ಕುಂದಾಪುರ : ಜೂನ್ 25ರಂದು ರಾತ್ರಿ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೋಲಿಸರು ಬಂಧಿಸಿದ್ದಾರೆ. ಮಂಗಳೂರು ಆಸೈಗೋಳಿಯ ನಿಝಾಮುದ್ದೀನ್ ಮತ್ತು ಮಹಮ್ಮದ್ ಅನ್ಸಾರ್ ಬಂಧಿತರು.
ಶಂಕರನಾರಾಯಣ ಠಾಣೆ ಪಿಎಸ್ಐ ನಾಸೀರ್ ಹುಸೇನ್, ಶಂಭುಲಿಂಗಯ್ಯ ಎಮ್.ಇ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
