ಉಡುಪಿ : ಇಂದ್ರಾಳಿ ರೈಲ್ವೇ ಬ್ರಿಡ್ಜ್ ಬಳಿ ರಸ್ತೆಯು ಕಿರಿದಾಗಿದ್ದು, ಪದೇ ಪದೇ ಅಪಘಾತಗಳು ನಡೆಯುತ್ತಿದ್ದ ಕಾರಣ ಮಾನ್ಯ ಪೊಲೀಸ್ ಉಪಾಧಿಕ್ಷಕರದ ಡಿ ಟಿ ಪ್ರಭುರವರ ಮಾರ್ಗದರ್ಶನದಲ್ಲಿ, ಮಾನ್ಯ ಮಣಿಪಾಲ ಪೊಲೀಸ್ ನಿರೀಕ್ಷಕರಾದ ದೇವರಾಜ್ ಟಿ ವಿ ರವರ ನೇತೃತ್ವದಲ್ಲಿ ಇಂದ್ರಾಳಿ ರೈಲ್ವೇ ಬ್ರಿಡ್ಜ್ ಬಳಿ ರಾ ಹೆ 166 ಎ ರಲ್ಲಿ ರಸ್ತೆಯ ಮದ್ಯೆ ದ್ವಿಭಾಜಕಕ್ಕೆ ಹಾಕಿರುವ ಕಲ್ಲುಗಳನ್ನು ಜೆಸಿಬಿಯಿಂದ ತೆಗೆಸಿ ಅಲ್ಲಿ ಬ್ಯಾರಿಕೆಡ್ಗಳನ್ನು ಹಾಕಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
Manipal Police
ಮಣಿಪಾಲ : ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್ಗೆ ಸ್ಕೂಟರ್ ಢಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಮಣಿಪಾಲದಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ಕೇಶವ (18) ಎಂದು ಗುರುತಿಸಲಾಗಿದೆ.
ಅವರು ಬೇರೆಯವರ ಸ್ಕೂಟರ್ ಅನ್ನು ಸವಾರಿ ಮಾಡಿಕೊಂಡು ಹೋಗಿದ್ದು ಜಿಲ್ಲಾಧಿಕಾರಿ ಕಚೇರಿಯ ಬಳಿ ಡಿವೈಡರ್ಗೆ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು.
ಕೂಡಲೇ ಆತನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಗಾಂಜಾ ಸಂಗ್ರಹ – ಕೇರಳ ವಿದ್ಯಾರ್ಥಿ ಪೊಲೀಸ್ ವಶಕ್ಕೆ
ಮಣಿಪಾಲ : ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಅಪಾರ್ಟ್ಮೆಂಟ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಪಾರ್ಟ್ಮೆಂಟ್ ರೂಮ್ ಮೇಲೆ ದಾಳಿ ಮಾಡಿ, ರೂಮ್ನಲ್ಲಿದ್ದ ಕೇರಳ ತಿರುವನಂತಪುರದ ಸಿದ್ದಾರ್ಥ್ (22) ಎಂಬಾತನನ್ನು ವಶಕ್ಕೆ ಪಡೆದು ಆತನಿಂದ 20,000 ರೂ. ಮೌಲ್ಯದ ಸುಮಾರು 388 ಗ್ರಾಂ ಗಾಂಜಾ ಹಾಗೂ 45,000 ರೂ. ಮೌಲ್ಯದ ಮೊಬೈಲ್ ಫೋನ್ನ್ನು ಜಪ್ತಿ ಮಾಡಲಾಗಿದೆ. ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಲಾಭಗಳಿಸುವ ಉದ್ದೇಶದಿಂದ ಈ ಗಾಂಜಾವನ್ನು ವಿದ್ಯಾರ್ಥಿ ಶೇಖರಿಸಿಟ್ಟಿರುವುದು ತನಿಖೆಯಿಂದ ಕಂಡು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 134/2024 ಕಲಂ: 20(ಬಿ) NDPS Actರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ತನಿಖೆಯಲ್ಲಿರುತ್ತದೆ.
ಮಣಿಪಾಲ ಠಾಣೆ ಪೊಲೀಸ್ ನಿರೀಕ್ಷಕರಾದ ದೇವರಾಜ್ ಟಿ.ವಿ ರವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.
ಮಣಿಪಾಲ: ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ರಜಾಕ್ (26), ಮುದುಕಪ್ಪ (39) ಎಂದು ಗುರುತಿಸಲಾಗಿದೆ.
ಚುನಾವಣೆ ನಿಮಿತ್ತ ಮದ್ಯಮಾರಾಟ ನಿಷೇಧವಿದ್ದರೂ 80 ಬಡಗಬೆಟ್ಟುವಿನ ಅಪಾರ್ಟ್ಮೆಂಟ್ವೊಂದರ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಬ್ದುಲ್ ರಜಾಕ್ ಹಾಗೂ ಮುದುಕಪ್ಪ ಎಂಬ ಇಬ್ಬರು ವ್ಯಕ್ತಿಗಳು ಮದ್ಯ ಮಾರಾಟ ಮಾಡುತ್ತಿದ್ದರು.
ಕಾರ್ಯಾಚರಣೆಗಿಳಿದ ಮಣಿಪಾಲ ಪೊಲೀಸರು ಅಬ್ದುಲ್ ರಜಾಕ್ನ ಬಳಿ ಇದ್ದ ಮದ್ಯ ತುಂಬಿದ 60 ಟೆಟ್ರಾ ಪ್ಯಾಕೆಟ್ ಹಾಗೂ ಮುದುಕಪ್ಪನ ಬಳಿ ಇದ್ದ 15 ಟೆಟ್ರಾ ಪ್ಯಾಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಬ್ರಹ್ಮಾವರದಿಂದ ಮಣಿಪಾಲದತ್ತ ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಶಾಲಾ ಬಸ್ ಚಾಲಕನಿಗೆ ಬಸ್ನಲ್ಲೇ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯಪ್ರಜ್ಞೆಯಿಂದ 60ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಸಂಜೆ ವೇಳೆ ಪೆರಂಪಳ್ಳಿಯಲ್ಲಿ ನಡೆದಿದೆ.
ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹ್ರದಯಾಘಾತವಾಗಿದ್ದು, ಕೂಡಲೇ ಆಲ್ವಿನ್ ಬಸ್ನ್ನು ತೀರ ಎಡಕ್ಕೆ ತಿರುಗಿಸಿ ನಿಲ್ಲಿಸಿದ್ದಾರೆ. ಬ್ರಹ್ಮಾವರ ಆಂಗ್ಲ ಮಾಧ್ಯಮ ಶಾಲೆಯ 60ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ವೇಳೆ ಬಸ್ನಲ್ಲಿದ್ದ ಸಹಾಯಕ ಸಿಬ್ಬಂದಿ ಅವರನ್ನು ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.