ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.
Shri Krishna Math
ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಮೂರು ದಿನಗಳ ಪ್ರಾಚ್ಯ ವಿದ್ಯಾ ಸಮ್ಮೇಳನದ ಉದ್ಘಾಟನೆಗೆ ಬಾಬಾ ರಾಮದೇವ್ ಆಗಮಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಾಬಾ ರಾಮದೇವ್ರನ್ನು ಭವ್ಯವಾಗಿ ಸ್ವಾಗತಿಸಲಾಯಿತು.
ನೆರೆದ ಯೋಗಮಾತೆಯರು ಆರತಿಯನ್ನು ಬೆಳಗಿದರು. ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ, ವೇದಘೋಷದ ನಡುವೆ ಮಾಲಾರ್ಪಣೆ ಮಾಡಿ ಗಣ್ಯರನ್ನು ಸ್ವಾಗತಿಸಿದರು. ಉದ್ಯಮಿ ಶಾಂತೀಶ್ ಶೆಟ್ಟಿ, ರಾಘವೇಂದ್ರ ಭಟ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಬಾಬಾ ರಾಮ್ದೇವ್ ಜೊತೆಯಲ್ಲಿ ಬಾಲಕೃಷ್ಣಾಚಾರ್ಯ ಮತ್ತು ಮಾತಾ ಸಾಧ್ವೀ ದೇವಪ್ರಿಯಾ ದೀದೀಜಿ ಇದ್ದರು.
ಉಡುಪಿ : ಉಡುಪಿ ಜಿಲ್ಲೆಗೆ ಆಗಮಿಸಿದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಸ್ವಾಗತಿಸಿದರು.
ಕಿಶೋರ್ ಕುಮಾರ್ ಪುತ್ತೂರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಶೀರ್ವಚನ ಸ್ವೀಕರಿಸಿ ಮಂತ್ರಾಕ್ಷತೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.