ಕೊಣಾಜೆ : ಅಸೈಗೋಳಿ ಬಳಿಯ ತಿಪ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
![](https://maaxmedia.in/wp-content/uploads/2024/06/Advt-W-Badagubettu-CO-Op-Society.jpg)
ಮೃತ ಬೈಕ್ ಸವಾರನನ್ನು ದೇರಳಕಟ್ಟೆ ನಿವಾಸಿ ಜಲೀಲ್ ಮೆಡಿಕಲ್ ಎಂಬವರ ಪುತ್ರ ಅವ್ಸಾಫ್ (25) ಎಂದು ಗುರುತಿಸಲಾಗಿದೆ.
ತಿಪ್ಲಪದವು ಗ್ಯಾರೇಜ್ ಬಳಿಯಿಂದ ರಸ್ತೆಯಲ್ಲಿ ಲಾರಿ ಯುಟರ್ನ್ ಹೊಡೆಯುತ್ತಿದ್ದಾಗ ಅಸೈಗೋಳಿ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.