಂಗಳೂರು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ, ನವದುರ್ಗ ಲೇಖನ ಯಜ್ಞ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮತ್ತು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ತಾಲೂಕು ಸಮಿತಿಗಳ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಶುಕ್ರವಾರ ಸಂಜೆ ಅಡ್ಯಾರ್ ಗಾರ್ಡನ್ನಲ್ಲಿ ಜರುಗಿತು.
ಕಮಲ ಪ್ರಭಾಕರ್ ಭಟ್, ಅಶ್ವಿನಿ ಮುಹಿಲನ್, ಸುನಂದಾ ಪುರಾಣಿಕ್, ಮಮತಾ ಸುನೀಲ್ ಆಚಾರ್, ವೃಂದ ವೇದವ್ಯಾಸ ಕಾಮತ್, ನಿರ್ಮಿತ ಸತೀಶ್ ಪಟ್ಲ, ಶ್ರೀದುರ್ಗ ಹರೀಶ್ ಪೂಂಜಾ, ಮಮತಾ ಗಟ್ಟಿ, ಮಲ್ಲಿಕಾ ಪ್ರಸಾದ್ ಶೆಟ್ಟಿ ದೀಪ ಪ್ರಜ್ವಲನೆಗೈದರು.
ಬಳಿಕ ಮಾತಾಡಿದ ಕಾಪು ಮಾರಿಗುಡಿ ಕ್ಷೇತ್ರದ ಕುಮಾರ ತಂತ್ರಿಗಳು, “ಹೆತ್ತು ಹೊತ್ತ ತಾಯಿಗೆ ಸನಾತನ ಸಂಸ್ಕೃತಿ ಬಹಳಷ್ಟು ಗೌರವವನ್ನು ನೀಡಿದೆ. ಆದೇ ರೀತಿ ಇಡೀ ಲೋಕದ ತಾಯಿಯಾದ ಕಾಪುವಿನ ಮಾರಿಯಮ್ಮ ನಮ್ಮ ಸಂಕಷ್ಟಗಳನ್ನು ಕಳೆಯುತ್ತಾಳೆ ಎಂಬ ನಂಬಿಕೆ ನಮ್ಮಲ್ಲಿದೆ. ಅಮ್ಮನ ಕ್ಷೇತ್ರದ ಜೀರ್ಣೋದ್ಧಾರ ಸಂದರ್ಭದಲ್ಲಿ ಈ ಲೇಖನ ಯಜ್ಞವನ್ನು ಹಮ್ಮಿಕೊಳ್ಳಲಾಗಿದೆ. ಸಾವಿರಾರು ವರ್ಷಗಳ ಹಿಂದೆ ಕಾಪುವಿನ ಮಾರಿಯಮ್ಮ ಪ್ರತಿಷ್ಠಾಪನೆಗೊಂಡಿದ್ದು ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಕೆಲಸ ಭರದಿಂದ ನಡೆಯುತ್ತಿದೆ. ಇಂದು ಅಮ್ಮನವರ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ ಸಿಕ್ಕಿದೆ. ನಾವೆಲ್ಲರೂ ನವದುರ್ಗ ಮಂತ್ರ ನಿತ್ಯ ಜಪಿಸುವ ಮೂಲಕ ತಾಯಿಯನ್ನೇ ನಮ್ಮ ರಕ್ಷಕಿಯನ್ನಾಗಿ ಪಡೆಯೋಣ” ಎಂದರು.
ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಕಾಪು ಅವರು ಲೇಖನ ಯಜ್ಞದ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು.
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಾತಾಡಿ, “ಲೇಖನ ಯಜ್ಞವನ್ನು ನಾವೆಲ್ಲರೂ ಮಾಡಬೇಕು. ತಾಯಿ ಎಂದರೆ ಪ್ರಕೃತಿ, ನಾವು ಪ್ರಕೃತಿಯ ಆರಾಧಕರು. ನಾವೆಲ್ಲರೂ ದೇವರನ್ನು ಮತ್ತು ದೇಶವನ್ನು ಆರಾಧನೆ ಮಾಡೋಣ“ ಎಂದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25ರಿಂದ ಮಾರ್ಚ್ 5ರ ತನಕ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ನವದುರ್ಗ ಲೇಖನ ಯಜ್ಞ ಮತ್ತು ನವ ಚಂಡಿಕಾ ಯಾಗ ನಡೆಸಲು ದೇವಿಯ ಅಭಯವಾಗಿದೆ. 99,999 ಭಕ್ತರು ಈ ನವದುರ್ಗ ಲೇಖನ ಯಜ್ಞದಲ್ಲಿ ಶ್ರದ್ಧೆ, ಭಕ್ತಿಯಿಂದ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ.
ಕಾರ್ಯಕ್ರಮದಲ್ಲಿ ನವದುರ್ಗ ಲೇಖನ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ವಿಶ್ವನಾಥ, ನವದುರ್ಗ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ ಮಾಜಿ ಶಾಸಕ ರಘುಪತಿ ಭಟ್, ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ, ಸಂದೀಪ್ ಕುಮಾರ್ ಮಂಜ, ಎಂ ಬಿ ಪುರಾಣಿಕ್, ರಘುನಾಥ್ ಶೆಟ್ಟಿ ಕೊಪ್ಪಲಂಗಡಿ, ಸುವರ್ತನ್ ಉಡುಪಿ, ಸಂತೋಷ್ ರೈ ಬೋಳಿಯಾರ್, ಪಟ್ಲ ಸತೀಶ್ ಶೆಟ್ಟಿ, ಮಲ್ಲಿಕಾ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. ಮಣೀಶ್ ರೈ, ಅಶ್ವತ್ತಾಮ ಹೆಗ್ಡೆ, ಪ್ರದೀಪ್ ಆಳ್ವ ಕದ್ರಿ, ಸುಲತಾ ಜೆ ರೈ, ಸಂತೋಷ್ ಶೆಟ್ಟಿ ಶೆಡ್ಡೆ, ಅಕ್ಷಿತ್ ಸುವರ್ಣ ಸಹಕರಿಸಿದರು. ಸಮಾರಂಭದಲ್ಲಿ ಜಿಲ್ಲಾ ಮತ್ತು ತಾಲೂಕು ಸಮಿತಿ ರಚನೆ ಮಾಡಲಾಯಿತು.
ಪುರುಷೋತ್ತಮ ಭಂಡಾರಿ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು.
ದ.ಕ. ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಚಂದ್ರಹಾಸ ಶೆಟ್ಟಿ ರಂಗೋಲಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಮನ್ವಿತ್ ಶೆಟ್ಟಿ ಇರಾ ದೇವರನ್ನು ಸ್ತುತಿಸಿದರು. ಕೃಷ್ಣ ಶೆಟ್ಟಿ ತಾರೆಮಾರ್ ಧನ್ಯವಾದ ಸಮರ್ಪಿಸಿದರು.


ರಸ್ತೆ ದಾಟುತ್ತಿದ್ದ ಪತಿ ಪತ್ನಿಗೆ ಖಾಸಗಿ ಬಸ್ ಡಿಕ್ಕಿ – ಪತಿ ಸ್ಥಳದಲ್ಲೇ ಸಾವು, ಪತ್ನಿಗೆ ಗಂಭೀರ ಗಾಯ
ಪಡುಬಿದ್ರಿ : ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪತಿ-ಪತ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಕಾಪು ಭಾರತ್ ನಗರದ ನಿವಾಸಿ ಹಿದಾಯತುಲ್ಲಾ (55) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಇವರ ಪತ್ನಿ ಸಾವರ್ ಎಂಬವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಚ್ಚಿಲ ಕಡೆಯಿಂದ ಕಾಪು ಕಡೆಗೆ ಹೋಗುತ್ತಿದ್ದ ಇವರು, ದಾರಿ ಮಧ್ಯೆ ಮೂಳೂರಿನಲ್ಲಿ ರಸ್ತೆಯ ಇನ್ನೊಂದು ಬದಿಯಲ್ಲಿರುವ ಹೋಟೆಲಿಗೆ ಹೋಗಲು ಬೈಕನ್ನು ನಿಲ್ಲಿಸಿ ಪತ್ನಿ ಜೊತೆ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು ಇವರಿಬ್ಬರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಪತಿ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಇವರು ರಜೆಯಲ್ಲಿ ಊರಿಗೆ ಬಂದಿದ್ದರು. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಾಪು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರು ದೆಂದೂರುಕಟ್ಟೆಯಲ್ಲಿ ನಡೆದಿದೆ.

ನೇಣಿಗೆ ಶರಣಾದ ಯುವಕ ಸಂತೋಷ್ ಆಚಾರ್ಯ (39) ಎಂದು ಗುರುತಿಸಲಾಗಿದೆ.
ಈತ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕಾಪು ಪೋಲಿಸ್ ಠಾಣೆಯ ಎ.ಎಸ್.ಐ. ಗಣೇಶ್ ಪೈ, ಹಾಗೂ ಶಿವ ನಾಯ್ಕ್ ಮಹಜರು ಪ್ರಕ್ರಿಯೆ ನಡೆಸಿದರು.
ಸಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತದೇಹವನ್ನು ಜಿಲ್ಲಾಸ್ಪತ್ರೆಯ ವೈದ್ಯಕೀಯ ತಪಾಸಣಾ ಘಟಕಕ್ಕೆ ರವಾನಿಸಲು ಇಲಾಖೆಗೆ ನೆರವಾದರು.

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾದ ಕಾರು : ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ
ಕಾಪು : ಉದ್ಯಾವರ ಸೇತುವೆ ಹತ್ತಿರದ ಡೈವರ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಏರಿದ ಪರಿಣಾಮ ಪ್ರಯಾಣಿಕರಿಗೆ ಗಾಯವಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಉದ್ಯಾವರದ ಖಾಸಗಿ ಶೋರೂಂ ಮುಂಭಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ, ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ಈ ಸಂದರ್ಭದಲ್ಲಿ ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಗಾಯಾಳುಗಳ ಸಹಾಯಕ್ಕೆ ಧಾವಿಸಿ ಸಮಾಜ ಸೇವಕ ನಿತ್ಯಾನಂದ ಒಳಕಾಡುವ ಅವರ ಸಹಾಯದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದರು.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬಾರ್ಕೂರು : ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸದಸ್ಯತ್ವ ಅಭಿಯಾನ ಅಂಗವಾಗಿ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷರಾದ ಧೀರಜ್ ಮುನಿರಾಜು ಅವರ ಉಪಸ್ಥಿತಿಯಲ್ಲಿ ಇಂದು ಬಾರ್ಕೂರು ಸಂಕಮ್ಮತಾಯಿ ಸಭಾಭವನದಲ್ಲಿ “ವಿದ್ಯಾರ್ಥಿಗಳು ಹಾಗೂ ಯುವಕರೊಂದಿಗೆ ಸಂವಾದ” ಕಾರ್ಯಕ್ರಮದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಶೆಟ್ಟಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ, ಕುಂದಾಪುರ ಮಂಡಲ ಅಧ್ಯಕ್ಷರು, ಯುವ ಮೋರ್ಚಾದ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಪು : ಪೊಲಿಪುವಿನ ಸರಕಾರಿ ಪದವಿಪೂರ್ವ ಕಾಲೇಜಿಗೆ ಇಂದು ಅಪರೂಪದ ಅತಿಥಿಯ ಆಗಮನವಾಗಿತ್ತು.
ಕಾಲೇಜು ಕೊಠಡಿಯೊಳಗೆ ಒಮ್ಮಿಂದೊಮ್ಮೆಲೆ ಸರಸರನೆ ‘ಉಡ’ದ ಪ್ರವೇಶವಾದಾಗ ಇಲ್ಲಿನ ಶಿಕ್ಷಕರು ಗಾಬರಿಗೊಳಗಾದರು. ಒಂದು ಕ್ಷಣ ಇದು ಯಾವ ಪ್ರಾಣಿ ಎಂದೇ ಅಲ್ಲಿದ್ದವರಿಗೆ ಗೊತ್ತಾಗಲಿಲ್ಲ. ಕೆಲ ಹೊತ್ತು ಉಡ ಆತಂಕ ಸೃಷ್ಟಿಸಿದ ಬಳಿಕ ಸ್ಥಳೀಯರಾದ ಪ್ರಶಾಂತ್ ಪೂಜಾರಿ ಮತ್ತು ಶಿವಾನಂದ ಪೂಜಾರಿ ಅವರನ್ನು ಕರೆಸಲಾಯಿತು. ಸ್ಥಳಕ್ಕೆ ಬಂದ ಅವರು ಕಾರ್ಯಾಚರಣೆ ಮಾಡಿ ಉಡವನ್ನು ಹಿಡಿದು ಸುರಕ್ಷಿತ ಜಾಗದಲ್ಲಿ ಬಿಟ್ಟರು.
ಪ್ರಾಂಶುಪಾಲ ಶಿವಲಿಂಗಪ್ಪ ಹಾಗೂ ಶಾಲಾ ಶಿಕ್ಷಕ ವರ್ಗದವರು ಈ ವೇಳೆ ಇದ್ದು ರಜೆಯ ಕಾರಣ ವಿದ್ಯಾರ್ಥಿಗಳು ಇರಲಿಲ್ಲ.
ಉಡದ ಮುಖದಲ್ಲಿ ಸಿಕ್ಕಿಹಾಕೊಂಡ ತಂಪು ಪಾನೀಯದ ಟಿನ್ – ಒದ್ದಾಟ; ಉರಗ ತಜ್ಞರಿಂದ ರಕ್ಷಣೆ
ಕಾಪು : ಆಹಾರ ಅರಸಿ ಬಂದ ಉಡವೊಂದರ ಮುಖಕ್ಕೆ ತಂಪು ಪಾನೀಯದ ಟಿನ್ ಸಿಕ್ಕಿಕೊಂಡು ಒದ್ದಾಟ ನಡೆಸಿದ ಪ್ರಸಂಗ ನಡೆದಿದೆ. ಕಳೆದ ಎರಡು ದಿನಗಳಿಂದ ಆತ್ತಿಂದಿತ್ತ ಚಲಿಸುತ್ತಿದ್ದ ಉಡವು ತನ್ನ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿತ್ತು. ಕಾಪುವಿನ ದಂಡತೀರ್ಥ ನಡಿಕೆರೆ ರತ್ನಕರ ಶೆಟ್ಟಿ ಅವರ ಜಮೀನಿನಲ್ಲಿ ಈ ಘಟನೆ ನಡೆದಿತ್ತು.
ಕಾಪುವಿನ ಸ್ಥಳೀಯ ಉರಗ ರಕ್ಷಕ ಪ್ರಶಾಂತ್ ಪೂಜಾರಿ ಹಾಗೂ ಶಿವಾನಂದ ಪೂಜಾರಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಉಡವನ್ನು ಹಿಡಿದು ಅದರ ಮುಖಕ್ಕೆ ಅಂಟಿಕೊಂಡ ತಂಪು ಪಾನೀಯದ ಟಿನ್ ಅನ್ನು ಸುರಕ್ಷಿತವಾಗಿ ಬಿಡಿಸಿದರು. ಬಳಿಕ ಉಡವನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು.
ಪ್ರಾಣಿ ಪಕ್ಷಿಗಳಿಗೂ ನಮ್ಮಂತೆ ಬದುಕುವ ಹಕ್ಕಿದೆ. ಆದ್ದರಿಂದ ತಂಪು ಪಾನೀಯ ಕುಡಿದು ಎಲ್ಲೆಂದರಲ್ಲಿ ಬಿಸಾಡುವ, ಪ್ಲಾಸ್ಟಿಕ್ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯುವ ಜನರು ಈ ಘಟನೆಯಿಂದ ಎಚ್ಚೆತ್ತುಕೊಳ್ಳಬೇಕಿದೆ.