Mangalore

ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಜಾಗೃತಿ ಅಭಿಯಾನ – ಮಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದ ಆರೋಗ್ಯ ಸಚಿವರು

ಮಂಗಳೂರು : ಡೆಂಗಿ ಜ್ವರಕ್ಕೆ ಕಾರಣವಾಗುವ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಮಂಗಳೂರಿನಲ್ಲಿ ಆರೋಗ್ಯ ಕಾರ್ಯಕರ್ತರೊಂದಿಗೆ ಮನೆಗಳಿಗೆ ಭೇಟಿ ನೀಡಿದ ಸಚಿವರು, ನೀರು ನಿಂತ ಸ್ಥಳಗಳಲ್ಲಿ…

Read more

ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ನೇಮಕ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆಯುಕ್ತ ಸಿ.ಎಲ್. ಆನಂದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ. ಮಂಡ್ಯ ಮೂಲದ ಆನಂದ್ ಸಿ ಎಲ್ ಅವರು ಭಾರತೀಯ ಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.…

Read more

ಪಿಡಬ್ಲ್ಯುಡಿ ಕಂಟ್ರಾಕ್ಟರ್ ಮನೆ ದರೋಡೆ ಪ್ರಕರಣ – ಗ್ರಾಪಂ ಸದಸ್ಯನ ಸಹಿತ 10ಮಂದಿ ಅರೆಸ್ಟ್

ಮಂಗಳೂರು : ನಗರದ ಹೊರವಲಯದ ಉಳಾಯಿಬೆಟ್ಟು ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಕೇರಳ ಮೂಲದ ನಟೋರಿಯಸ್ ದರೋಡೆಕೋರರು ಸೇರಿದಂತೆ 10ಮಂದಿಯನ್ನು ಬಂಧಿಸಿದ್ದಾರೆ. ನೀರುಮಾರ್ಗ ಗ್ರಾಪಂ ಸದಸ್ಯ ವಸಂತ ಕುಮಾರ್(42), ರಮೇಶ ಪೂಜಾರಿ(42), ರೇಮಂಡ್…

Read more

ಮಣ್ಣು ಕುಸಿದು ಅವಘಡದ ಬೆನ್ನಲ್ಲೇ ಎಚ್ಚೆತ್ತ ಮನಪಾ – ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆದೇಶ

ಮಂಗಳೂರು : ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ. ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು…

Read more

ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

ಮಂಗಳೂರು : ಬುಧವಾರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ. ಜಿಲ್ಲಾಡಳಿತ ಮುತುವರ್ಜಿಯಿಂದ…

Read more

ಸತತ ಏಳು ಗಂಟೆ ಕಾರ್ಯಾಚರಣೆ ಬಳಿಕ ಮಣ್ಣಿನಡಿ ಸಿಲುಕಿದ ಕಾರ್ಮಿಕ ಮೃತದೇಹವನ್ನು ಮೇಲಕ್ಕೆತ್ತಿದ ರಕ್ಷಣಾ ತಂಡ

ಮಂಗಳೂರು : ಸತತ ಏಳು ಗಂಟೆ ಕಾರ್ಯಾಚರಣೆ ಬಳಿಕ ಬಲ್ಮಠದ ಬಳಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮಣ್ಣಿನಡಿ ಸಿಲುಕಿದ್ದ ಮತ್ತೋರ್ವ ಕಾರ್ಮಿಕನ ಮೃತದೇಹವನ್ನು ರಕ್ಷಣಾ ತಂಡ ಮೇಲಕ್ಕೆತ್ತಿದೆ. ಉತ್ತರಪ್ರದೇಶ ಮೂಲದ ಕಟ್ಟಡ ಕಾರ್ಮಿಕ ಚಂದನ್ ಕುಮಾರ್ (30)ನನ್ನು…

Read more

ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

ಮಂಗಳೂರು : ಅಡಿಕೆ ಮಾರುಕಟ್ಟೆಯ ಚೇತರಿಕೆಗೆ ಉತ್ತೇಜನ ನೀಡಲು ಮತ್ತು ರೈತರ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕ್ಯಾಂಪ್ಕೊ ಮನವಿ ಮಾಡಿದೆ. ಮುಖ್ಯವಾಗಿ ಅಡಿಕೆಯ ಮೇಲಿನ ಜಿಎಸ್‌ಟಿಯನ್ನು ಶೇ. 5ರಿಂದ ಶೇ. 2ಕ್ಕೆ…

Read more

ಶಂಕರನಾರಾಯಣ ಪೇಟೆಯಲ್ಲಿ ಗೋಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳ ಬಂಧನ

ಕುಂದಾಪುರ : ಜೂನ್ 25‌ರಂದು ರಾತ್ರಿ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೋಲಿಸರು ಬಂಧಿಸಿದ್ದಾರೆ. ಮಂಗಳೂರು ಆಸೈಗೋಳಿಯ ನಿಝಾಮುದ್ದೀನ್ ಮತ್ತು ಮಹಮ್ಮದ್ ಅನ್ಸಾರ್ ಬಂಧಿತರು. ಶಂಕರನಾರಾಯಣ ಠಾಣೆ ಪಿಎಸ್ಐ ನಾಸೀರ್ ಹುಸೇನ್, ಶಂಭುಲಿಂಗಯ್ಯ ಎಮ್.ಇ.…

Read more

ಶಿರಾಡಿ ಘಾಟ್‌ನಲ್ಲಿ ರಾಜಹಂಸ‌ – ಐರಾವತ ಬಸ್ಸುಗಳ ಮುಖಾಮುಖಿ ಡಿಕ್ಕಿ‌; ಅಪಘಾತ ತಪ್ಪಿಸಲು ಹೋಗಿ ಟೆಂಪೋ‌ ಚರಂಡಿಗೆ

ಬೆಳ್ತಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನ ಮಾರನಹಳ್ಳಿ ಕೆಳಗಡೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಶನಿವಾರ ನಡೆದಿದೆ. ರಾಜಹಂಸ‌ ಬಸ್ ಹಾಗೂ ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಅಪಘಾತ ತಪ್ಪಿಸಲು ಹೋಗಿ ಟೆಂಪೋ‌ ಚರಂಡಿಗೆ…

Read more

ಯೂನಿಯನ್ ಬ್ಯಾಂಕ್ ಎಸಿಯೊಳಗೆ ಹೆಬ್ಬಾವಿನ ಮರಿ ಪ್ರತ್ಯಕ್ಷ

ಮಂಗಳೂರು : ಮಂಗಳೂರಿನಲ್ಲಿ ಬ್ಯಾಂಕ್‌ನ ಎಸಿಯೊಳಗೆ ಹೆಬ್ಬಾವಿನ ಮರಿಯೊಂದು ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ನಗರದ ಕೊಡಿಯಾಲ್ ಬೈಲ್ ಯೂನಿಯನ್ ಬ್ಯಾಂಕ್‌ನ ಎ.ಸಿ.ಯೊಳಗೆ ಹೆಬ್ಬಾವು ಮರಿ ಕಾಣ ಸಿಕ್ಕಿದ್ದು, ಉರಗ ತಜ್ಞ ಗಂಗೇಶ್ ಬೋಳಾರ್ ಅವರು ಹೆಬ್ಬಾವಿನ ಮರಿಯನ್ನು ರಕ್ಷಣೆ ಮಾಡಿದ್ದಾರೆ. ಹೆಬ್ಬಾವು‌…

Read more