ಉಡುಪಿ : ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 30ರಂದು ನಡೆಯಲಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಅತ್ಯಂತ ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಟಿ.ಇ.ಟಿ. ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಿದ್ದರು.
ಶಿಕ್ಷಕರ ಅರ್ಹತಾ ಪರೀಕ್ಷೆಯು ಜೂನ್ 30ರಂದು ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ ವಿದ್ಯುತ್ಚ್ಛಕ್ತಿಯಿಂದ ಬೆಳಕಿನ ವ್ಯವಸ್ಥೆ ಸೇರಿದಂತೆ ಇತರೆಲ್ಲಾ ಸೌಲಭ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.