ಮಲ್ಪೆ : ಖಾಸಗಿ ಬಸ್ ವೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಮುಖ್ಯೋಪಾಧ್ಯಾಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಪೆ ಕಲ್ಮಾಡಿಯಲ್ಲಿ ಇಂದು ಸಂಭವಿಸಿದೆ.

ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ್ ಎಂದು ಗುರುತಿಸಲಾಗಿದೆ. ಅವರು ಇಂದು ಮಧ್ಯಾಹ್ನ ತನ್ನ ದ್ವಿಚಕ್ರ ವಾಹನದಲ್ಲಿ ಆದಿಆಡುಪಿಯಿಂದ ಮಲ್ಪೆ ಕಡೆ ಹೋಗುತ್ತಿದ್ದರು. ಕಲ್ಮಾಡಿಗೆ ತಲುಪುತ್ತಿದ್ದಂತೆ ಬ್ರೇಕ್ ಫೈಲ್ ಆದ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರಿಂದ ಬಸ್ ಹಿಂಬದಿಯ ಚಕ್ರಕ್ಕೆ ಸಿಲುಕಿದ ಭಾಸ್ಕರ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.