Religious Visit
ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ, ದೇವರ ದರ್ಶನ
ಉಚ್ಚಿಲ : ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ದೇವಳಕ್ಕೆ ಆಗಮಿಸಿದ ಅವರನ್ನು ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಮನೋಹರ್ ಶೆಟ್ಟಿ ಸಾಯಿರಾಧ, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್, ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ರಾಘವೇಂದ್ರ ಸುವರ್ಣ ಬೈಕಾಡಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ : ಕೇಂದ್ರ ಸರ್ಕಾರದ ಎಂಎಸ್ಡಿಸಿ, ಎನ್ಸಿವಿಇಟಿ ಮಾಜಿ ಅಧ್ಯಕ್ಷರು ಡಾ. ನಿರ್ಮಲ್ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಡಾ. ನಿರ್ಮಲ್ಜೀತ್ ಸಿಂಗ್ ಕಲ್ಸಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿ, ಪರ್ಯಾಯ ಶ್ರೀ ಪಾದರಿಂದ ಪ್ರಸಾದ ಸ್ವೀಕರಿಸಿದರು.
ಕೇಂದ್ರ ಸರ್ಕಾರದ ಎಂಎಸ್ಡಿಸಿ ಸದಸ್ಯ ಕಾರ್ಯದರ್ಶಿ ಸಂತೋಷ್ ಕುಮಾರ್, ಎಂಸಿಎ ಬಿಕ್ರಮ್ ಜೀತ್ ಕಲ್ಸಿ, ಕೌಶಲ್ಯ ವಿಭಾಗ ಮುಖ್ಯಸ್ಥ ಡಾ. ಅಂಜಯ್, ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ ರಿಜಿಸ್ಟ್ರಾರ್ ಡಾ. ನಾರಾಯಣ ಶೆಣೈ, ಮಟ್ಟು ಶ್ರೀ ಲಕ್ಷ್ಮೀನಾರಾಯಣ ರಾವ್ ಹಾಗೂ ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯ ಉಪಸ್ಥಿತರಿದ್ದರು.
ಮಂಗಳೂರು : ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಏಕ್ತಾ ಕಪೂರ್ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಕುಟುಂಬದ ಜೊತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಏಕ್ತಾ ಕಪೂರ್, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಕೆಲ ಸಮಯ ದೇವಸ್ಥಾನದಲ್ಲಿ ಕುಟುಂಬದ ಜೊತೆ ಸಮಯ ಕಳೆದಿದ್ದಾರೆ. ಬಳಿಕ ದೇವಸ್ಥಾನದಲ್ಲಿ ಅವರಿಗೆ ದೇವರ ವಿಶೇಷ ವಸ್ತ್ರ ನೀಡಿ ಗೌರವಿದ್ದಾರೆ.
ಬಳಿಕ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಏಕ್ತಾ ಕಪೂರ್ ಕುಟುಂಬ ಭೇಟಿ ಕೊಟ್ಟಿದ್ದಾರೆ.
ಏಕ್ತ ಕಪೂರ್ ಹಿಂದಿ ಸಿನಿಮಾರಂಗದಲ್ಲಿ ಸೀರಿಯಲ್ ಮತ್ತು ಸಿನಿಮಾ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಏಕ್ ವಿಲನ್, ಬಿಗ್ ಬಿ ಮತ್ತು ರಶ್ಮಿಕಾ ನಟನೆಯ ‘ಗುಡ್ ಬೈ’ ಸಿನಿಮಾ, ಯೂ ಟರ್ನ್ ಚಿತ್ರ ಸೇರಿದಂತೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
![](https://maaxmedia.in/wp-content/uploads/2024/07/Ekta-Kapoor-in-Kateel-02.jpeg)