ಉಡುಪಿ : ಉತ್ತರಕನ್ನಡದ ಶಿರೂರಿನಲ್ಲಿ ಮಣ್ಣು ಕುಸಿತ ದುರ್ಘಟನೆಯಲ್ಲಿ ಲಾರಿ ಸಮೇತ ನಾಪತ್ತೆಯಾಗಿದ್ದ ಚಾಲಕನ ಹುಡುಕಾಟಕ್ಕಾಗಿ ಮುಳುಗುತಜ್ಞ ಆಪದ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ಶಿರೂರಿಗೆ ತೆರಳಲಿದೆ.

ಶಿರೂರು ದುರಂತದಲ್ಲಿ ಈವರೆಗೆ 8 ಜನರ ಮೃತದೇಹ ಪತ್ತೆಯಾಗಿದೆ. ಲಾರಿ ಜೊತೆಗೆ ಚಾಲಕ ಅರ್ಜುನ್ ಮತ್ತು ಇತರ ಇಬ್ಬರು ವ್ಯಕ್ತಿಗಳ ಪತ್ತೆ ಇನ್ನೂ ಆಗಿಲ್ಲ.ಇದೀಗ ಲಾರಿ ಇದೆ ಎಂದು ಶಂಕಿಸಲಾದ ಸ್ಥಳದಲ್ಲಿ ಲಾರಿ ಇರುವಿಕೆಯನ್ನು ಖಾತ್ರಿ ಪಡಿಸಲು ಮತ್ತು ಲಾರಿ ಒಳಗಡೆ ಇರುವ ಚಾಲಕ ಅರ್ಜುನ್ನನ್ನು ಹೊರತೆಗೆಯಲು ಮಲ್ಪೆ ಆಪತ್ಭಾಂಧವ ಈಶ್ವರ್ ಮಲ್ಪೆಯವರಿಗೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ಕರೆ ಬಂದಿದೆ.
ಈಶ್ವರ್ ಮಲ್ಪೆ ಮತ್ತು ತಂಡ ಮಲ್ಪೆಯಿಂದ ಹೊರಟು ಶಿರೂರಿನಲ್ಲಿ ಅವಘಡ ನಡೆದ ಸ್ಥಳಕ್ಕೆ ತಲುಪಿ ಕಾರ್ಯಾಚರಣೆಯನ್ನು ಆರಂಭಿಸಲಿದೆ ಎಂದು ತಿಳಿದು ಬಂದಿದೆ.