ಮಂಗಳೂರು : ನಗರದ ಕೆಎಸ್ಆರ್ಟಿಸಿ ಬಸ್ನಲ್ಲಿ ನಿರ್ವಾಹಕ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಹೇಯ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕೊಣಾಜೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಉಳ್ಳಾಲ-ಮುಡಿಪು ಮಾರ್ಗದ 44.A 51 ಸಂಖ್ಯೆಯ ಕೆಎಸ್ಆರ್ಟಿಸಿ ಬಸ್ನಲ್ಲಿ ಈ ಘಟನೆ ನಡೆದಿದೆ. ಬಸ್ ಕಂಡಕ್ಟರ್ ಪ್ರದೀಪ್ ಎಂಬಾತ ಸೀಟಿನಲ್ಲಿ ಕುಳಿತಿದ್ದ ಯುವತಿಯ ಪಕ್ಕದಲ್ಲೇ ನಿಂತು ಆಕೆಯ ಖಾಸಗಿ ಅಂಗಕ್ಕೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಘಟನೆಯ ಗಂಭೀರತೆಯನ್ನು ಅರಿತ ಮಂಗಳೂರು ಕೆಎಸ್ಆರ್ಟಿಸಿ ವಿಭಾಗದ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಅವರು ತಕ್ಷಣವೇ ಆರೋಪಿ ಕಂಡಕ್ಟರ್ ಪ್ರದೀಪ್ನನ್ನು ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.