Mangalore Police

ಮನೆಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ – ಆರೋಪಿ ಅರೆಸ್ಟ್

ಮಂಗಳೂರು : ನಗರದ ಯೆಯ್ಯಾಡಿಯಲ್ಲಿನ ದಂಡಕೇರಿಯ ಮನೆಯೊಂದರಿಂದ ಚಿನ್ನಾಭರಣ ಕಳವುಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗರ ಠಾಣೆಯ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಯೆಯ್ಯಾಡಿ ದಂಡಕೇರಿಯ ಸಾಗರ್ (23) ಬಂಧಿತ ಆರೋಪಿ. ಮನೆಯೊಡತಿ ಮಮತಾ ಅವರು ಆ.25ರಂದು ಮನೆಯಿಂದ ಹೊರಗಡೆ ಹೋಗುವಾಗ…

Read more

ದಾರಿಯಲ್ಲಿ ಆಡುತ್ತಿದ್ದ ಮಗು ಕಿಡ್ನ್ಯಾಪ್ – ರೈಲಿನಲ್ಲಿ ಪರಾರಿಯಾಗುತ್ತಿದ್ದ ಆರೋಪಿ 2 ಗಂಟೆಯಲ್ಲೆ ಅರೆಸ್ಟ್

ಮಂಗಳೂರು : ನಗರದ ಪಡೀಲ್ ಅಳಪೆ ಬಳಿ ನಡೆದ ಹೆಣ್ಣುಮಗು ಅಪಹರಣ ಪ್ರಕರಣವನ್ನು ದೂರು ಬಂದ ಕೇವಲ 2ಗಂಟೆಯೊಳಗೆ ಭೇದಿಸಿದ ಕಂಕನಾಡಿ ನಗರ ಠಾಣಾ ಪೊಲೀಸರು ಕಿಡ್ನ್ಯಾಪರ್‌ನನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ ಎರ್ನಾಕುಲಂ ಜಿಲ್ಲೆಯ ಅನೀಶ್ ಕುಮಾರ್(49) ಬಂಧಿತ ವ್ಯಕ್ತಿ. ಅಳಪೆ…

Read more

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳು ಸಿಸಿಬಿ ಬಲೆಗೆ

ಮಂಗಳೂರು : ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು 42 ಗ್ರಾಂ ಎಂಡಿಎಂಎ ಸಹಿತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರು ಬೆಂಗಳೂರಿನಿಂದ ಮಾದಕ ವಸ್ತುವಾದ ಎಂಡಿಎಂಎಯನ್ನು ಖರೀದಿಸಿಕೊಂಡು ಕಾರಿನಲ್ಲಿ ನಗರಕ್ಕೆ ಸಾಗಿಸಿ ತಂದಿದ್ದಲ್ಲದೆ ಸುರತ್ಕಲ್…

Read more

ಸಿಸಿಬಿ ಪೊಲೀಸರ ಕಾರ್ಯಾಚರಣೆ : ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, ಆರೋಪಿಗಳಿಂದ 15 ಗ್ರಾಂ ಎಂಡಿಎಂಎ ಅನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಅಬ್ದುಲ್ ಸಲಾಂ ಯಾನೆ ಸಲಾಂ(30), ಸೂರಜ್…

Read more

ಉಳಾಯಿಬೆಟ್ಟು ದರೋಡೆ ಪ್ರಕರಣ : ಮತ್ತೆ ಮೂವರ ಸೆರೆ

ಮಂಗಳೂರು : ಉಳಾಯಿಬೆಟ್ಟು ಕಾಯರ್‌ಪದವಿನಲ್ಲಿ ಜೂ. 21ರಂದು ರಾತ್ರಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸಲಾಗಿದೆ. ಇದರೊಂದಿಗೆ ಬಂಧಿತರ ಒಟ್ಟು ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಅವರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ…

Read more

ತಂದೆಯಿಂದ ಅಪ್ರಾಪ್ತ ವಯಸ್ಸಿನ ಪುತ್ರಿಯ ಅತ್ಯಾಚಾರ; ಆರೋಪಿಯ ಬಂಧನ

ಮೂಡುಬಿದಿರೆ : ಅಪ್ರಾಪ್ತ ವಯಸ್ಸಿನ ಪುತ್ರಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಸಂತ್ರಸ್ತೆಯ ತಂದೆಯನ್ನು ಮೂಡುಬಿದಿರೆ ಪೊಲೀಸರು ಪೋಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ. ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಆರೋಪಿ ಆರು ತಿಂಗಳ ಹಿಂದೆ ಮನೆಯಲ್ಲೇ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಪ್ರೌಢಶಾಲೆಯಲ್ಲಿ…

Read more

ಸಿಂಗಂ ಸಂದೇಶ್ ಅವರಿಗೆ ಮುಖ್ಯಮಂತ್ರಿ ಪದಕ ಗೌರವ

ಮೂಡಬಿದಿರೆಯ ಸಿಂಗಂ ಎಂದೇ ಪ್ರಖ್ಯಾತಿ ಪಡೆದಿರುವ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಕರ್ತವ್ಯ ನಿರ್ವಹಿಸಿದ ಕಡೆಗಳಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿ ಎಂಬ ಖ್ಯಾತಿಗೆ ಪಾತ್ರರಾಗಿದ್ದು, ಡೇರಿಂಗ್ ಇಮೇಜಿನಿಂದ ಸಾರ್ವಜನಿಕ ವಲಯದಲ್ಲಿ ಅಪಾರ ಪ್ರಸಿದ್ಧಿ…

Read more

ಪಬ್‌ನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ – ನಾಲ್ವರು ಕಾಮುಕರು ಅರೆಸ್ಟ್

ಮಂಗಳೂರು : ನಗರದ ಪಾಂಡೇಶ್ವರದ ಫೊರಮ್ ಮಾಲ್‌ನಲ್ಲಿರುವ ಶೆರ್‌ಲಾಕ್ ಪಬ್‌ನಲ್ಲಿ ಯುವತಿಯೊಬ್ಬಳೊಂದಿಗೆ ಅಸಭ್ಯವಾಗಿ ವರ್ತಿಸಿ ಚುಡಾಯಿಸಿದ ನಾಲ್ವರು ಕಾಮುಕರನ್ನು ಪೊಲೀಸರು ಹೆಡೆಮುರಿಕಟ್ಟಿ ಬಂಧಿಸಿದ್ದಾರೆ. ಪುತ್ತೂರು ನೆಹರೂ ನಗರ ನಿವಾಸಿಗಳಾದ ವಿನಯ್(33), ಮಹೇಶ್(27), ಪುತ್ತೂರು ಪಡ್ನೂರು ನಿವಾಸಿಗಳಾದ ಪ್ರಿತೇಶ್(34), ನಿತೇಶ್(33) ಬಂಧಿತ ಕಾಮುಕರು.…

Read more

ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಬ್ಬರ ಸೆರೆ : ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗಳು, ಮಾದಕ ವಸ್ತುಗಳ ವಶ

ಮಂಗಳೂರು : ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಹೊಂದಿಕೊಂಡಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯ ಮುಹಮ್ಮದ್ ಹನೀಫ್ ಯಾನೆ ಅಲಿ…

Read more

ವಾಹನ ಸವಾರರ ಮೇಲೆ ಖಾಕಿ ಹದ್ದಿನ ಕಣ್ಣು : ರಾಡಾರ್ ಗನ್ ಬಳಸಿ ವಾಹನಗಳ ವೇಗ ಪತ್ತೆ : ದಂಡ ವಸೂಲಿ

ಮಂಗಳೂರು : ವಾಹನಗಳ ವೇಗ ಪತ್ತೆ ಮಾಡುವುದಕ್ಕಾಗಿ ಪೊಲೀಸರು ‘ಮೊಬೈಲ್ ಸ್ಪೀಡ್ ಡಿಟೆಕ್ಷನ್ ರಾಡಾರ್ ಗನ್’ಗಳ ಬಳಕೆ ಆರಂಭಿಸಿದ್ದು, ಸೋಮವಾರ ಹಲವು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಅಪಘಾತ‌ಗಳನ್ನು ತಡೆಯಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೊರಡಿಸಿರುವ ವಾಹನಗಳ ವೇಗಮಿತಿ ಅಧಿಸೂಚನೆಯಂತೆ…

Read more