ಉಡುಪಿ : 4 ದ್ವೀಪಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಸುರಕ್ಷತಾ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಉಡುಪಿ ಆಸುಪಾಸಿನ ಕಡಲ ತೀರದಲ್ಲಿರುವ ಬಾದರಗಢ ದ್ವೀಪ, ಮಿಡಲ್ ದ್ವೀಪ (ಕೋಟೆ), ಮಾಲ್ತೀಗುಡ್ಡ ದ್ವೀಪ ಹಾಗೂ ಮಟ್ಟುಪಾರ್ ದ್ವೀಪ ಎಂಬ ನಾಲ್ಕು ದ್ವೀಪಗಳಿಗೆ ಯಾವುದೇ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಸೈಂಟ್ ಮೇರಿಸ್ ದ್ವೀಪಕ್ಕೆ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.