ಉಡುಪಿ : ಉಡುಪಿಯ ಖ್ಯಾತ ಛಾಯಾಗ್ರಾಹಕ ಗುರುದತ್ ಕಾಮತ್(58) ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಗುರುದತ್ ಕಾಮತ್ ಅವರು ಕಳೆದ ಒಂದು ವಾರದಿಂದ ಕಿಡ್ನಿ ವೈಫಲ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದರು.
ದೇಶ ವಿದೇಶಗಳಲ್ಲಿ ಅನೇಕ ಛಾಯಾಚಿತ್ರಗಳನ್ನು ತನ್ನ ಕ್ಯಾಮರಾ ಕಣ್ಣಿನಲ್ಲಿ ಸೆರೆಹಿಡಿದಿದ್ದ ಇವರು ಎಲ್ಲರ ಮೆಚ್ಚುಗೆ ಪಾತ್ರವಾಗಿದ್ದರು.
ತಮ್ಮ ಛಾಯಾಚಿತ್ರಗಳಿಗೆ ದೇಶ ವಿದೇಶಗಳಿಂದ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.