ಉಪ್ಪಿನಂಗಡಿ : ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ.
ಮೃತ ಬೈಕ್ ಸವಾರನನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ ನಾಳಾಲು ನಿವಾಸಿ ರವಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್ಯುವಿ ಕಾರು ಹಾಗೂ ಬೈಕ್ ನಡುವೆ ನೇಲ್ಯಡ್ಕ ಸಮೀಪ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ರವಿ ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾರೆ.
