ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಶ್ರೀ ಹರ್ದೀಪ್ ಎಸ್ ಪುರಿ ಅವರನ್ನು ಭೇಟಿಯಾಗಿ ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಜಿಎಂಪಿಎಲ್ ಕಂಪೆನಿ ಸ್ವಾಧೀನ ಪಡಿಸಿಕೊಂಡ ಜೆಬಿಎಫ್ ಕಂಪೆನಿಯ ಉದ್ಯೋಗಿಗಳನ್ನು ಖಾಯಂಗೊಳಿಸುವುದರ ಕುರಿತು ಸಚಿವರಲ್ಲಿ ಮಾತುಕತೆ ನಡೆಸಿದ ಸಂಸದರು.

ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಸ್ಥಾಪಿಸುವ ಸಾಧ್ಯತೆಗಳ ಬಗ್ಗೆ ಸಂಸದರು ಈ ಸಂದರ್ಭದಲ್ಲಿ ಚರ್ಚಿಸಿದರು.