ಉಡುಪಿ : ಉಡುಪಿ ನಗರ ಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ನಲ್ಲಿ ಸಮಾಲೋಚನಾ ಸಭೆ ನಡೆಯಿತು.
ಮಹಾ ನಗರ ಪಾಲಿಕೆ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತ್ಗಳಲ್ಲಿ ಈ ಬಗ್ಗೆ ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಯಿತು. ಪಂಚಾಯತ್ ನಿರ್ಣಯ ಕೈಗೊಂಡು ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆಯಲ್ಲಿ ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರತೀಕ್ ಬಾಯಲ್, ಉಡುಪಿ ನಗರ ಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.