Public Safety

ಅತ್ತೂರು ಚರ್ಚಿನ ಅಕ್ರಮ ಸ್ವಾಗತ ಗೋಪುರ ತೆರವಿಗೆ ಆಗ್ರಹ; ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ : ಹಿಂದೂ ಹಿತರಕ್ಷಣಾ ವೇದಿಕೆ ಎಚ್ಚರಿಕೆ

ಕಾರ್ಕಳ : ಕಾರ್ಕಳ ತಾಲೂಕಿನ ಅತ್ತೂರು ಗ್ರಾಮದಲ್ಲಿರುವ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ಅತ್ತೂರು ಸಂತ ಲಾರೆನ್ಸರ ಚರ್ಚ್ ಮಂಡಳಿಯವರು ಅಕ್ರಮವಾಗಿ ಭಾರಿ ಗಾತ್ರದ ಸ್ವಾಗತ ಗೋಪುರವನ್ನು ಕಟ್ಟಿದ್ದು, ಇದು ಸರ್ವೋಚ್ಚ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದ್ದು…

Read more

ಗರುಡ ಗ್ಯಾಂಗ್‌ಗೆ ಹಣಕಾಸಿನ ನೆರವು : ಯುವತಿ ಅರೆಸ್ಟ್

ಉಡುಪಿ : ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ…

Read more

ಗಾಂಜಾ ಸಾಗಾಟ ಪ್ರಕರಣ : ಆರೋಪಿಗಳಿಗೆ ಶಿಕ್ಷೆ

ಸುಳ್ಯ : ಗಾಂಜಾ ಸಾಗಾಟದ ಪ್ರಕರಣದ ವಿಚಾರಣೆ ನಡೆಸಿ, ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2018ರ ಮಾರ್ಚ್‌ 28ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್‌ ಬಳಿ ಮೋಟಾರು ಸೈಕಲ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ…

Read more

ಬಸ್- ಬೈಕ್ ನಡುವೆ ಭೀಕರ ಅಪಘಾತ; ಪೌರಕಾರ್ಮಿಕ‌ ಸ್ಥಳದಲ್ಲೇ ಮೃತ್ಯು

ಉಡುಪಿ : ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ನಡೆದ ಅಪಘಾತದಲ್ಲಿ ಪುರಸಭೆ ಪೌರಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹಂಗಳೂರು ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೂಲತಃ ಬಾರಕೂರಿನ ನಿವಾಸಿ, ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ…

Read more

ಕುಂದಾಪುರ ಸರ್ವಿಸ್ ರಸ್ತೆಯಲ್ಲಿ ಮರಣ ಕಂದಕ; ದ್ವಿಚಕ್ರ ಸವಾರರ ಪ್ರಾಣಕ್ಕೇ ಕಂಟಕ!

ಕುಂದಾಪುರ : ಸದ್ಯ ಜಿಲ್ಲೆಯಲ್ಲಿ ಮಳೆ ಇಳಿಮುಖವಾಗಿದೆ. ಆದರೆ ಮಳೆಯ ಅವಾಂತರ ಮುಂದುವರೆದಿದೆ. ಕುಂದಾಪುರ ನಗರದ ಹಂಗಳೂರು – ಮೂರುಕೈ ಬಳಿಯ ಸರ್ವಿಸ್ ರಸ್ತೆಯಲ್ಲಿ ಸತತ ಸುರಿದ ಜಡಿ ಮಳೆಗೆ ಕಂದಕವೊಂದು ಸ್ರಷ್ಟಿಯಾಗಿದ್ದು, ದ್ವಿಚಕ್ರ ವಾಹನ ಸವಾರರು ಸರತಿಯಂತೆ ಬಿದ್ದು ಗಾಯಗೊಳ್ಳುತ್ತಿದ್ದರೂ…

Read more

ಉಡುಪಿ ಜಿಲ್ಲೆಯ ಜನರ ನೋವಿಗೆ ಸ್ಪಂದಿಸದ ಉಸ್ತುವಾರಿ ಸಚಿವರನ್ನು ಬದಲಾಯಿಸಿ – ಶ್ರೀನಿಧಿ ಹೆಗ್ಡೆ

ಉಡುಪಿ : ಜಿಲ್ಲೆಯಲ್ಲಿ ವರುಣನ ಆರ್ಭಟ ದೊಡ್ಡ ಮಟ್ಟದಲ್ಲಿ ಹಾನಿಗೀಡು ಮಾಡಿದರೂ ಕೂಡ ಜಿಲ್ಲಾ ಉಸ್ತುವಾರಿ ಸಚಿವರು ಇನ್ನೂ ಜಿಲ್ಲೆಯ ಜನರ ಸಮಸ್ಯೆಗೆ ಪರಿಹಾರ ಅಥವಾ ಕನಿಷ್ಠ ಪಕ್ಷ ಜನತೆಗೆ ಸಾಂತ್ವನ ಹೇಳುವ ಕೆಲಸಕ್ಕೂ ಮುಂದಾಗಲಿಲ್ಲ ಎನ್ನುವುದು ವಿಪರ್ಯಾಸ ಎಂದು ಬಿಜೆಪಿ…

Read more

ಉಡುಪಿ ಮಳೆ; ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ತೀವ್ರ ಮಳೆಯ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾಡಳಿತ ವತಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮುಂಚಿತವಾಗಿಯೇ ಉಡುಪಿಯಲ್ಲಿ ಪ್ರಗತಿ…

Read more

ಕರಾವಳಿಯಲ್ಲಿ ‘ಚಡ್ಡಿಗ್ಯಾಂಗ್’ ಕಳ್ಳರ ತಂಡ ಸಕ್ರಿಯ – ಸಾರ್ವಜನಿಕರೇ ಎಚ್ಚರ..!

ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗಗಳಲ್ಲಿ ‘ಚಡ್ಡಿ ಗ್ಯಾಂಗ್’ ಎಂಬ ಹೈದರಾಬಾದ್, ಮಧ್ಯಪ್ರದೇಶ, ರಾಜಸ್ಥಾನ ಮೂಲದ ಕಳ್ಳರ ತಂಡವೊಂದು ಸಕ್ರಿಯವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚರವಾಗಿರಬೇಕೆಂದು ಪೊಲೀಸ್ ಇಲಾಖೆ ತಿಳಿಸಿದೆ. ಶನಿವಾರ ರಾತ್ರಿ ಮಂಗಳೂರಿನ ಕೋಡಿಕಲ್‌ನಲ್ಲಿ ನಡೆದ ಮನೆಯೊಂದಕ್ಕೆ…

Read more

ಉಡುಪಿ ಜಿಲ್ಲೆಯಲ್ಲಿ ಮುಂದುವರಿದ ಪುನರ್ವಸು ಮಳೆ ಅಬ್ಬರ; ಜನ, ಜಾನುವಾರುಗಳ ರಕ್ಷಣೆ

ಉಡುಪಿ : ಜಿಲ್ಲೆಯಲ್ಲಿ ನಿನ್ನೆ ಪ್ರಾರಂಭಗೊಂಡ ಮಳೆ ಮುಂದುವರೆದಿದ್ದು ಉಡುಪಿಯ ಹಲವೆಡೆ ಜನ ಜಾನುವಾರುಗಳನ್ನು ಅಗ್ನಿಶಾಮಕ ದಳ ರಕ್ಷಣೆ ಮಾಡಿದೆ. ಮುಖ್ಯವಾಗಿ ತಗ್ಗುಪ್ರದೇಶಗಳಾದ ಬೈಲಕೆರೆ, ಕಲ್ಸಂಕ ಮಠದಬೆಟ್ಟುವಿನ ಬಹುಭಾಗ ಜಲಾವೃತಗೊಂಡಿವೆ. ಗುಂಡಿಬೈಲುವಿನಲ್ಲಿ ನೆರೆ ನೀರು ಮನೆಗಳು ಮತ್ತು ಅಂಗಡಿಗಳಿಗೆ ನುಗ್ಗಿದ್ದ ಅಗ್ನಿಶಾಮಕ…

Read more

ರೆಡ್ ಅಲರ್ಟ್ ಹಿನ್ನೆಲೆ – ನಾಳೆ (ಜು.9) ದ.ಕ ಜಿಲ್ಲೆಯ ಶಾಲೆ, ಪಿಯುಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜುಲೈ 9 ರಂದು ರಜೆಯನ್ನು ಘೋಷಿಸಿ‌…

Read more