Public Transport

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಅಪಘಾತ; ಒರ್ವ ಮೃತ್ಯು

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬನ್ನೊಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಪಲ್ಟಿಯಾಗಿ ಓರ್ವ ಪ್ರಯಾಣಿಕ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಎ.4 ರಂದು ಮುಂಜಾನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ…

Read more

ಟೈಮಿಂಗ್‌ ವಿಚಾರದಲ್ಲಿ ಗಲಾಟೆ; ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌…!

ಉಡುಪಿ : ಮಣಿಪಾಲದ ಟೈಗರ್‌ ಸರ್ಕಲ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಟೈಮಿಂಗ್‌ ವಿಚಾರಕ್ಕೆ ಗಲಾಟೆ ನಡೆದು ಕಂಡಕ್ಟರ್ ಹಾಗೂ ಡ್ರೈವರ್ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಎ.2ರಂದು ಸಂಜೆ 4:30 ಗಂಟೆ ಸುಮಾರಿಗೆ ಮಣಿಪಾಲದ ಟೈಗರ್‌ ಸರ್ಕಲ್‌…

Read more

ಉಡುಪಿಯಲ್ಲಿ ಬಂದ್ ಇಲ್ಲ – ಬಸ್, ಅಂಗಡಿ ಮುಂಗಟ್ಟು ಎಂದಿನಂತೆ ಓಪನ್, ಜನಜೀವನ ಯಥಾಸ್ಥಿತಿ

ಉಡುಪಿ : ಕರ್ನಾಟಕ ಬಂದ್‌ಗೆ ಇಂದು ಕನ್ನಡಪರ ಸಂಘಟನೆಗಳು ಕರೆನೀಡಿದ್ದರೂ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಎಂದಿನಂತೆ ಜನಜೀವನ ಯಥಾ ಸ್ಥಿತಿಯಲ್ಲಿದೆ. ಖಾಸಗಿ ಬಸ್‌ಗಳ ಓಡಾಟ ಅಭಾದಿತವಾಗಿದ್ದು ಸರ್ಕಾರಿ ಬಸ್‌ಗಳು ಕೂಡ ಎಂದಿನಂತೆ ಸಂಚಾರ ನಡೆಸುತ್ತಿವೆ. ಆಟೋ ಕ್ಯಾಬ್ ಸಂಚಾರದಲ್ಲೂ ಕೂಡ ವ್ಯತ್ಯಯ…

Read more

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಚಾಲನೆ : ಸಂಸದ ಚೌಟ

ಮಂಗಳೂರು : ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದ್ದು, ಮಾರ್ಚ್‌ ಅಂತ್ಯದೊಳಗೆ ಇದಕ್ಕೆ ಚಾಲನೆ ನೀಡುವರು ಎಂದು ಸಂಸದ ಕ್ಯಾ|ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ…

Read more

ಉಡುಪಿ – ಅಂಗಾರಕಟ್ಟೆ ನಡುವೆ ಸಂಚರಿಸಲು ಸರಕಾರಿ ಬಸ್ ವ್ಯವಸ್ಥೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

ಉಡುಪಿ : ಉಡುಪಿ – ಅಂಗಾರಕಟ್ಟೆ ನಡುವೆ ಸಂಚರಿಸಲಿರುವ ಸರಕಾರಿ ಬಸ್ಸಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಉಡುಪಿ – ಅಂಗಾರಕಟ್ಟೆ ಮಾರ್ಗವಾಗಿ ಸಂಚರಿಸಲು ಸರಕಾರಿ ಬಸ್ ವ್ಯವಸ್ಥೆ ಮಾಡುವಂತೆ ಸ್ಥಳೀಯ ಶಾಸಕರ…

Read more

ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ನಾಡ, ಆಲೂರು, ಹಕ್ಲಾಡಿ ಗ್ರಾಮಸ್ಥರಿಂದ ಉಡುಪಿಯಲ್ಲಿ ಧರಣಿ

ಉಡುಪಿ : ಸರಕಾರಿ ಬಸ್ ಸೌಲಭ್ಯ ಇಲ್ಲದ ಕುಂದಾಪುರ ತಾಲೂಕಿನ ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣ್ಕಿ, ನಾಡ, ಮೊವಾಡಿ ಗ್ರಾಮಸ್ಥರು ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಇಂದು ಮಣಿಪಾಲದ ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಧರಣಿ ನಡೆಸಿದರು.…

Read more

ಸರಕಾರಿ ಬಸ್ ಬರುತ್ತದೆ ಎಂದು ಕಾದ ಊರವರು, ಸಾರ್ವಜನಿಕರು ಸುಸ್ತು!

ಉಡುಪಿ : ಕೊನೆಗೂ ತಮ್ಮ ಊರಿಗೆ ಸರಕಾರಿ ಬಸ್ಸು ಬರುತ್ತೆ ಅಂತ ಜನ ಖುಷಿಯಿಂದ ಕಾದದ್ದೇ ಬಂತು‌. ಉಡುಪಿ ಜಿಲ್ಲೆಯ ಪೆರಣಂಕಿಲ ಸಮೀಪದ ಹಂಗಾರಕಟ್ಟೆಯಲ್ಲಿ ನಿಗದಿಯಾದಂತೆ ಇಂದು ಸರ್ಕಾರಿ ಬಸ್ ಬರಬೇಕಿತ್ತು. ಜನರು ಹಾರ, ತುರಾಯಿಗಳೊಂದಿಗೆ ಬಸ್ಸನ್ನು ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದರು.…

Read more

ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ ಹಾಗೂ ನಿರ್ವಾಹಕರಿಗೆ ಶಿಕ್ಷೆ

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದು, ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2019ರ ಆ. 24ರಂದು ಘಟನೆ ನಡೆದಿತ್ತು. ಆಪಾದಿತ ವಿಷ್ಣು ಕುಮಾರ್‌ ಮತ್ತು ವಿಜಯಕುಮಾರ್‌…

Read more

ಸಾರಿಗೆ ದರ ಹೆಚ್ಚಳ ಜನ ವಿರೋಧಿ : ಉಡುಪಿ ಜಿಲ್ಲಾ ಸಿಪಿಐಎಂ ಖಂಡನೆ

ಉಡುಪಿ : ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15ರಷ್ಟು ಹೆಚ್ಚಿಸಿರುವ ರಾಜ್ಯ ಸರಕಾರ ಕ್ರಮವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ. ಡೀಸೆಲ್ ದರಗಳ ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚ ಹೆಚ್ಚಳದ ನೆಪದಲ್ಲಿ ದರ…

Read more

ಉಚ್ಚಿಲದಲ್ಲಿ ಕೆಎಸ್ಆರ್‌ಟಿ‌ಸಿ ಬಸ್ ಡಿಕ್ಕಿ; ಪಾದಾಚಾರಿ ಸಾವು

ಉಚ್ಚಿಲ : ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ.ಮೃತಪಟ್ಟವರನ್ನು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಶಿವಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಉಚ್ಚಿಲದ…

Read more