Kapu
ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ
ಕಾಪು : ಗಾಳಿ ಮಳೆಗೆ ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ವಾರ್ಡಿನ ಹೀರಾ ಆರ್ ಮೆಂಡನ್ ಅವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿ ಸಂಭವಿಸಿದೆ. ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕರು ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಗರಿಷ್ಠ ಪರಿಹಾರ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ಸದಸ್ಯರಾದ ರಾಧಿಕಾ, ಪೊಲಿಪು ಮೋಗವೀರ ಮಹಾಸಭಾ ಅಧ್ಯಕ್ಷರಾದ ಶ್ರೀಧರ್ ಕಾಂಚನ್, ಕಾಪು ಪುರಸಭೆಯ ಮಾಜಿ ಸದಸ್ಯರಾದ ವಿಜಯ್ ಕರ್ಕೇರ, ಸ್ಥಳೀಯರಾದ ಸುಂದರ್ ಸುವರ್ಣ ಅಜಿತ್ ಮೆಂಡನ್ ಉಪಸ್ಥಿತರಿದ್ದರು.
ಗಾಳಿ ಮಳೆಗೆ ಕೋಟೆ ಗ್ರಾ.ಪಂ ವ್ಯಾಪ್ತಿಯ ಮನೆಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ
ಕಾಪು : ಗಾಳಿ ಮಳೆಗೆ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿನೋಭನಗರದ ರಮೇಶ್ ಅವರ ಮನೆಗೆ ಹಾನಿ ಉಂಟಾಗಿದ್ದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕರು ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮನೆಯ ಸಂಪೂರ್ಣ ಹಾನಿಗೆ ಶಿಫಾರಸ್ಸು ಮಾಡಿ ಗರಿಷ್ಠ ಪರಿಹಾರ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕೋಟೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯೋಗೀಶ್, ಗ್ರಾಮ ಪಂಚಾಯತ್ ಸದಸ್ಯರಾದ ರತ್ನಾಕರ್, ಮಾಜಿ ಸದಸ್ಯರಾದ ವಸಂತಿ ಪೂಜಾರಿ, ಪ್ರಮುಖರಾದ ಗುರುಪ್ರಸಾದ್ ಶೆಟ್ಟಿ ಮತ್ತು ಪಕ್ಷದ ಹಿರಿಯರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
ಗಾಳಿ ಮಳೆಗೆ ಕುತ್ಯಾರು ಗ್ರಾ.ಪಂ ವ್ಯಾಪ್ತಿಯ ಮನೆಗಳಿಗೆ ಹಾನಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ
ಕಾಪು : ಗಾಳಿ ಮಳೆಗೆ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಬರಿ ಪ್ರಮೀಳಾ ವಾಮನ ಆಚಾರ್ಯ ಅವರ ಮನೆಗೆ ಹಾನಿ ಉಂಟಾಗಿದ್ದು, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕರು ಶೀಘ್ರವೇ ನಷ್ಟದ ಪ್ರಮಾಣದ ಅಂದಾಜು ಪಟ್ಟಿ ತಯಾರಿಸಿ ಗರಿಷ್ಠ ಪರಿಹಾರ ಮಂಜೂರು ಮಾಡುವಂತೆ ಜೊತೆಗೆ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಮನೆಗಳಿಗೆ ಹಾನಿ ಸಂಭವಿಸಿದೆ ಇವುಗಳಿಗೂ ಗರಿಷ್ಠ ಪರಿಹಾರ ನೀಡುವಂತೆ ಸಂಭಂದಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಉಪಾಧ್ಯಕ್ಷರಾದ ಭಾರತಿ ರಾಘವೇಂದ್ರ, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಂದಾಯ ನಿರೀಕ್ಷಕರಾದ ಶಬೀರ್, ಗ್ರಾಮ ಆಡಳಿತಾಧಿಕಾರಿಗಳಾದ ಪ್ರದೀಪ್, ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಲತಾ ಆಚಾರ್ಯ, ಅಗ್ನೇಸ್ ಮಥಾಯಸ್, ಸ್ಥಳೀಯರಾದ ಕುತ್ಯಾರು ನವೀನ್ ಶೆಟ್ಟಿ, ಪ್ರಸಾದ್ ಶೆಟ್ಟಿ ಕುತ್ಯಾರು ಮೊದಲಾದವರು ಉಪಸ್ಥಿತರಿದ್ದರು.


ಉಡುಪಿ : ಕಾಪು ತಾಲೂಕಿನ ಕೊಪ್ಪಲಂಗಡಿಯಲ್ಲಿ ಬೈಕ್ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಂಜೆ ವೇಳೆ ನಡೆದಿದೆ.
ಮೃತಪಟ್ಟ ಬೈಕ್ ಸವಾರನನ್ನು ತಮಿಳುನಾಡು ಮೂಲದ ಯುವಕನೆಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿವೆ.
ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್, ಅದೇ ದಿಕ್ಕಿನಲ್ಲಿ ಬರುತ್ತಿದ್ದ ಕಾರ್ಗೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿದ್ದ ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ.
ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಬಂದು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಉಡುಪಿ : ಕಾಪು ತಾಲೂಕಿನ ಪಾದೂರು ಮತ್ತು ಕಳತ್ತೂರು ಗ್ರಾಮದ ಇಂಡಿಯನ್ ಸ್ಟ್ರಾಟಿಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ (I.S.P.R.L) 2ನೇ ಹಂತದ ಯೋಜನೆಯಿಂದ ಮನೆ ಕಳೆದುಕೊಳ್ಳುವ ಭೂಸಂತ್ರಸ್ಥರಿಗೆ ಪುನರ್ ವಸತಿ ಮತ್ತು ಪುನರ್ ನಿರ್ಮಾಣದ ಯೋಜನೆಯಡಿಯಲ್ಲಿ ಒದಗಿಸಲಾಗುವ ಸೌಲಭ್ಯ ಹಾಗೂ ಭೂಸ್ವಾಧೀನವಾಗುತ್ತಿರುವ ಜಮೀನಿನ ಪರಿಹಾರ ಮೊತ್ತದ ವಿಚಾರದ ಕುರಿತ ಸಭೆ ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಕೆ.ಐ.ಎ.ಡಿ.ಬಿ ಎಸ್.ಎಲ್.ಓ ರಾಜು ಕೆ, ಸಹಾಯಕ ಆಯುಕ್ತರಾದ ರಶ್ಮಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ್, ಕಾಪು ತಹಶೀಲ್ದಾರರಾದ ಪ್ರತಿಭಾ ಆರ್, I.S.P.R.L ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಪು : ಕೈಪುಂಜಾಲು ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ವಠಾರದಲ್ಲಿ ಉಸಿರಿಗಾಗಿ ಹಸಿರು ಸಂಘಟನೆ ಹಾಗೂ ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ (ರಿ.) ಕೈಪುಂಜಾಲು ಇವರ ಜಂಟಿ ಆಶ್ರಯದಲ್ಲಿ ‘ಉಸಿರಿಗಾಗಿ ಹಸಿರು’ ಕಾರ್ಯಕ್ರಮ ನಡೆಯಿತು.
ವಿವಿಧ ಹಣ್ಣಿನ ಗಿಡಗಳು ಮತ್ತು ಔಷಧಿಯ ಗಿಡಗಳ ವಿತರಣೆ ಮತ್ತು ನೆಡಲಾಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕೈಪುಂಜಾಲು ವಿದ್ಯಾಸಾಗರ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಸತೀಶ್ ಕುಂದರ್, ಕಾರ್ಯದರ್ಶಿ ರಮೇಶ್ ಪೂಜಾರಿ, ಕಾಪು ತಹಶೀಲ್ದಾರ ಪ್ರತಿಭಾ ಆರ್., ಅರಣ್ಯ ಇಲಾಖಾಧಿಕಾರಿ ಕೃಷ್ಣಪ್ಪ, ಪ್ರಾಂಶುಪಾಲ ಸಾಕ್ಷಾತ್ ಯು.ಕೆ., ಅರಣ್ಯ ಪ್ರೇರಕರಾದ ಪ್ರತಿಕ್ಷ್ ಕಾಮತ್, ಪೆನ್ವಿಲ್ ಸೋನ್ಸ್, ಡಾ. ನಾನಾಸಾಹೇಬ್ ಧರ್ಮಾಧಿಕಾರಿ ಪ್ರತಿಷ್ಠಾನ ಸದಸ್ಯರಾದ ಸಂತೋಷ್ ಎಂ ಶೆಟ್ಟಿಗಾರ್ ಮುಂತಾದವರು ಉಪಸ್ಥಿತರಿದ್ದರು.
ಕಾಪು : ಉಡುಪಿ ಜಿಲ್ಲೆಯ ಕಾಪುವಿನಲ್ಲಿರುವ ಹೊಸ ಮಾರಿಗುಡಿಗೆ ಇಂದು ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ ನೀಡಿದರು. ಪತ್ನಿ ದೇವಿಶಾ ಶೆಟ್ಟಿ ಜೊತೆ ಆಗಮಿಸಿದ ಸೂರ್ಯಕುಮಾರ್ ಯಾದವ್ಗೆ ಮಾರಿಗುಡಿ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.
ಇತ್ತೀಚೆಗಷ್ಟೆ ಮುಗಿದ ವರ್ಲ್ಡ್ ಕಪ್ T20 ಯಲ್ಲಿ ಸೂರ್ಯಕುಮಾರ್ ಮಿಂಚಿದ್ದರು. ಫೈನಲ್ನಲ್ಲಿ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ದೇಶದ ಜನರ ವಿಶ್ವಕಪ್ ಕನಸನ್ನು ನನಸಾಗಿದ್ದರು. ಇಲ್ಲಿಗೆ ಆಗಮಿಸಿದ ಸ್ಟಾರ್ ಕ್ರಿಕೆಟರ್ ದಂಪತಿ ಮಾರಿಯಮ್ಮನ ದರ್ಶನ ಪಡೆದರು.
ಕಾಪು ಹೊಸ ಮಾರಿಗುಡಿ ನಿರ್ಮಾಣ ಹಂತದಲ್ಲಿದ್ದು ಭವ್ಯವಾಗಿ ರೂಪುಗೊಳ್ಳುತ್ತಿದೆ. ಇಲ್ಲಿ ಅದ್ಧೂರಿ ಬ್ರಹ್ಮಕಲಶೋತ್ಸವ ಕೂಡ ಜರುಗಲಿದೆ. ಭವ್ಯ ಮಾರಿಗುಡಿಯ ಕಾಮಗಾರಿ ವೀಕ್ಷಿಸಿದ ಸೂರ್ಯಕುಮಾರ್ ಅಲ್ಲಿನ ಮಾಹಿತಿ ಪಡೆದುಕೊಂಡರು. ಸೂರ್ಯಕುಮಾರ್, ಕರಾವಳಿಯ ಅಳಿಯ ಎಂಬುದು ಗಮನಾರ್ಹ ಸಂಗತಿ. ಈ ಸಂದರ್ಭ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಭೇಟಿ ಸಂದರ್ಭ ಹೊಸ ಮಾರಿಗುಡಿಯ ಪ್ರಮುಖರು, ಊರ ಪ್ರಮುಖರು ಉಪಸ್ಥಿತರಿದ್ದರು.

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಬುಧವಾರ ಬೆಳಿಗ್ಗಿನಿಂದ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜೂನ್ 26 ಮತ್ತು 27 ರಂದು “ಆರೆಂಜ್ ಅಲರ್ಟ್” ನೀಡಲಾಗಿದೆ, ಜೂನ್ 28 ಮತ್ತು 29 ರಂದು “ಯಲ್ಲೋ ಅಲರ್ಟ್” ನೀಡಲಾಗಿದೆ. ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕಾಪು ತಾಲೂಕಿನ ಮೂಳೂರು ಉದಯ್ ಪೂಜಾರಿ ಎಂಬವರ ಮನೆಗೆ ಇಂದು ಬೆಳಿಗ್ಗೆ ಮರಬಿದ್ದು ಅಪಾರ ಹಾನಿಯುಂಟಾಗಿದೆ. ಮಳೆಗೆ ಬೀಸಿದ ಭಾರಿ ಗಾಳಿಯಿಂದಾಗಿ ಮರ ಬಿದ್ದಿದ್ದು ಬಚ್ಚಲು ಕೋಣೆ, ಶೌಚಾಲಯಕ್ಕೆ ಹಾನಿಯುಂಟಾಗಿದೆ. ಮನೆಯವರು ಹಾಲ್ನಲ್ಲಿ ಕುಳಿತಿದ್ದಾಗ ಘಟನೆ ಸಂಭವಿಸಿದ್ದು, ಹಿಂಬದಿಯ ಮರ ಬಿದ್ದ ಪರಿಣಾಮ ಮನೆಯೊಳಗೆ ಇದ್ದವರಿಗೆ ಯಾವುದೇ ಅಪಾಯಗಳುಂಟಾಗಿಲ್ಲ.
ಸಾವಿರಾರು ರೂಪಾಯಿ ನಷ್ಟ ಅಂದಾಜಿಸಲಾಗಿದ್ದು ತಾಲೂಕು ಆಡಳಿತ, ಕಂದಾಯ ಇಲಾಖೆ, ಪುರಸಭೆಗೆ ಮಾಹಿತಿ ನೀಡಿದ್ದಾರೆ.
ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ಹಾಗೂ ದಂಡತೀರ್ಥ ವಾರ್ಡಿನ ರಸ್ತೆ ಬದಿಯಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗುತ್ತಿರುವ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿದ್ದು ಸ್ಥಳೀಯರ ಮನವಿಯಂತೆ ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಪುರಸಭಾ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚರಂಡಿಗಳ ಸಮರ್ಪಕ ನಿರ್ವಹಣೆ ಮಾಡದೇ ಇರುವುದರಿಂದ ಮಳೆ ನೀರು ರಸ್ತೆಯ ಮೂಲಕ ಹರಿದು ಮನೆಗಳಿಗೆ ನುಗ್ಗುತ್ತಿದ್ದು ಚರಂಡಿಗಳ ಹೂಳೆತ್ತಿ ಚರಂಡಿಯ ನೀರು ಸರಾಗವಾಗಿ ಹರಿಯುವಂತೆ ಮಾಡಲು ತಕ್ಷಣದಲ್ಲಿ ಕ್ರಮ ವಹಿಸುವಂತೆ ಪುರಸಭಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಸುರೇಶ ದೇವಾಡಿಗ, ಲತಾ ದೇವಾಡಿಗ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಅಭಿಯಂತರರಾದ ನಯನತಾರ ಹಾಗೂ ಸ್ಥಳೀಯ ಉಪಸ್ಥಿತರಿದ್ದರು.