ಪಡುಬಿದ್ರೆ : ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾಪು ತಾಲೂಕು ಘಟಕದ ಪ್ರಥಮ ಸಭೆ, ಅಧ್ಯಕ್ಷರಾದ ಸೃೆಯದ್ ನಿಝಾಮುದ್ದಿನ್ರವರ ಅಧ್ಯಕ್ಷತೆಯಲ್ಲಿ ಆದಿತ್ಯವಾರ ಬೆಳಿಗ್ಗೆ ಪಡುಬಿದ್ರಿ ಓಂಕಾರ್ ಕಲಾ ಸಂಗಮದಲ್ಲಿ ನಡೆಯಿತು.
ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು.
ನೂತನ ಕಾಪು ತಾಲೂಕು ಅಧ್ಯಕ್ಷರಾಗಿ ಚೇತನ್ ಪಡುಬಿದ್ರಿ, ಉಪಾಧ್ಯಕ್ಷರಾಗಿ ಅಬ್ದುಲ್ ಗಫರ್, ಗೋಪಾಲ್ ಸಾಲ್ಯಾನ್, ಮಾಕ್ಸಿಮ್ ಡಿಸೋಜ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಪಡುಬಿದ್ರಿ ಕಾರ್ಯದರ್ಶಿಯಾಗಿ ವಿಕ್ಸನ್ ಮಟ್ಟು, ಸಂಘಟನಾ ಕಾರ್ಯದರ್ಶಿಯಾಗಿ ಗಣೇಶ್ ಮೆಂಡನ್ ರವರನ್ನು ಆಯ್ಕೆ ಮಾಡಲಾಯಿತು.
ಪಡುಬಿದ್ರಿ ಗ್ರಾಮ ಘಟಕದ ಅಧ್ಯಕ್ಷರಾಗಿ ಪ್ರಶಾಂತ್ ಸಾಲ್ಯಾನ್, ಹೆಜಮಾಡಿ ಗ್ರಾಮ ಘಟಕದ ಅಧ್ಯಕ್ಷರಾಗಿ ಹಮೀದ್ ಹೆಜ್ಮಾಡಿ, ಪಲಿಮಾರ್ ಗ್ರಾಮ ಘಟಕದ ಅಧ್ಯಕ್ಷರಾಗಿ ಕೀರ್ತನ್ ಕುವೆಲ್ಲೂ ಆಯ್ಕೆಯಾದರು.
ಈ ಸಂದರ್ಭದಲ್ಲಿ ಕರವೇ ಉಡುಪಿ ಜಿಲ್ಲಾ ಗೌರವಾಧ್ಯಕ್ಷರಾದ ಅನ್ಸರ್ ಅಹಮದ್, ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷರಾದ ಕಿರಣ್ ಪ್ರತಾಪ್, ಜಿಲ್ಲಾ ಮಹಿಳಾ ಘಟಕದ ಕಾರ್ಯದರ್ಶಿ ಶಶಿಕಲಾ. ವಿ. ಸಾಲ್ಯಾನ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
 
			        


 
			         
                        
 
                        
 
                        

 
                        
