Public Interest

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ

ಉಡುಪಿ : ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ…

Read more

ಮಹಾಲಕ್ಷ್ಮೀ ಬ್ಯಾಂಕ್ ಸುಸ್ತಿದಾರರ ಎಫ್‌ಐ‌ಆರ್ ವಿರುದ್ಧ ಹೈಕೋರ್ಟ್ ತಡೆಯಾಜ್ಞೆ ಪ್ರತಿಯನ್ನು ರಘುಪತಿ ಭಟ್ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೀಡಲಿ : ಯಶ್‌ಪಾಲ್ ಸುವರ್ಣ ಆಗ್ರಹ

ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಇಂದು ಮತ್ತೊಮ್ಮೆ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ತನ್ನ ಸುಸ್ತಿದಾರರ ಎಫ್‌ಐ‌ಆರ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮೂಲಕ ತಡೆಯಾಜ್ಞೆ ತಂದಿದೆ, ಅದನ್ನು ತಕ್ಷಣ ತೆರವು ಮಾಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಪತ್ರ…

Read more

ಮಹಾಲಕ್ಷ್ಮಿ ಬ್ಯಾಂಕ್ ಅವ್ಯವಹಾರ ಆರೋಪ ಪ್ರಕರಣ; ಉಡುಪಿಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಹೇಳಿಕೆ

ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಮಹಾಲಕ್ಷ್ಮಿ ಬ್ಯಾಂಕ್ ಕುರಿತಾಗಿ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಮಹಾಲಕ್ಷ್ಮಿ ಬ್ಯಾಂಕ್ ಆಣೆ ಪ್ರಮಾಣಕ್ಕೆ ಬರಲು ಪತ್ರ ಬರೆದಿದ್ದುದಾಗಿ ಅವರು ತಿಳಿಸಿದ್ದಾರೆ. ಆದರೆ ಈ ಕುರಿತು ಪೇಜಾವರ ಶ್ರೀ ಮತ್ತು ಪಲಿಮಾರು ಶ್ರೀ ಅವರು…

Read more

ಭ್ರಷ್ಟ, ಜನ ವಿರೋಧಿ ರಾಜ್ಯ ಸರಕಾರವನ್ನು ವಜಾಗೊಳಿಸಲು ರಾಷ್ಟ್ರಪತಿಗೆ ಮನವಿ – ಬಿ.ವೈ.ವಿಜಯೇಂದ್ರ

ಬಂಟ್ವಾಳ : ಭ್ರಷ್ಟ, ಜನ ವಿರೋಧಿ, ಹಿಂದೂ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಬೇಕಾದ ಅಗತ್ಯವಿದೆ. ಆದ್ದರಿಂದ ರಾಜ್ಯ ಸರಕಾರದ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡಿ, ಸರ್ಕಾರವನ್ನು ವಜಾಗೊಳಿಸಲು ಮನವಿ ಸಲ್ಲಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.…

Read more

ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ ಘಟಕ ಉದ್ಘಾಟನೆ

ಅಕ್ಟೊಬರ್ : ಜರ್ಮನಿಯು ಏಕೀ‌ಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈ ಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್‌ನಲ್ಲಿರುವ ಒಂದು ರಂಗಮಂದಿರದಲ್ಲಿ ಸುಮಾರು ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯ‌ಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್…

Read more

ವಾಹನಗಳ ಸಾಮೂಹಿಕ ಆತ್ಮಹತ್ಯೆ! ಟೋಲ್ ವಿರೋಧಿ ಹೋರಾಟ ಪ್ರದೇಶದಲ್ಲಿ ಗಮನ ಸೆಳೆದ ಅಣಕು ಪ್ರದರ್ಶನ

ಪಡುಬಿದ್ರಿ-ಬೆಳ್ಮಣ್-ಕಾರ್ಕಳ ರಾಜ್ಯ ಹೆದ್ದಾರಿಗೆ ಟೋಲ್‌ಗೇಟ್ ನಿರ್ಮಿಸುವ ಹುನ್ನಾರ ನಡೆಯುತ್ತಿರುವ ಹಿನ್ನಲೆಯಲ್ಲಿ ಕಂಚಿನಡ್ಕದಲ್ಲಿ ಸಾರ್ವಜನಿಕವಾಗಿ ನಡೆಯುತ್ತಿರುವ ಪ್ರತಿಭಟನಾ ಸ್ಥಳದಲ್ಲಿ ವಾಹನಗಳು ಮರಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವ ಅಣಕು ಪ್ರದರ್ಶನ ಜನರ ಗಮನ ಸೆಳೆಯುತ್ತಿದೆ. ಈ ವಾಹನಗಳು ಬ್ಯಾಂಕ್ ಸಾಲ ಕಟ್ಟಲಾರದೆ ಆತ್ಮಹತ್ಯೆ…

Read more

ಪಡುಬಿದ್ರಿ – ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದ ಟೋಲ್‌ಗೇಟ್ ರದ್ದುಪಡಿಸಿರುವುದಾಗಿ ಅಧಿಕೃತ ಆದೇಶ

ಕಾಪು : ಪಡುಬಿದ್ರಿ–ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ಸ್ಥಾಪಿಸಲುದ್ದೇಶಿಸಿದ್ದ ಟೋಲ್‌ಗೇಟ್ ರದ್ದುಪಡಿಸಿರುವುದಾಗಿ ಲೋಕೋಪಯೋಗಿ ಇಲಾಖೆ ಸಚಿವರ ಕಚೇರಿಯಿಂದ ಶುಕ್ರವಾರ ಅಧಿಕೃತ ಆದೇಶ ಬಿಡುಗಡೆಯಾಗಿದೆ. ಟೋಲ್‌ಗೇಟ್ ರದ್ದುಪಡಿಸುವಂತೆ ಮತ್ತು ಈ ರಸ್ತೆಯಲ್ಲಿ ಟೋಲ್ ಸ್ಥಾಪನೆ ಪ್ರಕ್ರಿಯೆ ಕೈ ಬಿಡುವಂತೆ ಒತ್ತಾಯಿಸಿ ಮಾಜಿ ಸಚಿವ…

Read more

ರಾಜಕೀಯ ಕಾರಣಕ್ಕಾಗಿ ಮಹತ್ವಾಕಾಂಕ್ಷಿ ಯೋಜನೆಯೊಂದು ದಿಕ್ಕು ತಪ್ಪುತ್ತಿದೆ : ಪರಶುರಾಮ ಥೀಂ ಪಾರ್ಕ್ ವಿವಾದವನ್ನು ಹಿಂದುತ್ವ, ಧಾರ್ಮಿಕ ವಿಚಾರದಲ್ಲಿ ಎಳೆದು ತರುವುದು ಸರಿಯಲ್ಲ : ಸುನಿಲ್.ಕೆ.ಆರ್

ಪರಶುರಾಮ ಥೀಂ ಪಾರ್ಕ್‌ನ ಕುರಿತು ಕಳೆದ ಒಂದೂವರೆ ವರ್ಷದಲ್ಲಿ ತನಿಖೆ ನಡೆಸಿದರು ಸತ್ಯ ಬಹಿರಂಗ ಪಡಿಸಲು ಸಾಧ್ಯವಾಗಿಲ್ಲ. ಪ್ರವಾಸೋದ್ಯಮ ದೃಷ್ಟಿಯಿಂದ ರೂಪುಗೊಂಡಿರುವಂತಹ ಪರಶುರಾಮ ಥೀಮ್ ಪಾರ್ಕನ್ನು ಹಿಂದುತ್ವದ ಧಾರ್ಮಿಕ ವಿಚಾರದಲ್ಲಿ ಎಳೆದು ತರುವುದು ಸರಿಯಲ್ಲ. ಪರಶುರಾಮ ಥೀಮ್ ಪಾರ್ಕ್ ಮೂಲಕ ಬೈಲೂರು…

Read more

ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣ – ನಿರ್ಮಿತಿ ಕೇಂದ್ರದ ಅರುಣ್ ಕುಮಾರ್ ಅಮಾನತು

ಉಡುಪಿ : ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಅನುಷ್ಠಾನ ಅಧಿಕಾರಿಯಾಗಿ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಜಿಲ್ಲೆ ಇವರು ನಿರ್ಮಿಸಿದ್ದು ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105…

Read more

ಕಂಚಿನಡ್ಕ ಟೋಲ್ ಸಂಗ್ರಹ ಆದೇಶ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ : ಕ.ರ.ವೇ. ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ

ಕಾಪು : ಹಲವು ವಿಫಲ ಪ್ರಯತ್ನಗಳ ಬಳಿಕ ಇದೀಗ ಮತ್ತೆ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಪಡುಬಿದ್ರಿಯ ಕಂಚಿನಡ್ಕ ಬಳಿ ಟೋಲ್ ಸಂಗ್ರಹಕ್ಕೆ ಆದೇಶ ನೀಡಿದ ಬಗ್ಗೆ ತಿಳಿದುಬಂದಿದ್ದು, ಜನವಿರೋಧಿ ಅದೇಶವನ್ನು 10 ದಿನದೊಳಗೆ ರದ್ದುಪಡಿಸದಿದ್ದರೆ ವಿವಿಧ ಸಂಘಟನೆಗಳ ಜತೆಗೂಡಿ ಉಗ್ರ ಹೋರಾಟ…

Read more