ಉಡುಪಿ : ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಉಡುಪಿಯ ಅಂಚೆ ವಿಭಾಗದ ಅಧೀಕ್ಷಕ ರಮೇಶ್ ಪ್ರಭು, ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣರಾಜ ವಿಠ್ಠಲ ಭಟ್, ವಸಂತ ಹಾಗೂ ಉಪ ಅಂಚೆ ಪಾಲಕಿ ಪೂರ್ಣಿಮಾ ಜನಾರ್ದನ್, ಅಂಚೆ ಸಿಬ್ಬಂದಿ ಪ್ರಜ್ವಲ್ರವರು ಉಡುಪಿ ವಿಧಾನಸಭಾ ಶಾಸಕ ಯಶ್ಪಾಲ್ ಸುವರ್ಣರನ್ನು ಭೇಟಿಯಾಗಿ ಮುಖ್ಯಮಂತ್ರಿ, ಸಂಸ್ಕ್ರತಿ ಮತ್ತು ಪ್ರವಾಸೋದ್ಯಮ ಇಲಾಖೆ, ಭಾರತ ಸರಕಾರ ಇವರ ಪತ್ರವನ್ನು ಭಾರತೀಯ ಅಂಚೆ ಇಲಾಖೆಯಲ್ಲಿ ಲಭ್ಯವಿರುವ ತಿರಂಗಾ ರಾಷ್ಟ್ರಧ್ವಜದೊಂದಿಗೆ ಹಸ್ತಾಂತರಿಸಿದರು.
Udupi District
ಹೆಡ್ ಕಾನ್ಸ್ಟೇಬಲ್ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ
ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಬಿ. ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿದೆ. ಇವರು 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು.

ಈತನಕ ಪಣಂಬೂರು, ಪುತ್ತೂರು ನಗರ, ಉರ್ವ, ಉಡುಪಿ ನಗರ, ಕುಂದಾಪುರ, ಉಡುಪಿ ಟ್ರಾಫಿಕ್, ಉಡುಪಿ ಮಹಿಳಾ ಠಾಣೆ ಮತ್ತು ಹಿರಿಯಡ್ಕ ಠಾಣೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. 2022ರಲ್ಲಿ ಇವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದರು.
ಉಡುಪಿ ಜಿಲ್ಲಾ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಪಿ. ವಿ. ಆನಂದ ಸಾಲಿಗ್ರಾಮ ಆಯ್ಕೆ
ಉಡುಪಿ : ಉಡುಪಿ ಜಿಲ್ಲಾ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಹೆಬ್ರಿ ತಾಲೂಕಿನ ಮುದ್ರಾಡಿಯ ಎಂ ಎನ್ ಡಿ ಎಸ್ ಎಂ ಖಾಸಗಿ ಪ್ರೌಢಶಾಲೆ ಶಾಲೆಯ ಶಿಕ್ಷಕ, ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಖ್ಯಾತ ಯಕ್ಷಗಾನ ಪ್ರಸಂಗಕರ್ತ ಪಿ. ವಿ. ಆನಂದ ಸಾಲಿಗ್ರಾಮ ಆಯ್ಕೆಯಾಗಿದ್ದಾರೆ.
ಗೌರವ ಅಧ್ಯಕ್ಷರಾಗಿ ಕೊಂಡಳ್ಳಿ ಪ್ರಭಾಕರ ಶೆಟ್ಟಿ ವಿದ್ಯಾವರ್ಧಕ ಪ್ರೌಢಶಾಲೆ ಮುಂಡ್ಕೂರು ಕಾರ್ಕಳ, ಕಾರ್ಯದರ್ಶಿಯಾಗಿ ರಾಜೀವ್ ಪೂಜಾರಿ, ಸರಕಾರಿ ಪದವಿಪೂರ್ವ ಕಾಲೇಜು ತೆಕ್ಕಟ್ಟೆ ಕುಂದಾಪುರ, ಕೋಶಾಧಿಕಾರಿಯಾಗಿ ಸುಭಿಕ್ಷಾ, ಸರಕಾರಿ ಪ್ರೌಢಶಾಲೆ ಕಾವಡಿ, ಬ್ರಹ್ಮಾವರ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಪರ್ಣ ಬಾಯಿ ಕೆ. ಸರಕಾರಿ ಪ್ರೌಢಶಾಲೆ ಬೀಜಾಡಿ ಕುಂದಾಪುರ, ಮಂಜುನಾಥ್ ಕುಲಾಲ, ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ, ಸವಿತಾ ಜಿ. ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು, ಬೈಂದೂರು, ಕಾರ್ಕಳ ತಾಲೂಕು ಸಂಚಾಲಕರಾಗಿ ಜಾಲ್ಸೂರು ಗಣೇಶ್ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ ಕಾರ್ಕಳ, ಉಡುಪಿ ತಾಲೂಕು ಸಂಚಾಲಕರಾಗಿ ಗಣಪತಿ ಭಟ್, ಸರಕಾರಿ ಸಂಯುಕ್ತ ಪ್ರೌಢಶಾಲೆ, ಒಳಕಾಡು, ಬ್ರಹ್ಮಾವರ ತಾಲೂಕು ಸಂಚಾಲಕರಾಗಿ ಜ್ಯೋತಿ ಕೃಷ್ಣ ಪೂಜಾರಿ, ಸರಕಾರಿ ಪ್ರೌಢಶಾಲೆ ಕೋಡಿಕನ್ಯಾನ, ಕುಂದಾಪುರ ತಾಲೂಕು ಸಂಚಾಲಕರಾಗಿ ರಮೇಶ್ ಕುಲಾಲ ಎನ್. ಸರಕಾರಿ ಪ್ರೌಢಶಾಲೆ ಕೆದೂರು, ಹೆಬ್ರಿ ತಾಲೂಕು ಸಂಚಾಲಕರಾಗಿ ಮಹೇಶ್ ಹೈಕಾಡಿ, ಅಮೃತಭಾರತಿ ವಿದ್ಯಾಲಯ ಹೆಬ್ರಿ, ಬೈಂದೂರು ತಾಲೂಕು ಸಂಚಾಲಕರಾಗಿ ಗಣೇಶ್ ದೇವಾಡಿಗ, ಸರಕಾರಿ ಪ್ರೌಢಶಾಲೆ ಆಲೂರು, ಕಾಪು ತಾಲೂಕು ಸಂಚಾಲಕರಾಗಿ ಶಕುಂತಲಾ, ಪೂರ್ಣಪ್ರಜ್ಞಾ ಪ್ರೌಢ ಶಾಲೆ, ಅದಮಾರು ಆಯ್ಕೆಯಾದರು.
ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಆರೋಗ್ಯಪೂರ್ಣ ಬದುಕು : ಜಿಲ್ಲಾಧಿಕಾರಿ ವಿದ್ಯಾಕುಮಾರಿ
ಉಡುಪಿ : ಮಾದಕ ವಸ್ತುಗಳು ಸೇರಿದಂತೆ ಎಲ್ಲಾ ರೀತಿಯ ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಯುವಜನತೆ ಉತ್ತಮವಾದ ಆರೋಗ್ಯವನ್ನು ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಸೋಮವಾರ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ನಿರ್ದೇಶನದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್ ಕ್ರಾಸ್, ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಶಾಂತಿಗಾಗಿ ಜಿನೇವಾ ಒಪ್ಪಂದಗಳ ಸ್ಮರಣೆ ಮತ್ತು ನಶಾಮುಕ್ತ ಭಾರತ ಅಭಿಯಾನದ ಅಂಗವಾಗಿ ನಡೆದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ನಮ್ಮ ದೇಶದಲ್ಲಿ ಅಪಾರವಾದ ಯುವಶಕ್ತಿಯಿದೆ. ಆದರೆ ಯುವ ಶಕ್ತಿಯ ಸದ್ಬಳಕೆಗೆ ಮಾದಕ ವ್ಯಸನ ಒಂದು ಸವಾಲಾಗಿದೆ. ಇದರಿಂದ ಮಾದಕ ವ್ಯಸನದ ವಿರುದ್ಧದ ಆಂದೋಲನವನ್ನು ಪ್ರತಿಯೊಬ್ಬ ವ್ಯಕ್ತಿಯ ಅಂತರಂಗಕ್ಕೂ ಮುಟ್ಟಿಸಬೇಕಾಗಿದೆ. ಇದು ಈ ಅಭಿಯಾನದ ಮುಖ್ಯ ಉದ್ದೇಶ ಎಂದರು.
ಯುವ ಪೀಳಿಗೆಯು ದುಶ್ಚಟಗಳಿಗೆ ಒಳಗಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ನಶಾ ಮುಕ್ತ ಭಾರತ ಅಭಿಯಾನವನ್ನು ಹಮ್ಮಿಕೊಂಡಿದ್ದು, ಯುವಜನತೆ ಮಾದಕವಸ್ತುಗಳ ವ್ಯಸನದ ದುಷ್ಪರಿಣಾಮಗಳನ್ನು ಅರಿತು ಮಾದಕ ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಉಡುಪಿ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ನಗರದಲ್ಲಿ ಬೃಹತ್ ಮಾನವ ಸರಪಣಿ ನಡೆಸಲಾಯಿತು.
ಹಿಂದೂ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಮಾನವ ಸರಪಣಿ ಮೂಲಕ ಪ್ರತಿಭಟನೆ ದಾಖಲಿಸಲಾಯಿತು. ಮಾನವ ಸರಪಣಿ ನಿರ್ಮಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು, ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಅಂತರಾಷ್ಟ್ರೀಯ ಮೌನದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ಬಾಂಗ್ಲಾದಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ರಾಷ್ಟೀಯವಾದಿ ಭಾರತೀಯರು ಒಕ್ಕೊರಲಿನಿಂದ ಖಂಡಿಸಬೇಕು. ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ ಖಂಡನೀಯ ಎಂದು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. ಉಡುಪಿ-ಮಣಿಪಾಲ ರಸ್ತೆಯಲ್ಲಿ ನಡೆದ ಮಾನವ ಸರಪಣಿಯಲ್ಲಿ ಹಿಂದೂ ಸಂಘಟನೆಗಳ ಜೊತೆಗೆ ಬಿಜೆಪಿ ಕಾರ್ಯಕರ್ತರು ಭಾಗಿಯಾದರು. ಕೈಯಲ್ಲಿ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು.
ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ
ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್, ಮಟಪಾಡಿ ಬ್ರಹ್ಮಾವರ ಇವರ ಸಂಯೋಜನೆಯಲ್ಲಿ ನಡೆದ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆಹ್ವಾನಿತ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸಾಂಸ್ಕೃತಿಕ ಕಾರ್ಯಕ್ರಮವು ಚಪ್ಟೆಗಾರ್ ಸಭಾಭವನದಲ್ಲಿ ನಡೆಯಿತು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಐದು, ಪ್ರೌಢಶಾಲಾ ವಿಭಾಗದಲ್ಲಿ ಆರು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬ್ರಹ್ಮಾವರದ ನಿರ್ಮಲಾ ಪ್ರಾಥಮಿಕ ಶಾಲೆ (ಪ್ರಥಮ), ಬ್ರಹ್ಮಾವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ದ್ವಿತೀಯ) ಸ್ಥಾನ ಪಡೆಯಿತು. ಪ್ರೌಢ ಶಾಲಾ ವಿಭಾಗದಲ್ಲಿ ಬ್ರಹ್ಮಾವರದ ಶ್ರೀನಿಕೇತನ ಪ್ರೌಢಶಾಲೆ, ಮಟಪಾಡಿ (ಪ್ರಥಮ), ವಿ.ಕೆ.ಆರ್. ಆಚಾರ್ಯ ಪ್ರೌಢಶಾಲೆ ಕುಂಜಾಲು(ದ್ವಿತೀಯ) ಸ್ಥಾನ ಪಡೆಯಿತು.
ಸಮಾರೋಪ ಸಮಾರಂಭದಲ್ಲಿ ಬಿಎಸ್ಎನ್ಎಲ್ನ ನಿವೃತ್ತ ಮಹಾ ಪ್ರಬಂಧಕ ಚಂದ್ರಶೇಖರ ಕಲ್ಕೂರ ಅವರಿಗೆ ಗೌರವ ಸನ್ಮಾನ ನಡೆಸಲಾಯಿತು.
ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ಆನ್ಲೈನ್ ತರಬೇತಿ ಮತ್ತು ಕೌನ್ಸಿಲಿಂಗ್
ಉಡುಪಿ : ಐಐಟಿ ಮದ್ರಾಸ್ ಪ್ರವರ್ತಕ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 20 ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ತರಗತಿಗಳನ್ನ ನಡೆಸಿಕೊಡುವ ಯೋಜನೆ ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದೆ.
ಈ ತರಗತಿಗಳು ಆನ್ಲೈನ್ ಲೈವ್ ಮೂಲಕ ನಡೆಯಲಿದ್ದು ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಐಐಟಿಯಂತಹ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುವಂತಾಗಬೇಕು ಎನ್ನುವ ನಿಟ್ಟಿನಲ್ಲಿ ಈ ಯೋಜನೆ ಪ್ರಾರಂಭಿಸಿದ್ದೇನೆ ಎಂದು ಉದ್ಯಮಿ ಡಾ. ಎಚ್.ಎಸ್. ಶೆಟ್ಟಿ ಹೇಳಿದರು.
ಅವರು ಇದೆ ಆಗಸ್ಟ್ 15ರಂದು ಉಚ್ಚಿಲ ಮೊಗವೀರ ಭವನದಲ್ಲಿ 20 ವಿದ್ಯಾ ಸಂಸ್ಥೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸರಕಾರಿ ಹೈಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭವಾಗಲಿರುವ ಐ.ಐ.ಟಿ. ಮದ್ರಾಸ್ ಅವರ ಸಹಯೋಗದೊಂದಿಗೆ ಆನ್ಲೈನ್ ತರಬೇತಿ ಮತ್ತು ಕೌನ್ಸಿಲಿಂಗ್ ಉದ್ಘಾಟನಾ ಕಾರ್ಯಕ್ರಮದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಪ್ರಸಕ್ತ 2024-25ನೇ ಸಾಲಿನಲ್ಲಿ ಕರಾವಳಿಯ ಹಲವು ಜಿಲ್ಲೆಗಳಲ್ಲಿ ಐ.ಐ.ಟಿ. ಮದ್ರಾಸ್ ಅವರ ಸಹಯೋಗದೊಂದಿಗೆ ಆನ್ಲೈನ್ ತರಬೇತಿ ಮತ್ತು ಕೌನ್ಸಿಲಿಂಗ್ ಆಯೋಜಿಸಲಾಗಿದೆ.
ಉಡುಪಿ ಜಿಲ್ಲೆಯ ವಿವಿಧ ಸರಕಾರಿ ಹೈಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿ, ಇದನ್ನು ಕರಾವಳಿಯ ಎಲ್ಲಾ 150 ಹೈಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ವಿಸ್ತರಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ದಿ. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ನ ನಾಗರಾಜ್ ಶೆಟ್ಟಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಅಮೃತ ಸಂಭ್ರಮ ‘ಗ್ರಂಥಾಲಯ-75’ ಆ.16ರಂದು ಬೆಳಗ್ಗೆ 11ಗಂಟೆಗೆ ಉಡುಪಿ ಪತ್ರಿಕಾ ಭವನದಲ್ಲಿ ನಡೆಯಲಿದೆ.

ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ವೈ.ಸುದರ್ಶನ್ ರಾವ್ ಉದ್ಘಾಟಿಸಿದರು. ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪುಸ್ತಕ ಹಸ್ತಾಂತರಿಸಲಿರುವರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಕಾರ್ಯದರ್ಶಿ ಡಾ.ಗಣನಾಥ್ ಎಕ್ಕಾರ್, ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ : ಭದ್ರತಾ ಸಿಬ್ಬಂದಿಯೋರ್ವ ಮ್ಯಾನೇಜರ್ಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ಹರ್ಷ ಶೋರೂಮ್ನಲ್ಲಿ ಸಂಭವಿಸಿದೆ.

ಸಂತೆಕಟ್ಟೆಯ ರೋನ್ಸನ್ ಎವರೆಸ್ಟ್ ಡಿ’ಸೋಜಾ(36) ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಇವರು ಹರ್ಷ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದಾರೆ. ಕೆಲಸದ ವಿಚಾರಕ್ಕೆ ಸಂಬಂಧಿಸಿ ಆರೋಪಿ ಸೆಕ್ಯೂರಿಟಿ ಗಾರ್ಡ್ ಪ್ರಸಾದ್ ಹಾಗೂ ಮ್ಯಾನೇಜರ್ ರೋನ್ಸನ್ ಮಧ್ಯೆ ಜಗಳ ಉಂಟಾಗಿದೆ. ಆರೋಪಿ ಪ್ರಸಾದ್, ರೋನ್ಸನ್ ಅವರ ಕುತ್ತಿಗೆಗೆ ಇರಿದು ಅಲ್ಲಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ನೆರೆಯ ದೇಶ ಬಾಂಗ್ಲಾದಲ್ಲಿ ಇತ್ತೀಚಿಗೆ ರಾಜಕೀಯ ಕ್ಷಿಪ್ರ ಕ್ರಾಂತಿಯಾಗಿ ಅರಾಜಕತೆ ಸೃಷ್ಟಿಯಾಗಿದೆ. ಅಲ್ಲಿ ಅಲ್ಪ ಸಂಖ್ಯಾತರಾದ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ಹಾಗೂ ದಬ್ಬಾಳಿಕೆ ಮಾಡುತ್ತಿರುವುದನ್ನು ಮನಗಂಡ ಉಡುಪಿ ಜಿಲ್ಲಾ ಶ್ರೀರಾಮಸೇನೆಯು ಉಡುಪಿ ಜಿಲ್ಲೆಯಿಂದ ಬಾಂಗ್ಲಾ ವಲಸಿಗರು ಹಾಗೂ ರೋಹಿಂಗ್ಯಾರನ್ನು ಕೂಡಲೇ ಗಡಿಪಾರು ಮಾಡಬೇಕೆಂದು ಅಗ್ರಹಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರಿಗೆ ಮನವಿ ಮೂಲಕ ಅಗ್ರಹಿಸಿತು.
ಆಂತರಿಕ ಮೀಸಲಾತಿಯಿಂದ ಗಲಭೆಯಾಗಿ ಹಿಂದೂಗಳ ಮೇಲೆ ಅಮಾನುಷವಾಗಿ ದೌರ್ಜನ್ಯ ಎಸಗುತ್ತಿದ್ದಾರೆ. ಹಿಂದೂ ಮಂದಿರ, ದೇವಸ್ಥಾನ ಲೂಟಿ, ಹಿಂದೂಗಳ ಮನೆ ಮೇಲೆ ಆಕ್ರಮಣ, ಹಿಂದೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮುಂತಾದ ರಾಕ್ಷಶಿ ಕೃತ್ಯಗಳು ನಡೆಯುತ್ತಿದೆ.
1971ರಲ್ಲಿ ಬಾಂಗ್ಲಾ ದೇಶವಾದಾಗ 21% ಹಿಂದುಗಳು ಇದ್ದರು. ಈಗ ಇರುವ ಹಿಂದುಗಳು ಕೇವಲ 1% ಮಾತ್ರ. ಅವರು ಭಯಬೀತರಾಗಿ ಕಂಗೆಟ್ಟಿದ್ದಾರೆ. ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ಮುಸ್ಲಿಂ ಹಾಗೂ ಬರ್ಮ ರೋಹಿಂಗ್ಯಾ ಮುಸ್ಲಿಮರು 10 ಲಕ್ಷಕ್ಕೂ ಅಧಿಕವಾಗಿ, ಅನಧಿಕೃತವಾಗಿ ನೆಲೆಸಿದ್ದಾರೆ. ಇವರನ್ನು ಶಿಕ್ಷಿಸುವುದು ಹಾಗೂ ರಾಜ್ಯ ಮತ್ತು ನಮ್ಮ ಜಿಲ್ಲೆಯಿಂದ ಹೊರಹಾಕುವುದು ಘನವೆತ್ತ ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿರುತ್ತದೆ. ಬಾಂಗ್ಲಾ ಮುಸ್ಲಿಂರು ಹಾಗೂ ರೋಹಿಂಗ್ಯಾಗಳು ಕಾನೂನು ಭಾಹಿರ ಚಟುವಟಿಕೆ ಅಲ್ಲದೇ ದೇಶದ ಭದ್ರತೆಗೆ ಕಂಟಕವಾಗಿದ್ದಾರೆ.
ಹಾಗಾಗಿ ಕೂಡಲೇ ದೇಶದ್ರೋಹಿ ನುಸುಳುಕೊರರಾದ ಬಾಂಗ್ಲಾ ಮುಸ್ಲಿಂ ಮತ್ತು ರೋಹಿಂಗ್ಯಾಗಳನ್ನು ನಮ್ಮ ಜಿಲ್ಲೆ ಹಾಗೂ ರಾಜ್ಯದಿಂದ ಗಡಿಪಾರು ಮಾಡಬೇಕು. ದೇಶದ ಆಂತರಿಕ ಸುರಕ್ಷತೆ ದೃಷ್ಟಿಯಿಂದ ಶ್ರೀರಾಮಸೇನೆಯ ಹೋರಾಟ ಉಗ್ರಸ್ವರೂಪ ಅನಿವಾರ್ಯವಾಗುತ್ತದೆ ಎಂದು ಉಡುಪಿ ಜಿಲ್ಲಾ ಶ್ರೀರಾಮಸೇನೆಯ ಮುಖಂಡರು ಅಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು, ಮುಖಂಡರಾದ ಸುದರ್ಶನ್ ಪೂಜಾರಿ, ಶರತ್ ಮಣಿಪಾಲ, ಸುಜಿತ್ ನಿಟ್ಟೂರು, ವಿಕ್ರಂ ಕುಂದರ್, ಸುದೀಪ್ ನಿಟ್ಟೂರು, ಅರುಣ್ ಕುರ್ಕಾಲು, ಮೋಹನ್ ಪೂಜಾರಿ ಕಾಪು, ಸುರೇಶ್ ಶೆಟ್ಟಿ ಶಿರ್ವ, ಸುಧೀರ್ ಅಂಬಲಪಾಡಿ, ರಾಘವೇಂದ್ರ ಮಣಿಪಾಲ, ರಮೇಶ್, ಪ್ರದೀಪ್ ಅಂಬಲಪಾಡಿ ಉಪಸ್ಥಿತರಿದ್ದರು.