ಉಡುಪಿ : ಮಲ್ಪೆ ಆದಿ ಉಡುಪಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಪ್ರಗತಿಯ ಬಗ್ಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು.
ಈಗಾಗಲೇ ಕರಾವಳಿ ಜಂಕ್ಷನ್ನಿಂದ ಆದಿ ಉಡುಪಿವರೆಗೆ ಕಟ್ಟಡಗಳನ್ನು ತೆರವು ಮಾಡಿ ಕಾಮಗಾರಿ ನಡೆಸಲು ಅವಕಾಶ ಮಾಡಿದ್ದು, ತಕ್ಷಣ ಕಾಮಗಾರಿ ಆರಂಭಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಗೆ ಸ್ಥಳ ನೀಡಿದವರಿಗೆ ಇರುವ ಪರಿಹಾರ ಮೊತ್ತವನ್ನು ತಕ್ಷಣ ಒದಗಿಸಲು ಹಾಗೂ ಈಗಾಗಲೇ ಕಾಮಗಾರಿಗಾಗಿ ತೆರವುಗೊಳಿಸಿರುವ ಸರಕಾರಿ ಶಾಲಾ ಆವರಣ ಗೋಡೆಯನ್ನು ಮರು ನಿರ್ಮಿಸಿ ಕೊಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಮಳೆಗಾಲ ಸಂದರ್ಭದಲ್ಲಿ ಮೀನುಗಾರಿಕಾ ಚಟುವಟಿಕೆ ಹಾಗೂ ಪ್ರವಾಸಿಗರ ದಟ್ಟಣೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ವೇಗ ನೀಡಬೇಕು ಎಂದರು.
ಸಭೆಯಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ತಹಶೀಲ್ದಾರ್ ಗುರುರಾಜ್, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಅಭಿಯಂತರರಾದ ಶ್ರೀ ಮಂಜುನಾಥ ನಾಯಕ್, ನಗರಸಭಾ ಸದಸ್ಯರಾದ ಶ್ರೀಮತಿ ಸುಮಿತ್ರಾ ನಾಯಕ್, ಶ್ರೀ ಸುಂದರ ಕಲ್ಮಾಡಿ, ಶ್ರೀ ಶ್ರೀಶ ಕೊಡವೂರು, ಶ್ರೀಮತಿ ಸವಿತಾ ಹರೀಶ್ ರಾಮ್, ಶ್ರೀಮತಿ ಎಡ್ಲಿನ್ ಕರ್ಕಡ, ಮಲ್ಪೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.