ಮಂಗಳೂರು : ಸುವರ್ಣ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಅ. 24 ಹಾಗೂ 25 ರಂದು ಮಂಗಳೂರಿನಲ್ಲಿ ನಡೆಯಲಿರುವ ಬಹು ಸಂಸ್ಕೃತಿ ಉತ್ಸವಕ್ಕೆ ಮುಖ್ಯಮಂತ್ರಿ ಅವರಿಗೆ ಗುರುವಾರದಂದು ಆಹ್ವಾನ ನೀಡಲಾಯಿತು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನು ಭೇಟಿಯಾದ ವಿವಿಧ ಅಕಾಡೆಮಿ ಅಧ್ಯಕ್ಷರುಗಳು ಮುಖ್ಯಮಂತ್ರಿ ಜೊತೆಗೆ ಸಮಾಲೋಚನೆ ನಡೆಸಿ ಆಹ್ವಾನ ನೀಡಿದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ, ತುಳು ಸಾಹಿತ್ಯ ಅಕಾಡೆಮಿ, ಕೊಂಕಣಿ ಅಕಾಡೆಮಿ, ಬ್ಯಾರಿ ಅಕಾಡೆಮಿ, ಅರೆ ಭಾಷೆ ಅಕಾಡೆಮಿ ಹಾಗೂ ಕೊಡವ ಅಕಾಡೆಮಿ ಜಂಟಿಯಾಗಿ ಅ. 24 ಹಾಗೂ 25ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹು ಸಂಸ್ಕೃತಿ ಉತ್ಸವವನ್ನು ಆಯೋಜಿಸಿದೆ.
ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಜೋಕಿಮ್ ಸ್ಟ್ಯಾನಿ ಆಳ್ವಾರಿಸ್ , ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕೊಡವ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಇದ್ದರು.