Traditional Art

ಹಿರಿಯ ನಾದಸ್ವರ ವಾದಕ ಅಲೆವೂರು ಬೊಗ್ರ ಶೇರಿಗಾರ್ ನಿಧನ

ಉಡುಪಿ : ಹಿರಿಯ ನಾದಸ್ವರ ವಾದಕ ಅಲೆವೂರು ಬೊಗ್ರ ಶೇರಿಗಾರ್ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾದರು. ಅಸಂಖ್ಯಾತ ದೇವಸ್ಥಾನ, ಗರೋಡಿ, ದೈವಸ್ಥಾನ, ನಾಗರಾಧನೆಯಲ್ಲಿ ಹಿರಿಯ ನಾಗಸ್ವರ ವಾದಕರಾಗಿ ಅಲೆವೂರು ಬೋಗ್ರ ಶೇರಿಗಾರ್ ಪ್ರಸಿದ್ದಿಯನ್ನು ಪಡೆದಿದ್ದರು. ನಾಗಸ್ವರದ ಕಲಾರಾಧನೆಯನ್ನು ಆತ್ಮಸಮರ್ಪಣಾ…

Read more

ಯಕ್ಷಗಾನ ಕಾರ್ಯಾಗಾರಗಳ ಮೂಲಕ ಅಕಾಡೆಮಿಯಿಂದ ಯಕ್ಷಗಾನಕ್ಕೆ ಶಕ್ತಿ ತುಂಬುವ ಕಾರ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಅಭಿಪ್ರಾಯ

ಉಡುಪಿ : ಯಕ್ಷಗಾನ ಕಲೆ ಒಂದು ವಿಶ್ವವಿದ್ಯಾಲಯವಿದ್ದಂತೆ. ಈ ಕಲೆಯ ಆಳ, ವಿಸ್ತಾರ, ಸೊಬಗನ್ನು ಯಕ್ಷಾಸಕ್ತರಿಗೆ ಮುಟ್ಟಿಸಲು ವಿವಿಧ ಕಡೆಗಳಲ್ಲಿ ಯಕ್ಷಗಾನ ಕಾರ್ಯಾಗಾರಗಳನ್ನು ಅಕಾಡೆಮಿ ಹಮ್ಮಿಕೊಳ್ಳುವುದರ ಮೂಲಕ ಕಲೆಯ ಬೆಳೆವಣಿಗೆಗೆ ಪ್ರೋತ್ಸಾಹಿಸುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು…

Read more

ಯಕ್ಷಗುರು ಬನ್ನಂಜೆ ಸಂಜೀವ ಸುವರ್ಣ ಅವರ ಜೀವನ ಸಾಧನೆಯ ಸಮಗ್ರ ದಾಖಲೀಕರಣ : ಡಾ.ತಲ್ಲೂರು

ಉಡುಪಿ : ಉಡುಪಿಯ ಖ್ಯಾತ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಅವರ ಯಕ್ಷಗಾನ ಜೀವನ ಸಾಧನೆ ಬಗ್ಗೆ ಸಮಗ್ರ ದಾಖಲೀಕರಣಕ್ಕೆ ರಾಜ್ಯ ಯಕ್ಷಗಾನ ಅಕಾಡೆಮಿ ಮುಂದಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಉಡುಪಿಯ…

Read more

ಕೆ. ಸುರೇಂದ್ರ ಶೆಣೈ ಅವರಿಗೆ ಯಕ್ಷಗಾನ ಕಲಾರಾಧಕ ಪ್ರಶಸ್ತಿ

ಉಡುಪಿ : ಎರಡೂವರೆ ದಶಕ ಕಾಂತಾವರ, ಪುತ್ತೂರು, ಬಪ್ಪನಾಡು, ಸುಂಕದಕಟ್ಟೆ, ಸುರತ್ಕಲ್ ಮೇಳಗಳಲ್ಲಿ ಹಾಗು ದೀರ್ಘ ಕಾಲ ಹಲವು ಸಂಘಗಳಲ್ಲಿ ಕಲಾಸೇವೆಗೖದ ತೆಂಕುತಿಟ್ಟಿನ ಹಿರಿಯ ಭಾಗವತ ಕೆ. ಸುರೇಂದ್ರ ಶೆಣೈ ದಂಪತಿಯನ್ನು ಪುರಸ್ಕರಿಸುವ ಕಾರ್ಯಕ್ರಮ ಕೆರ್ವಾಶೆ ಮಹಾಲಿಂಗೇಶ್ವರ ದೇವಳದ ಆವರಣದಲ್ಲಿ ಜರಗಿತು.…

Read more

ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿ ಪ್ರಕಟ

ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಒಬ್ಬರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ 5 ಜನರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಹಾಗೂ 10 ಜನ ಗಣ್ಯರನ್ನು ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ. ತೆಂಕುತಿಟ್ಟು ಯಕ್ಷಗಾನ ಕಲಾವಿದರಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಇವರನ್ನು…

Read more

ಹಳೇ ಬೇರು ಹೊಸ ಚಿಗುರಿನ ಹಾಗೆ ಯಕ್ಷಗಾನ ಕಲೆ ಬೆಳೆಯಲಿ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು

ಉಡುಪಿ : ಹಳೆ ಬೇರು ಹೊಸ ಚಿಗುರು ಎಂಬoತೆ ಯಕ್ಷಗಾನ ಕೂಡಾ ಹೊಸತನವನ್ನು ಬೆಳೆಸಿಕೊಂಡು ತನ್ನ ಸಂಪ್ರದಾಯಿಕ ಚೌಕಟ್ಟಿನಲ್ಲಿಯೇ ಬೆಳೆದರೆ ಅದು ಜನಾನುರಾಗಿಯಾಗುತ್ತದೆ. ಆಧುನಿಕತೆಯ ಹೆಸರಿನಲ್ಲಿ ಪ್ರೇಕ್ಷಕರನ್ನು ರಂಜಿಸುವ ಧಾವಂತದಲ್ಲಿ ಕಲಾವಿದ ಹೆಜ್ಜೆ ತಪ್ಪಬಾರದು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ…

Read more

ಮುಸ್ಸಂಜೆಯಲ್ಲಿ ಮುದಗೊಳಿಸಿದ ಸಾಂಸ್ಕೃತಿಕ ಮೆರವಣಿಗೆ, ಸಮಯ, ಸೌಂದರ್ಯ, ಸೃಜನಶೀಲತೆಯ ಸಿಂಚನ ಶ್ರದ್ಧಾ – ಭಕ್ತಿಯ ತೇರಿಗೆ ಸಾಂಸ್ಕೃತಿಕ ಮೆರುಗು

ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೊದಲ ದಿನವಾದ ಮಂಗಳವಾರ ಉದ್ಘಾಟನೆಯ ಬಳಿಕ ಮೂಡಿಬಂದದ್ದು, ಶ್ರದ್ಧೆ-ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ. ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಿದಿರೆಯ ನಾಡಿಗೆ ಬಂದಂತೆ ಭಾಸವಾಯಿತು.…

Read more

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ ವಿಶ್ವವನ್ನೇ ಹೃದಯದಲ್ಲಿ ತುಂಬುವ ‘ವಿರಾಸತ್’ : ಹೆಗ್ಗಡೆ

ವಿದ್ಯಾಗಿರಿ (ಮೂಡುಬಿದಿರೆ): ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ‘ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.11 ರಿಂದ ಡಿ. 15ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ…

Read more

ಆಧುನಿಕತೆ ಯಕ್ಷಗಾನ ಕಲೆಗೆ ಮಾರಕವಾಗಿಲ್ಲ : ಡಾ.ನೀ.ಬೀ.ವಿಜಯ ಬಲ್ಲಾಳ್

ಉಡುಪಿ : ಯಕ್ಷಗಾನ ಕಲೆ ಎಲ್ಲಾ ಏರುಪೇರುಗಳನ್ನು ಎದುರಿಸಿದರೂ ಗಟ್ಟಿಯಾಗಿ ಬೆಳೆದು ನಿಂತಿದೆ. ಹವ್ಯಾಸಿ ಬಳಗ, ವೃತ್ತಿ ಮೇಳ ಕಲಾವಿದರು ಒಟ್ಟು ಸೇರಿ ಈ ಕಲೆಯನ್ನು ಬೆಳೆಸಿದ್ದಾರೆ. ಮೊಬೈಲ್ ಯುಗದಲ್ಲೂ ಯಕ್ಷಗಾನಕ್ಕೆ ತನ್ನದೇ ಆದ ಪ್ರೇಕ್ಷಕ ವೃಂದವಿರುವುದು ಈ ಕಲೆಯ ಉಳಿವು…

Read more

ಯಕ್ಷಗಾನ ಕಲಾವಿದ ಎಚ್. ಕೆ ವಸಂತ ಭಟ್ ಅಲ್ಪಕಾಲದ ಅಸೌಖ್ಯದಿಂದ ನಿಧನ

ಉಡುಪಿ : ಯಕ್ಷಗಾನ ಕಲಾವಿದ ವಸಂತ ಭಟ್ (64) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಹಳುವಳ್ಳಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೃಷ್ಣಯ್ಯರ ಪುತ್ರರಾದ ಇವರು ಅಮೃತೇಶ್ವರೀ, ಬಾಳೆಹೊಳೆ ಹಾಗೂ ದೀರ್ಘಕಾಲ ಗುತ್ಯಮ್ಮ ಮೇಳದಲ್ಲಿ ವೇಷಧಾರಿಯಾಗಿ ಕಲಾಸೇವೆಗೈದಿದ್ದಾರೆ. ದೇವೇಂದ್ರ, ಶತ್ರುಘ್ನ,…

Read more