ಉಡುಪಿ : ಕೇಂದ್ರ ಬಿಜೆಪಿ ಸರ್ಕಾರವು ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು. ನಗರದ ಆದಿ ಉಡುಪಿಯಲ್ಲಿರುವ ಆದಾಯ ತೆರಿಗೆ ಕಚೇರಿ ಮುಂದೆ ಈ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ಪ್ರಜಾಪ್ರಭುತ್ವದ ಅಂಗಸಂಸ್ಥೆಗಳಾದ ಈ.ಡಿ, ಸಿ.ಬಿ.ಐ, ಐ.ಟಿಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಆ ಸಂಸ್ಥೆಗಳನ್ನು ತನ್ನ ಕೈಗೊಂಬೆಗಳಂತೆ ಮಾಡಿ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.
ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಕೆಪಿಸಿಸಿ ಮುಖಂಡ ಎಂ ಎ ಗಫೂರ್, ರಮೇಶ್ ಕಾಂಚನ್, ಪ್ರಸಾದ್ ರಾಜ್ ಕಾಂಚನ್ ಸಹಿತ ಪಕ್ಷದ ನಾಯಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು.