ಕಟೀಲು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಡಿ. 7 ರಂದು ಮುಂಬೈಯಲ್ಲಿ ನಡೆಯುವ ವಿಶ್ವಬಂಟರ ಸಮಾಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ಅಸ್ರಣ್ಣ ಬಿಡುಗಡೆ ಗೊಳಿಸಿದರು.
ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಭುವನಾಭಿರಾಮ ಉಡುಪ, ಶರತ್ ಶೆಟ್ಟಿ, ಸಂತೋಷ್ ಶೆಟ್ಟಿ ಶೆಡ್ಡೆ, ರತ್ನಾಕರ ಶೆಟ್ಟಿ ಎಕ್ಕಾರ್, ಅಶೋಕ್ ಕುಮಾರ್ ಶೆಟ್ಟಿ ಮುಲ್ಕಿ, ಬಾಲಕೃಷ್ಣ ರೈ ಕೊಲ್ಲಾಡಿ, ಸಾಯಿನಾಥ ಶೆಟ್ಟಿ, ತೋನ್ಸೆ ಮನೋಹರ್ ಶೆಟ್ಟಿ, ದೇವಪ್ಪ ಶೆಟ್ಟಿ ಸಾಲೆತ್ತೂರು, ಅಮರೇಶ್ ಸಾಲೆತ್ತೂರು, ಅರವಿಂದ ರೈ, ಅಜಿತ್ ಶೆಟ್ಟಿ ಬಜಪೆ, ಹರೀಶ್ ಶೆಟ್ಟಿ ಬಜಪೆ, ಸಂದೀಪ್ ಶೆಟ್ಟಿ ಎಕ್ಕೂರು, ತೇಜಸ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.
Mumbai
ಜೂನ್ 9ರಂದು ಸುರತ್ಕಲ್ ಬಂಟರ ಸಂಘದ ಮಹಾಸಭೆ, ಸಹಾಯ ಹಸ್ತ, ಅಭಿನಂದನೆ, ವಿದ್ಯಾರ್ಥಿ ವೇತನ ವಿತರಣೆ
ಸುರತ್ಕಲ್ ಬಂಟರ ಸಂಘದ ವಾರ್ಷಿಕ ಮಹಾಸಭೆ ಜೂನ್ 9ರಂದು ನಡೆಯಲಿದೆ. ಈ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ವಾರ್ಷಿಕ ಮಹಾಸಭೆ, ಗ್ರಾಮವಾರು ಸಾಂಸ್ಕೃತಿಕ ಸ್ಪರ್ಧೆ, ಅಭಿನಂದನಾ ಸಮಾರಂಭ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣೆಯ ಕಾರ್ಯಕ್ರಮಗಳು ನಡೆಯಲಿದೆ.
ಸಮಾರಂಭವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ವಹಿಸುವರು.
ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಡಾ. ವೈ ಭರತ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬೆಂಗಳೂರು ಯುವ ಬಂಟರ ಸಂಘದ ಅಧ್ಯಕ್ಷ ರವೀಂದ್ರನಾಥ ಮಾರ್ಲ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಅಭಿನಂದನೆ, ನಿರಂತರ ಸಹಾಯಹಸ್ತ, ವಿದ್ಯಾರ್ಥಿ ವೇತನ ವಿತರಣೆ, ನೂತನ ಮನೆಯ ಕೀ ಹಸ್ತಾಂತರ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.