ಉಡುಪಿ : ಕಳೆದು ಐದು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೆರೆಯ ಭೀತಿ ಉಂಟಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 20) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
Tag:
Monsoon Update
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ, ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಶಾಲಾ ಕಾಲೇಜು ಮುಖ್ಯಸ್ಥರುಗಳು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಲಾಗಿದೆ.