ಮಲ್ಪೆ : ಮಹಾಲಕ್ಷ್ಮಿ ಕೋ-ಆಪರೇಟಿವ್ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ಅವ್ಯವಹಾರದ ಆರೋಪ ಕೇಳಿಬಂದಿದೆ. ಬ್ಯಾಂಕ್ನಲ್ಲಿ ಹಲವು ಮಂದಿಗೆ ಅನ್ಯಾಯ ಎಸಗಲಾಗಿದೆ ಎಂದು ಮಾಜಿ ಶಾಸಕ ರಘುಪತಿ ಭಟ್ ಕೂಡ ಈ ಹಿಂದೆ ಆರೋಪಿಸಿದ್ದರು. ಇದೀಗ ಬ್ಯಾಂಕ್ನಲ್ಲಿ ಅನ್ಯಾಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಹಲವು ಮಂದಿ ಇವತ್ತು ಮಲ್ಪೆ ಠಾಣೆ ಎದುರು ಮೌನ ಪ್ರತಿಭಟನೆ ನಡೆಸಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬಳಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಸಿಬ್ಬಂದಿ ಹಾಗೂ ಬ್ಯಾಂಕ್ ಅಧ್ಯಕ್ಷ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ದೀಪಕ್ ಡಿ ಶೆಣೈ, ರಕ್ಷಾ ಎಸ್, ಸಾಹಿನಾ, ಅಫ್ರೀನ್, ರಮೇಶ್ ಕಾಂಚನ್, ನವೀನ್ ಸಾಲ್ಯಾನ್, ನಾಗೇಂದ್ರ ಪುತ್ರನ್, ಗೋಪಾಲ್, ಜಗನ್ನಾಥ್ ಅಮೀನ್ ಸೇರಿದಂತೆ ಹಲವು ಸಂತ್ರಸ್ತರು ಉಪಸ್ಥಿತರಿದ್ದರು.
