Mangaluru

ಅಕ್ರಮ ಜಾನುವಾರು ಸಾಗಾಟ; ಇಬ್ಬರು ವಶಕ್ಕೆ

ಭಟ್ಕಳ : ಭಟ್ಕಳದಿಂದ ಮಂಗಳೂರು ಭಾಗಕ್ಕೆ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಜೈನುಲ್ಲಾ ಚಮನ್ ಸಾಬ್ (28), ಇಮಾಮ್ ಹುಸೇನ್ ಮೌಲಾಲಿ ಸಾಬ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ…

Read more

ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ : 5 ಮಂದಿ ಅಂತಾರಾಜ್ಯ ಕ್ರಿಮಿನಲ್ಸ್ ಅರೆಸ್ಟ್

ಮಂಗಳೂರು : ಮಾದಕ ವಸ್ತು ಹಾಗೂ ಅಕ್ರಮ ಪಿಸ್ತೂಲ್ ಸಾಗಾಟ, ಮಾರಾಟಕ್ಕೆ ಸಂಬಂಧಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬೇಕಾಗಿದ್ದ ಐವರು ಅಂತಾರಾಜ್ಯ ಕುಖ್ಯಾತ ಕ್ರಿಮಿನಲ್‌ಗಳನ್ನು ಸಿಸಿಬಿ ಪೊಲೀಸರು 24 ಗಂಟೆ ಅವಧಿಯಲ್ಲಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಕೇರಳ- ಕರ್ನಾಟಕ ರಾಜ್ಯಗಳಲ್ಲಿ ಹಲವು…

Read more

ಅದಾನಿ ಗ್ರೂಪ್‌ನಿಂದ ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ 20 ಲಕ್ಷ ದೇಣಿಗೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಸಮೀಪದ ಅದ್ಯಪಾಡಿ ಗ್ರಾಮದಲ್ಲಿ ನೆಲೆಸಿರುವ ಐತಿಹಾಸಿಕ ಶ್ರೀ ಆದಿನಾಥೇಶ್ವರ ದೇವಲಾಯದ ಜೀರ್ಣೋದ್ಧಾರಕ್ಕೆ ಅದಾನಿ ಸಮೂಹವು ರೂ. 20 ಲಕ್ಷ ದೇಣಿಗೆಯನ್ನು ಘೋಷಿಸಿದೆ. ಅನುದಾನ ಪತ್ರವನ್ನು ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೆಶಕರು ಹಾಗೂ ಅಧ್ಯಕ್ಷರಾದ…

Read more

ಪತ್ನಿಗೆ ಹಲ್ಲೆ ನಡೆಸಿ ವಿಷಪ್ರಾಶನಗೈದು ಹತ್ಯೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

ಮಂಗಳೂರು : ಪತ್ನಿಗೆ ಹಲ್ಲೆ ನಡೆಸಿ ವಿಷಪ್ರಾಶನ ಮಾಡಿ ಹತ್ಯೆಗೈದ ಪತಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂಧ್ಯಾ ಎಸ್‌. ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಉಳ್ಳಾಲ ತಾಲೂಕು ಸೋಮೇಶ್ವರ ಗ್ರಾಮದ ಕುಂಪಲ ಚೇತನ ನಗರದ…

Read more

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಚಾಲನೆ : ಸಂಸದ ಚೌಟ

ಮಂಗಳೂರು : ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದ್ದು, ಮಾರ್ಚ್‌ ಅಂತ್ಯದೊಳಗೆ ಇದಕ್ಕೆ ಚಾಲನೆ ನೀಡುವರು ಎಂದು ಸಂಸದ ಕ್ಯಾ|ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ…

Read more

ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ಹೊಸ ಕೋಚ್‌ಗಳಲ್ಲಿ ಲೋಪ : ದೂರು ನಿವಾರಣೆಗೆ ಸಚಿವರನ್ನು ಭೇಟಿಯಾದ ಸಂಸದ ಕೋಟ

ಉಡುಪಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೇ ರಾಜ್ಯ ಸಚಿವರನ್ನು ಭೇಟಿಯಾಗಿ ಮತ್ಸ್ಯಗಂಧ ರೈಲಿಗೆ 2024ರಲ್ಲಿ ತಯಾರಾದ ಹೊಸ LHB ಕೋಚ್‌ಗಳ ಜೊತೆಗೆ 2020‌ರಲ್ಲಿ ತಯಾರಾದ ಹಳೆಯ LHB ಕೋಚ್‌ಗಳನ್ನು ಸೇರಿಸುವ ಇಲಾಖೆಯ ಕಾರ್ಯವನ್ನು ಸಚಿವರ ಗಮನಕ್ಕೆ ತಂದಿದ್ದಾರೆ.…

Read more

ಮಂಗಳೂರು ಜೈಲಿನಲ್ಲಿ ಫುಡ್ ಪಾಯಿಸನ್ 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥ

ಮಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿನ ಸುಮಾರು ಮೂವತ್ತಕ್ಕೂ ಅಧಿಕ ಕೈದಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಮಧ್ಯಾಹ್ನ ಆಹಾರ ಸೇವಿಸಿದ ಕೆಲ ಸಮಯದ ಬಳಿಕ ಕೈದಿಗಳು ವಾಂತಿ ಮಾಡಲು ಆರಂಭಿಸಿದ್ದಾರೆ. ಇನ್ನೂ ಕೆಲವರಿಗೆ ವಾಂತಿಭೇದಿ ಎರಡೂ ಕೂಡಾ ಕಾಣಸಿಕೊಂಡು ತಲೆ…

Read more

ವಾಮಾಚಾರ ಪ್ರಕರಣ – ಪ್ರಸಾದ್ ಅತ್ತಾವರ, ಆತನ ಪತ್ನಿ ತನಿಖೆಗೆ ಸಹಕರಿಸುತ್ತಿಲ್ಲ : ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್‌

ಮಂಗಳೂರು : ಮೈಸೂರಿನ ‘ಮುಡಾ’ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್‌ಟಿಐ ಕಾರ್ಯಕರ್ತ ಗಂಗರಾಜು ಫೋಟೋಗಳಿಗೆ ವಾಮಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ರಾಮಸೇನೆ ಸ್ಥಾಪಕ ಪ್ರಸಾದ್ ಅತ್ತಾವರ ಮತ್ತು ಆತನ ಪತ್ನಿ, ಉಡುಪಿಯಲ್ಲಿ ಸಬ್‌ಇನ್ ಸ್ಪೆಕ್ಟರ್ ಆಗಿರುವ ಸುಮಾ…

Read more

ಉದ್ಯಾವರ ಕೆನರಾ ಬ್ಯಾಂಕ್ ಎಟಿಎಂನಿಂದ ಹಣ ಕಳವಿಗೆ ವಿಫಲ ಯತ್ನ – ಇಬ್ಬರು ಆರೋಪಿಗಳ ಬಂಧನ

ಉಡುಪಿ : ಉಡುಪಿ ಸಮೀಪದ ಉದ್ಯಾವರದ ಕೆನರಾ ಬ್ಯಾಂಕಿನ ಎಟಿಎಂನಿಂದ ಹಣ ಕಳವು ಮಾಡಲು ವಿಫಲ ಯತ್ನ ನಡೆಸಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜನಾಡಿಯ ಅಬೂಬಕ್ಕರ್‌ಸಿದ್ದಿಕ್ (24) ಮತ್ತು ಪಡೀಲ್‌ನ ಮೊಹಮ್ಮದ್ ಯಾಸೀನ್(21) ಬಂಧಿತ ಆರೋಪಿಗಳು. ಆರೋಪಿಗಳಿಬ್ಬರು ಫೆಬ್ರವರಿ 12ರಂದು ಉದ್ಯಾವರದಲ್ಲಿ…

Read more

ಎಂಡಿಎಂಎ ಮಾರಾಟ: ಆರೋಪಿಯ ಸೆರೆ..!

ಮಂಗಳೂರು : ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಬೆಂಗಳೂರಿನಿಂದ ಮಂಗಳೂರಿಗೆ ಸಾಗಾಟ/ಮಾರಾಟ ಮಾಡುತ್ತಿದ್ದ ಬಂಟ್ವಾಳ ಸಜೀಪಮೂಡ ಗ್ರಾಮದ ಆಸೀಫ್‌ ಆಲಿಯಾಸ್‌ ಆಚಿ (32) ಎಂಬತನನ್ನು ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಈತನಿಂದ 1.35 ಲಕ್ಷ ರೂ. ಮೌಲ್ಯದ…

Read more