ಉಡುಪಿ : ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ಐಪಿಎಲ್ ಮ್ಯಾಚ್ ಬೆಟ್ಟಿಂಗ್ಗಾಗಿ ಹಣ ಸಂಗ್ರಹಿಸುತ್ತಿದ್ದ ಸಂದೀಪ್ (34), ಶ್ರೀರಾಜ್ (33), ಮಧುಕರ್ (44) ಎಂಬವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಆರೋಪಿಗಳು ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ಮೊಬೈಲ್ ಆ್ಯಪ್ ಸಹಾಯದಿಂದ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿದಾಗ ಆರೋಪಿಗಳು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಆರೋಪಿಗಳು ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಅವರವರ ತಂಡವನ್ನು ತಿಳಿಸಿ ಅವರಿಂದ ಹಣವನ್ನು ಸಂಗ್ರಹ ಮಾಡುತ್ತಿದ್ದರು. ಸಾರ್ವಜನಿಕರಿಂದ ಆಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಬಗ್ಗೆ ಸಂಗ್ರಹ ಮಾಡಿದ 81,700 ರೂ. ನಗದು ಹಾಗೂ 4 ಮೊಬೈಲ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಕಾರನ್ನು ವಶಡಿಸಿಕೊಳ್ಳಲಾಗಿದೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









