ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು. ದಿನಾಂಕ : 01-08-2024ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ : 02.08.2024ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
Student Safety
ಉಡುಪಿ : ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆಗಸ್ಟ್ 1 (ಗುರುವಾರ)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ನಾಳೆ (ಆ.1) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಆದೇಶಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ಆಗಸ್ಟ್ 1ರಂದು ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ.
ವಿದ್ಯಾರ್ಥಿನಿಗೆ ಎದೆನೋವು – ಬಸ್ಸನ್ನೆ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಿದ ಚಾಲಕ ನಿರ್ವಾಹಕ
ಮಂಗಳೂರು : ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಹಠಾತ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ ಅನ್ನು ನಿಗದಿತ ರೂಟ್ನಲ್ಲಿ ಎಲ್ಲಿಯೂ ನಿಲ್ಲಿಸದೆ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಿದ ಘಟನೆ ಮಂಗಳವಾರ ನಡೆದಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೃಷ್ಣಪ್ರಸಾದ್ ಎಂಬ ಹೆಸರಿನ ಖಾಸಗಿ ಬಸ್ಸಿನಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ರೂಟ್ ನಂ.13F ಕೃಷ್ಣಪ್ರಸಾದ್ ಬಸ್ ಮಂಗಳಾದೇವಿ-ಕುಂಜತ್ತಬೈಲ್ ನಡುವೆ ಸಂಚರಿಸುತ್ತದೆ. ಎಂದಿನಂತೆ ಈ ಬಸ್ ಕೂಳೂರು ಮಾರ್ಗವಾಗಿ ಮಂಗಳಾದೇವಿ ಕಡೆಗೆ ಸಂಚರಿಸುತ್ತಿತ್ತು. ಬಂಗ್ರಕೂಳೂರಿನಲ್ಲಿ ಸುಮಾರು 15 ಮಂದಿ ಯೆನಪೋಯ ಕಾಲೇಜು ವಿದ್ಯಾರ್ಥಿಗಳು ಬಸ್ ಹತ್ತಿದ್ದಾರೆ. ಬಸ್ ಕೊಂಚ ಮುಂದೆ ಹೋಗಿ ಇನ್ನೇನು ಕೊಟ್ಟಾರ ತಲುಪುತ್ತಿದ್ದಂತೆ ಏಕಾಏಕಿ ಓರ್ವ ವಿದ್ಯಾರ್ಥಿನಿಗೆ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಚಾಲಕ ಗಜೇಂದ್ರ ಕುಂದರ್ ಮತ್ತು ನಿರ್ವಾಹಕರಾದ ಮಹೇಶ್ ಪೂಜಾರಿ ಹಾಗೂ ಸುರೇಶ್ ಬಸ್ ಅನ್ನು ನೇರ ಆಸ್ಪತ್ರೆಗೆ ಕೊಂಡೊಯ್ಯುವ ನಿರ್ಧಾರ ಮಾಡಿದ್ದಾರೆ.
ಗಜೇಂದ್ರ ಕುಂದರ್ ಆ್ಯಂಬುಲೆನ್ಸ್ ಮಾದರಿಯ ಸೈರಾನ್ ಹಾಕಿಕೊಂಡು ಬಸ್ ಅನ್ನು ಎಲ್ಲೂ ನಿಲ್ಲಿಸದೆ ಚಲಾಯಿಸಿದ್ದು, 6 ಕಿ.ಮೀ. ದೂರವನ್ನು ಕೇವಲ 6 ನಿಮಿಷಗಳಲ್ಲಿ ಕ್ರಮಿಸಿ ಆಸ್ಪತ್ರೆ ತಲುಪಿದ್ದಾರೆ. ಆಸ್ಪತ್ರೆಯ ಸೆಕ್ಯುರಿಟಿ, ಮತ್ತೊಂದು ಎಂದು ಯಾವುದನ್ನು ಗಣನೆಗೆ ತೆಗೆದುಕೊಳ್ಳದೆ ಬಸ್ ಅನ್ನು ಆವರಣದೊಳಗಡೆ ಕೊಂಡೊಯ್ದು ನಿಲ್ಲಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿನಿಗೆ ಕ್ಲಪ್ತ ಸಮಯದಲ್ಲಿ ಚಿಕಿತ್ಸೆ ದೊರೆಯುವಂತೆ ಮಾಡಿದ್ದಾರೆ.
ಮಲ್ಪೆ : ಕಲ್ಯಾಣ್ಪುರ ಮಿಲಾಗ್ರೀಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವಿದ್ಯಾಭ್ಯಾಸ ಮಾಡಿಕೊಂಡಿರುವ ಶಿವಾಜಿ(20) ಎಂಬವರ ಐಫೋನ್ ಕಳವಾಗಿದ್ದು ದೂರು ದಾಖಲಾಗಿದೆ.
ಇವರ ಕಾಲೇಜಿನಲ್ಲಿ ಪರೀಕ್ಷೆಯಿದ್ದು, ಬೆಳಿಗ್ಗೆ ಪರೀಕ್ಷಾ ಕೊಠಡಿಯ ಒಳಗೆ ಹೋಗುವಾಗ ತನ್ನ ಐ-ಪೋನ್15 ಮೊಬೈಲ್ ಇರುವ ಬ್ಯಾಗ್ನ್ನು ಕೊಠಡಿಯ ಹೊರಗಡೆ ಇಟ್ಟು ಹೋಗಿ ಪರೀಕ್ಷೆ ಬರೆದಿದ್ದರು. ಬಳಿಕ ಬಂದು ನೋಡುವಾಗ ಬ್ಯಾಗ್ ಇಟ್ಟ ಸ್ಥಳದಲ್ಲಿ ಇಲ್ಲದೆ ಇದ್ದು ಕಾಲೇಜಿನ ವಿದ್ಯಾರ್ಥಿಗಳಾದ ವೀಕ್ಷೀತ್ ಮತ್ತು ಆಕಾಶ್ ಎಂಬವರು ತೆಗೆದುಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ. ನಂತರ ಕಾಲೇಜಿನ ಬಳಿ ಇರುವ ಚರ್ಚ್ನ ಬಾವಿಯ ಬಳಿ ಬ್ಯಾಗ್ ಪತ್ತೆಯಾಗಿದ್ದು, ಪರಿಶೀಲಿಸಿದಾಗ ಬ್ಯಾಗ್ನಲ್ಲಿ ಮೊಬೈಲ್ ಇರಲಿಲ್ಲ. ಬ್ಯಾಗ್ ನಿಖಿಲ್ ಎಂಬ ವಿದ್ಯಾರ್ಥಿಯ ಕೈಯಲ್ಲಿ ಇದ್ದ ಬಗ್ಗೆ ಸಿಸಿ ಕ್ಯಾಮರದಲ್ಲಿದ್ದು, ಮೊಬೈಲ್ನ ಮೌಲ್ಯ ರೂಪಾಯಿ 79,000/- ಆಗಿರುವುದಾಗಿ ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಚರಂಡಿಗಿಳಿದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ದಳಿಮುರ್ಕ್ಕು ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.
ಬಸ್ ಶಿವಮೊಗ್ಗ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ಸಿನಲ್ಲಿ ಕೊಲ್ಲೂರು ಮೂಕಾಂಬಿಕ ಹೈಸ್ಕೂಲ್ನ 6 ವಿದ್ಯಾರ್ಥಿಗಳು ಹಾಗೂ ಪಿಯುಸಿಯ 11 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಪೈಕಿ ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ.
ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ, ಕೊಲ್ಲೂರು ಠಾಣೆಯ ಪಿಎಸ್ಐಗಳಾದ ವಿನಯ್ ಎಂ. ಕೊರ್ಲಹಳ್ಳಿ, ಸುಧಾರಾಣಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.
ಬೈಂದೂರು ಬಿಇಒ ನಾಗೇಶ್ ನಾಯಕ್ ಹಾಗೂ ಹೆಚ್ಚುವರಿ ಎಸ್ಪಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.
ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ : 15.07.2024ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ : 16.07.2024ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 16ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ರಜೆಯನ್ನು ಘೋಷಿಸಲಾಗಿದೆ.
ಈ ವೇಳೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಭಾರೀ ಮಳೆಗೆ ಶಾಲೆಯ ಅಡುಗೆ ಕೋಣೆ ಕುಸಿತ – ಮಕ್ಕಳಿಲ್ಲದ ಸಂದರ್ಭ ದುರ್ಘಟನೆ, ಅಪಾರ ಹಾನಿ
ಉಡುಪಿ : ಉಡುಪಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯ ಅಬ್ಬರಕ್ಕೆ ದೊಡ್ಡಣಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆಮನೆ ಗೋಡೆ ಕುಸಿದು ಬಿದ್ದಿದೆ. ಅಡುಗೆ ತಯಾರಿಸುವ ಕೋಣೆಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪಾರಾಗಿದ್ದಾರೆ.
ಭಾರೀ ಮಳೆ ನೀರಿಗೆ ತೇವಗೊಂಡು ಒಂದು ಭಾಗದ ಗೋಡೆ ಕುಸಿದು ಬಿದ್ದಿದೆ. ಗೋಡೆ ಕುಸಿದು ಬಿದ್ದ ಪರಿಣಾಮ ಅಡುಗೆ ಪರಿಕರಗಳು, ಗ್ಯಾಸ್ ಸಿಲಿಂಡರ್ ಮಕ್ಕಳು ಊಟಕ್ಕೆ ಬಳಸುವ 40ಕ್ಕೂ ಹೆಚ್ಚು ಸ್ಟೀಲ್ ಬಟ್ಟಲುಗಳು ಮಣ್ಣಿನಾಡಿ ಸಿಲುಕಿವೆ.
1990ರ ಸುಮಾರಿಗೆ ಇಲ್ಲಿ ಅಂಗನವಾಡಿಯನ್ನು ನಿರ್ಮಾಣ ಮಾಡಲಾಗಿತ್ತು. ಮುಂದೆ ಹೊಸ ಕಟ್ಟಡ ನಿರ್ಮಾಣವಾದಾಗ ಅಂಗನವಾಡಿ ಕೊಠಡಿಯನ್ನು ಅಡುಗೆಗೆ ಬಳಸಲಾಯಿತು. ಕಳೆದ ರಾತ್ರಿ ಅಂಗನವಾಡಿಯ ಗೋಡೆ ಕುಸಿದು ಬಿದ್ದಿದೆ. ಸದ್ಯ ಪಕ್ಕದ ಶಾಲೆಯ ಹಾಲ್ಗೆ ಅಡುಗೆ ಮನೆಯನ್ನು ಶಿಫ್ಟ್ ಮಾಡಲಾಗಿದೆ. ಅಡುಗೆ ಪರಿಕರಗಳು, ಕುರ್ಚಿ- ಮೇಜು, ಬೆಂಚುಗಳು ಮಣ್ಣಿನ ಗೋಡೆಯಡಿ ಸಿಲುಕಿವೆ.
ಶಾಲೆಯ ಕೆಲ ಕೊಠಡಿಗಳ ಛಾವಣಿ ಸೋರುತ್ತಿದೆ. ಇದೇ ಅಡುಗೆ ಕೋಣೆಯಲ್ಲಿ ಮಕ್ಕಳು ಊಟಕ್ಕೆ ಕುಳಿತುಕೊಳ್ಳುತ್ತಿದ್ದರು. ಶಿಕ್ಷಕರು, ಅಡುಗೆಯವರು, ಸಹಾಯಕರು ಓಡಾಡುವ ಸಂದರ್ಭ ಘಟನೆ ನಡೆದಿದ್ದರೆ ದೊಡ್ಡ ಅನಾಹುತಾಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ ಎಂದು ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಹೇಳಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜುಲೈ 9 ರಂದು ರಜೆಯನ್ನು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜು 9ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ, ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು. ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ.