Udupi District

ಪ್ರಧಾನಿ ಕಾರ್ಯಾಲಯದ ಅಧಿಕಾರಿ ಹೆಸರಿನಲ್ಲಿ ಶ್ರೀಕೃಷ್ಣ ಮಠಕ್ಕೆ ವಂಚನೆ – ದೂರು ದಾಖಲು

ಉಡುಪಿ : ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನಗೈದ ವ್ಯಕ್ತಿಯ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ಟೋಬರ್ 9ರಂದು ಉದಯ್‌ ಎನ್ನುವಾತ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ…

Read more

ಆಸ್ಪತ್ರೆ ಸಿಬ್ಬಂದಿಗಳಲ್ಲಿ ಒತ್ತಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ

ಉಡುಪಿ : ಉಡುಪಿ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ, ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಮತ್ತು ಇಂಡಿಯನ್ ಸೈಕ್ಯಾಟ್ರಿಕ್ ಸೊಸೈಟಿ ಕರ್ನಾಟಕ ಚಾಪ್ಟರ್ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ…

Read more

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ನಿರ್ಲಕ್ಷ್ಯ, ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು – ಉಡುಪಿ ಡಿಸಿ

ಉಡುಪಿ : ಕರಾವಳಿ ಬೈಪಾಸ್‌ನಿಂದ ಮಣಿಪಾಲ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ 169‌ಎ ಯ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ತೀರಾ ನಿರ್ಲಕ್ಷ್ಯ ವಹಿಸಿದ್ದು, ಇದರಿಂದ ಸಂಭವಿಸಿದ ಅಪಘಾತಗಳಿಂದ ಅನೇಕ ಸಾವು-ನೋವುಗಳಿಗೆ ಕಾರಣರಾಗಿರುವ ಕಾಮಗಾರಿಯ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಸೇರಿದಂತೆ…

Read more

ಯುವ ಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು : ವಾರ್ತಾಧಿಕಾರಿ ಮಂಜುನಾಥ್ ಬಿ

ಉಡುಪಿ : ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್.ಎಸ್.ಎಸ್ ನಂತಹ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಕರೆ ನೀಡಿದರು. ಅವರು ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ…

Read more

ಏಕಕಾಲದಲ್ಲಿ 101 ಮಂದಿ ಕಲಾವಿದರಿಂದ ಸಾಮೂಹಿಕ ವೀಣಾ ವಾದನ

ಉಡುಪಿ : ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವದಲ್ಲಿ, ಅಪರೂಪದ ಕಾರ್ಯಕ್ರಮ ನಡೆಯಿತು. ಏಕಕಾಲದಲ್ಲಿ 101 ಮಂದಿ ಕಲಾವಿದರು ಸಾಮೂಹಿಕವಾಗಿ ವೀಣೆ ನುಡಿಸುವ ಮೂಲಕ ಕೇಳುಗರನ್ನು ರೋಮಾಂಚನಗೊಳಿಸಿದರು. ದೇವರಸ್ತುತಿಗಳನ್ನು ಶೃತಿಬದ್ಧವಾಗಿ ಕೇಳುವ ಅಪೂರ್ವ ಅವಕಾಶ ಭಕ್ತರಿಗೆ ಸಿಕ್ಕಿತು.…

Read more

ರಸ್ತೆ ದಾಟುತ್ತಿದ್ದ ಪತಿ ಪತ್ನಿಗೆ ಖಾಸಗಿ ಬಸ್ ಡಿಕ್ಕಿ – ಪತಿ ಸ್ಥಳದಲ್ಲೇ ಸಾವು, ಪತ್ನಿಗೆ ಗಂಭೀರ ಗಾಯ

ಪಡುಬಿದ್ರಿ : ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪತಿ-ಪತ್ನಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪತಿ ಸ್ಥಳದಲ್ಲೇ ಮೃತಪಟ್ಟು, ಪತ್ನಿ ತೀವ್ರವಾಗಿ ಗಾಯಗೊಂಡ ಘಟನೆ ಮೂಳೂರು ಮಿರ್ಚಿ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಕಾಪು ಭಾರತ್…

Read more

ಮಲ್ಪೆ ಬಂದರಿನಲ್ಲಿ ಬಾಲಕಾರ್ಮಿಕರ ಚಟುವಟಿಕೆಗೆ ಕಡಿವಾಣ ಹಾಕುವಂತೆ ಉಡುಪಿ ಡಿಸಿ ಸೂಚನೆ

ಉಡುಪಿ : ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ 14 ವರ್ಷದೊಳಗಿನ ಬಾಲ ಕಾರ್ಮಿಕರು ಮೀನು ಹೆಕ್ಕುವುದು ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ತಕ್ಷಣವೇ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸಂಬಂಧಿತ…

Read more

ದೆಂದೂರುಕಟ್ಟೆ – ನೇಣು ಬಿಗಿದು ಯುವಕ ಆತ್ಮಹತ್ಯೆ

ಕಾಪು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರು ದೆಂದೂರುಕಟ್ಟೆ‌ಯಲ್ಲಿ ನಡೆದಿದೆ. ನೇಣಿಗೆ ಶರಣಾದ ಯುವಕ ಸಂತೋಷ್ ಆಚಾರ್ಯ (39) ಎಂದು ಗುರುತಿಸಲಾಗಿದೆ. ಈತ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಪಕ್ಕಾಸಿಗೆ ನೇಣುಬಿಗಿದು‌ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ…

Read more

ಕಾರಿನ ಬ್ರೇಕ್ ಫೇಲ್ ಆಗಿ ಡಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಮಣಿಪಾಲ : ಕಾರು ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿಯಲ್ಲಿ ಬುಧವಾರ ಸಂಭವಿಸಿದೆ. ಮೃತ ದುರ್ದೈವಿ ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಇಂದ್ರಾಳಿ ದೇವಸ್ಥಾನದಿಂದ ಕಾರು ಕೆಳಗೆ ಬರುತ್ತಿದ್ದ ವೇಳೆ ಬ್ರೇಕ್ ಫೇಲ್…

Read more

ಟ್ರೇಡಿಂಗ್ ಹೆಸರಿನಲ್ಲಿ 16.78 ಲಕ್ಷ ರೂ. ಆನ್‌ಲೈನ್ ವಂಚನೆ – ಪ್ರಕರಣ ದಾಖಲು

ಉಡುಪಿ : ಷೇರು ಮಾರುಕಟ್ಟೆ ಟ್ರೇಡಿಂಗ್‌ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್‌ನಲ್ಲಿ ಮಾಹಿತಿಯನ್ನು ನೀಡುತ್ತಿದ್ದು, ಇದರಲ್ಲಿ ಹಣ…

Read more