ಕಾರ್ಕಳ : ಮಿನಿ ಟೆಂಪೊವೊಂದು ಬ್ರೇಕ್ ವೈಪಲ್ಯಗೊಂಡು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಾಳ ಮುಳ್ಳೂರು ಎಂಬಲ್ಲಿ ಸಂಭವಿಸಿದೆ.
![](https://maaxmedia.in/wp-content/uploads/2025/02/Mini-Tempo-Accident-02-739x1024.jpeg)
ಮೃತನನ್ನು ಮಹಾರಾಷ್ಟ್ರ ಮೂಲದ ಜಿತೇಂದರ್ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಪ್ರಯಾಣಿಕರೆಲ್ಲ ಜಾತ್ರಾ ವ್ಯಾಪಾರಿಗಳಾಗಿದ್ದು
ಕಳಸ ಜಾತ್ರೆ ಮುಗಿಸಿ ಮಂದಾರ್ತಿ ಜಾತ್ರೆಗೆ ಹೋಗುತ್ತಿದ್ದರು. ವ್ಯಾಪಾರಿಗಳು ಪ್ರಯಾಣಿಸುತ್ತಿದ್ದ ವಾಹನ ಮಾಳ ಮುಳ್ಳೂರು ಘಾಟಿ ಕೆಳಗೆ ಪೆಟ್ರೋಲ್ ಬಂಕ್ ಬಳಿ ಬ್ರೇಕ್ ವೈಫಲ್ಯಕ್ಕೊಳಗಾಗಿ ಪಲ್ಟಿಯಾಗಿದೆ.
ರಾಜ, ಆದಿತ್ಯ, ಬಾಬು, ಶಾಬಾಸ್ ಗಾಯಗೊಂಡವರು.
ಗಾಯಾಳುಗಳನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.