ಉಡುಪಿ : ನಕ್ಸಲ್ ಶರಣಾಗತಿ ಬಗ್ಗೆ ಟಿವಿಗಳಲ್ಲಿ ಸುದ್ದಿ ನೋಡಿ ತಿಳಿದುಕೊಂಡೆ. ಸಿದ್ದರಾಮಯ್ಯನವರು ಒಂದು ಅವಕಾಶ ಕೊಟ್ಟಿದ್ದಾರೆ. ಅದರಂತೆ ಶರಣಾಗಿದ್ದೇನೆ. ಯಾವುದೇ ಒತ್ತಡ ಇರಲಿಲ್ಲ. ನನಗೆ ಸಿದ್ದರಾಮಯ್ಯನವರು ಹೆಲ್ಪ್ ಮಾಡಬೇಕು ಎಂದು ಶರಣಾಗತರಾದ ನಕ್ಸಲ್, ಲಕ್ಷ್ಮೀ ತೊಂಬಟ್ಟು ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತಿ ಪ್ರಕ್ರಿಯೆ ಬಳಿಕ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಎಸ್ಪಿ ಡಾ.ಅರುಣ್ ಕೆ ಸಮ್ಮಖ ಅವರು ಮಾತನಾಡಿದರು. ನಕ್ಸಲ್ ಶರಣಾಗತಿ ಪ್ಯಾಕೇಜ್ ಬಗ್ಗೆ ಮಾತನಾಡಿದ ಲಕ್ಷ್ಮೀ, ನಮ್ಮೂರಿಗೆ ರಸ್ತೆ, ನೀರು, ಶಾಲೆ, ಆಸ್ಪತ್ರೆ ಇಲ್ಲ. ಅದನ್ನು ಮಾಡಿಕೊಡಬೇಕು ಎಂದು ಹೇಳಿದರು.