Tragic Incident
ಬೆಳ್ತಂಗಡಿ : ಧರ್ಮಸ್ಥಳದ ಜೋಡುಸ್ಥಾನದ ಬಳಿಯ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಜೋಡುಸ್ಥಾನ ನಿತ್ಯನೂತನ ಭಜನಾ ಮಂದಿರದ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಮನೆಯ ಕೋಣೆಯಲ್ಲಿ ರಕ್ಷಿತಾ ಜೈನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮೃತರು ತಂದೆ ವೀರಚಂದ್ರ ಜೈನ್, ತಾಯಿ ಅರುಣಾ, ಪತಿ ಸಂತೋಷ್ ಜೈನ್ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.
ಬೆಳ್ತಂಗಡಿ : ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಲಾಯಿಲದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಮೃತ ದುರ್ದೈವಿಯನ್ನು ಬಳಂಜ ನಿವಾಸಿ, ನಡ ಗ್ರಾಮ ಕರಣಿಕರ ಕಚೇರಿ ಸಹಾಯಕ ಜಯರಾಜ್(50) ಗುರುತಿಸಲಾಗಿದೆ.
ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ತಂಗಡಿ ಕಡೆಯಿಂದ ನಡಕ್ಕೆ ತೆರಳುತ್ತಿದ್ದ ಬೈಕ್ ಮಧ್ಯೆ ಪುತ್ರಬೈಲು ಎಂಬಲ್ಲಿ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ತ್ರೀವ ಗಾಯಗೊಂಡಿದ್ದ ಜಯರಾಜ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಂಪೌಂಡ್ ಕುಸಿದು ಮನೆಗೆ ಹಾನಿ – ಮಣ್ಣಿನಡಿ ಸಿಲುಕಿದ ಮಕ್ಕಳು; ಮದನಿನಗರ ದುರಂತದ ಬೆನ್ನಲ್ಲೇ ಮತ್ತೊಂದು ಘಟನೆ
ಪುತ್ತೂರು : ದ.ಕ.ಜಿಲ್ಲೆಯ ಕುತ್ತಾರು ಮದನಿನಗರದಲ್ಲಿ ನಿನ್ನೆ ಕಂಪೌಂಡ್ ಕುಸಿದು ಮನೆಯ ಮೇಲೆಯೇ ಬಿದ್ದು ನಾಲ್ವರು ಮೃತಪಟ್ಟ ಘಟನೆಯ ನೆನಪು ಮರೆಯುವ ಮುನ್ನವೇ ಪುತ್ತೂರಿನಲ್ಲಿ ಮನೆ ಮೇಲೆಯೇ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ.

ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿ ಎಂಬಲ್ಲಿನ ಮಜೀದ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಜೂನ್ 27ರ ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆಯ ಮೇಲೆ ತಡೆಗೋಡೆ ಕುಸಿದು ಬಿದ್ದಿದೆ. ತಡೆಗೋಡೆ ಕುಸಿದ ಪರಿಣಾಮ ಮನೆಯ ಅರ್ಧಭಾಗ ಕುಸಿದು ಮಜೀದ್ ಹಾಗೂ ಇಬ್ಬರು ಮಲಗಿದ್ದ ಕೊಠಡಿ ಮೇಲೆಯೇ ಬಿದ್ದಿದೆ.
ತಕ್ಷಣ ಎಚ್ಚೆತ್ತ ಮಜೀದ್ ಅವರು ಮಣ್ಣಿನಡಿ ಸಿಲುಕಿದ್ದ ಮಕ್ಕಳಿಬ್ಬರನ್ನು ಪಾರು ಮಾಡಿದ್ದಾರೆ. ಆದ್ದರಿಂದ ಬಹುದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆದಿದೆ.
ಮಂಗಳೂರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ನಾಲ್ವರು ಸಾವನ್ನಪ್ಪಿದ ಘಟನೆ ನಡೆದಿದೆ.

ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದ ಕಾರಣ ಈ ಘಟನೆ ಸಂಭವಿಸಿದೆ.
ಇದರಿಂದ ಯಾಸಿರ್ ಎಂಬವರ ಮನೆಯ ಗೋಡೆಗೆ ಬಿದ್ದು, ಮನೆಯ ಗೋಡೆ ಕುಸಿತ ಆಗಿದೆ. ಮನೆಯೊಳಗೆ ವಾಸ್ತವ್ಯ ವಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟಿದ್ದಾರೆ.
ಮೂವರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಬಾಲಕಿ ಮೃತದೇಹಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ.
ಬಂಟ್ವಾಳ : ಬಿ.ಸಿ.ರೋಡ್ ಕೈಕಂಬ ನಿವಾಸಿಯೋರ್ವರು ಕಳೆದ 2 ದಿನದಿಂದ ನಾಪತ್ತೆಯಾಗಿದ್ದು ಬಿ.ಸಿ. ರೋಡ್ ತಲಪಾಡಿ ಮೆಸ್ಕಾಂ ಸಬ್ ಸ್ಟೇಷನ್ ಬಳಿ ನದಿಯಲ್ಲಿ ಶವವಾಗಿ ಇಂದು ಸಂಜೆ ಪತ್ತೆಯಾಗಿದ್ದಾರೆ.
ಅಬ್ದುಲ್ ಕರೀಂ (61) ಎಂಬ ವ್ಯಕ್ತಿಯು ಬಕ್ರೀದ್ ದಿವಸ ಸಂಜೆ ಮನೆಯಿಂದ ಹೊರ ಹೋದವರು ಕಾಣೆಯಾಗಿದ್ದರು.
ಇದೀಗ ಅಬ್ದುಲ್ ಕರೀಂ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಯೋ, ಆಕಸ್ಮಿಕವಾಗಿ ನದಿಗೆ ಜಾರಿ ಬಿದ್ದಿದ್ದೋ ಇನ್ನಷ್ಟೇ ತಿಳಿಯಬೇಕಿದೆ. ಮೃತ ದೇಹ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.
ಮಂಗಳೂರು : ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ತಗುಲಿ ಕಾರ್ಮಿಕ ಮೃತಪಟ್ಟ ಘಟನೆ ಸೋಮವಾರ ಸುಳ್ಯ ತಾಲೂಕಿನ ಅಲೆಕ್ಕಾಡಿ ಸಮೀಪದ ಪಾರ್ಲ ಎಂಬಲ್ಲಿ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಕೃಷ್ಣಪ್ಪ ಗೌಡ ಎಂಬವರ ಪುತ್ರ ಪ್ರಕಾಶ (29) ಮೃತರು. ಕಡಬ ಮೂಲಕ ಸಂಸ್ಥೆಯ ವತಿಯಿಂದ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಅಲೆಕ್ಕಾಡಿಯ ಪಾರ್ಲ ಎಂಬಲ್ಲಿ ಕಾರ್ಮಿಕರು ಮೆಸ್ಕಾಂ ಪಂಜ ಸೆಕ್ಷನ್ ವ್ಯಾಪ್ತಿಯ ವಿದ್ಯುತ್ ಲೈನ್ ದುರಸ್ತಿ ಕೆಲಸ ಸೋಮವಾರ ಬೆಳಗ್ಗೆ ನಿರ್ವಹಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದ ಪ್ರಕಾಶ್ ಕಿರುಚಾಡಿದ್ದು, ಕಾರ್ಮಿಕರು ಬಂದು ನೋಡುವ ವೇಳೆ ಅವರು ಕಂಬದಲ್ಲೇ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸ್ಥಳದಲ್ಲಿದ್ದವರು ಕಂಬ ಹತ್ತಿ ಕೆಳಗಿಸಿಳಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಕಾಶ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದುಕೊಂಡ ಹೋದ ವೇಳೆ ಮೃತಪಟ್ಟಿರುವುದು ದೃಢಪಟ್ಟಿದೆ. ವಿದ್ಯುತ್ ಪ್ರವಹಿಸಿ ಅಥವಾ ಇನ್ಯಾವುದೋ ಕಾರಣದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಮನನೊಂದ ವ್ಯಕ್ತಿಯೊಬ್ಬರು ಮನೆಯ ಬಾವಿಯ ರಾಟೆ ಅಳವಡಿಸುವ ಪೈಪಿಗೆ, ಲುಂಗಿಯಿಂದ ನೇಣುಬಿಗಿದುಕೊಂಡು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ರಾತ್ರಿ ಗುಂಡಿಬೈಲಿನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಗುಂಡಿಬೈಲು ಮಾದವ ಪೂಜಾರಿ (58ವ) ಎಂದು ಗುರುತಿಸಲಾಗಿದೆ.
ಮಾದವ ಪೂಜಾರಿಯವರು ಮರದ ಮಿಲ್ಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ.
ನಗರ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳದಲ್ಲಿಗೆ ಬಂದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ಶವ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ಸಹಕರಿಸಿದರು.
ಉಡುಪಿ : ಚಲಿಸುತ್ತಿದ್ದ ಶಾಲಾ ಬಸ್ನಲ್ಲೇ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖಾಸಗಿ ಶಾಲಾ ಬಸ್ ಚಾಲಕ ಇಂದು ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಮೃತ ಶಾಲಾ ಬಸ್ ಚಾಲಕನನ್ನು ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಎಂದು ಗುರುತಿಸಲಾಗಿದೆ.
ಆಲ್ವಿನ್ ಡಿ’ಸೋಜಾ ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರಿಗೆ ಲಘು ಹೃದಯಾಘಾತವಾಗಿತ್ತು. ಅವರು ಇಂದು ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿ : ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮಕರಣಿಕರಾಗಿ ಸೇವೆ ಉಪ ತಹಸೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಮೃತ ದುರ್ದೈವಿಯನ್ನು ಸುನೀಲ್ (42) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಾಹಕರಾಗಿ ಸೇವೆ ಸಲ್ಲಿಸಿದ ಇವರು ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಪ್ರಸ್ತುತ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.